ತಾಯಿಯ ಹೆಸರಿನಲ್ಲಿ ಗಿಡ ನೆಡಿ

KannadaprabhaNewsNetwork |  
Published : Jun 21, 2025, 12:49 AM IST
20ಎಚ್ಎಸ್ಎನ್7 :  | Kannada Prabha

ಸಾರಾಂಶ

ಪ್ರತಿಯೊಬ್ಬರು ತಮ್ಮ ತಾಯಿ ಹೆಸರಿನಲ್ಲಿ ಒಂದು ಗಿಡ ನೆಡುವುದರಿಂದ ವಿಶ್ವಸಂಸ್ಥೆ ಘೋಷಣೆ ಹಾಗೂ ಕೇಂದ್ರ ಸರ್ಕಾರದ ಆದೇಶದಂತೆ 2025ನ್ನು ಅಂತಾರಾಷ್ಟ್ರೀಯ ರಾಷ್ಟ್ರೀಯ ಸಹಕಾರ ವರ್ಷದ ಕಾರ್ಯಕ್ರಮಗಳನ್ನು ಯಶಸ್ವಿ ಗೊಳಿಸಬೇಕು ಎಂದು ಕಾಮಧೇನು ಸಹಕಾರಿ ವಿದ್ಯಾಶ್ರಮದ ಅಧ್ಯಕ್ಷ ಮಾಧವ ಶೆಣೈ ತಿಳಿಸಿದರು. ಪರಿಸರ ಸಂರಕ್ಷಣೆ ಎಲ್ಲರ ಹೊಣೆ ಮುಂದಿನ ಪೀಳಿಗೆಗಾಗಿ ಪರಿಸರ ರಕ್ಷಣೆ ಮಾಡಬೇಕು, ಪ್ರಕೃತಿದತ್ತವಾಗಿ ಬಂದ ಎಲ್ಲಾ ವಸ್ತುಗಳನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಂಡು ಉಳಿಸುವ ಕೆಲಸ ಮಾಡಬೇಕು ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಪ್ರತಿಯೊಬ್ಬರು ತಮ್ಮ ತಾಯಿ ಹೆಸರಿನಲ್ಲಿ ಒಂದು ಗಿಡ ನೆಡುವುದರಿಂದ ವಿಶ್ವಸಂಸ್ಥೆ ಘೋಷಣೆ ಹಾಗೂ ಕೇಂದ್ರ ಸರ್ಕಾರದ ಆದೇಶದಂತೆ 2025ನ್ನು ಅಂತಾರಾಷ್ಟ್ರೀಯ ರಾಷ್ಟ್ರೀಯ ಸಹಕಾರ ವರ್ಷದ ಕಾರ್ಯಕ್ರಮಗಳನ್ನು ಯಶಸ್ವಿ ಗೊಳಿಸಬೇಕು ಎಂದು ಕಾಮಧೇನು ಸಹಕಾರಿ ವಿದ್ಯಾಶ್ರಮದ ಅಧ್ಯಕ್ಷ ಮಾಧವ ಶೆಣೈ ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು, ಹಾಸನ ಜಿಲ್ಲಾ ಸಹಕಾರ ಒಕ್ಕಟ ನಿ., ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಹಾಸನ ಸಹಕಾರ ಹಾಲು ಒಕ್ಕೂಟ, ಕಾಮಧೇನು ಸಹಕಾರ ವಿ ಶ್ರಮ ನಿ.. ಮತ್ತು ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷ 2025 ಕುರಿತಂತೆ ವಿಶ್ವಸಂಸ್ಥೆ ಮತ್ತು ಕೇಂದ್ರ ಸರ್ಕಾರದ ಆದೇಶದ ರೀತ್ಯಾ ನಗರದ ಹೊರವಲಯದ ಕಾಮಧೇನು ಸಹಕಾರ ವಿದ್ಯಾಶ್ರಮದ ಆವರಣದಲ್ಲಿ ಇಂದು “ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು " ಎಂಥ ಧ್ಯೇಯದೊಂದಿಗೆ "ಏಕ್ ಪೇಡ್ ಮಾಕಿ ನಾ ಮೇ "ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಪರಿಸರ ಸಂರಕ್ಷಣೆ ಎಲ್ಲರ ಹೊಣೆ ಮುಂದಿನ ಪೀಳಿಗೆಗಾಗಿ ಪರಿಸರ ರಕ್ಷಣೆ ಮಾಡಬೇಕು, ಪ್ರಕೃತಿದತ್ತವಾಗಿ ಬಂದ ಎಲ್ಲಾ ವಸ್ತುಗಳನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಂಡು ಉಳಿಸುವ ಕೆಲಸ ಮಾಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಹಾಸನ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಸ್.ಎನ್ ಪ್ರಕಾಶ್ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಈ ದಿಸೆಯಲ್ಲಿ ಈ ದಿನ ಆಶ್ರಮದಲ್ಲಿ ನೆಡುವ ಗಿಡಗಳನ್ನು ರಕ್ಷಿಸಬೇಕು ಮತ್ತು ದಿನೇ ದಿನೇ ಗಿಡಗಳ ಸಂಖ್ಯೆ ಹೆಚ್ಚಾಗಿ ಪರಿಶುದ್ಧ ಗಾಳಿ ದೊರೆಯುಬಂತಾಗಬೇಕೆಂದರು. ಪ್ರತಿಯೊಬ್ಬರು ತಮ್ಮ ತಮ್ಮ ತಾಯಿ ಹೆಸರಿನಲ್ಲಿ ಕನಿಷ್ಟ ಒಂದು ಗಿಡವನ್ನಾದರೂ ಹಾಕುವುದರೊಂದಿಗೆ ಪರಿಸರ ಮತೋಲನದಲ್ಲಿ ಇರಲು ಸಹಕರಿಸಬೇಕೆಂದರು. ಸಹಕಾರಿಗಳೆಲ್ಲರೂ ಒಗ್ಗೂಡಿ ಅಂತಾರಾಷ್ಟ್ರೀಯ ಸಹಕಾರ ವರ್ಷದ ಪ್ರಯುಕ್ತ ಹಮ್ಮಿಕೊಂಡಿರುವ ಕಾರ್ಯಕ್ರಮಗಳಿಗೆ ಸಹಕಾರಿಗಳೆಲ್ಲರೂ ಸಹಕರಿಸಬೇಕು. ಇಲ್ಲವಾದರೆ ಮುಂದಿನ ಪೀಳಿಗೆಗೆ ಬದುಕಲು ಕಷ್ಟವಾಗುತ್ತದೆ ಎಂದರು.ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕರಾದ ವಿ.ಎನ್. ರಾಜಣ್ಣ, ಸಹಕಾರ ಸಂಘಗಳ ಉಪನಿಬಂಧಕ ಕೆ.ಕೆ. ಕಿರಣ್‌ ಕುಮಾರ್‌, ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಡಿ.ಬಿ. ಸೋಮೇಗೌಡ, ನಿರ್ದೇಶಕರಾದ, ನಾಗರಾಜು, ಪದ್ಮರಾಜು, ಪ್ರವೀಣ್ ಹಾಸನ ಉಪವಿಭಾದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಬಾಲಚಂದ್ರ, ಹಾಸನ ಸಹಕಾರ ಹಾಲು ಒಕ್ಕೂಟದ ಪ್ರಧಾನ ವ್ಯವಸ್ಥಾಪಕ ರೂಪೇಶ್‌ ಕುಮಾರ್, ಕಾಮಧೇನು ಸಹಕಾರ ವಿದ್ಯಾಶ್ರಮದ ಆಡಳಿತ ಮಂಡಳಿ ಸದಸ್ಯರು, ಆಶ್ರಮ ವಾಸಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ