ಜೂನ್ ೩೦ರೊಳಗೆ ಕನಿಷ್ಟ ೬೦ ಸಾವಿರ ಸಸಿಗಳನ್ನು ನೆಡುವ ಗುರಿಕನ್ನಡಪ್ರಭ ವಾರ್ತೆ ಸಂಡೂರುವರ್ಷದಿಂದ ವರ್ಷಕ್ಕೆ ಬಿಸಿಲಿನ ತಾಪ ಹೆಚ್ಚುತ್ತಿರುವುದರಿಂದ ಪ್ರತಿಯೊಬ್ಬರೂ ತಮ್ಮ ಹೊಲಗದ್ದೆಗಳ ಬದುಗಳಲ್ಲಿ, ಮನೆಯ ಮುಂದೆ ಗಿಡ ಮರಗಳನ್ನು ಬೆಳೆಸುವ ಮೂಲಕ ಬಿಸಿಲಿನ ತಾಪವನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕಿದೆ ಎಂದು ಶಾಸಕಿ ಈ. ಅನ್ನಪೂರ್ಣ ತುಕಾರಾಂ ಅಭಿಪ್ರಾಯಪಟ್ಟರು.ತಾಲೂಕಿನ ನಿಡಗುರ್ತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ನೀರೆರೆಯುವ ಮೂಲಕ ಚಾಲನೆ ನೀಡಿ, ಬುಧವಾರ ಬೆಂಗಳೂರಿನಲ್ಲಿ ನಡೆದ ಕ್ರಿಕೆಟ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟವರಿಗೆ ಸಂತಾಪವನ್ನು ಸೂಚಿಸಿ ಅವರು ಮಾತನಾಡಿದರು.
ತಹಶೀಲ್ದಾರ್ ಜಿ. ಅನಿಲ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಕಾಧಿಕಾರಿ ಮಡಗಿನ ಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ, ಸಹಾಯಕ ಕೃಷಿ ನಿರ್ದೇಶಕ ಮಂಜುನಾಥರೆಡ್ಡಿ, ಸಹಾಯಕ ತೋಟಗಾರಿಕೆ ನಿರ್ದೇಶಕ ಹನುಮಪ್ಪ ನಾಯಕ್, ವಲಯ ಅರಣ್ಯಾಧಿಕಾರಿಗಳಾದ ದಾದಾ ಖಲಂದರ್, ಬಾಷ ಮಹಮ್ಮದ್, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ರೇಣುಕಾಚಾರ್ಯಸ್ವಾಮಿ, ಎಚ್. ಮಹೇಶ್, ಗ್ರಾಪಂ ಅಧ್ಯಕ್ಷೆ ಕಾಳಮ್ಮ, ಉಪಾಧ್ಯಕ್ಷರು, ಸದಸ್ಯರು, ಪಿಡಿಒ ಜಿಲಾನ್ ಬಾಷ, ಎಸ್‌ಡಿಎ ಶ್ರೀಲಕ್ಷ್ಮೀಪತಿ, ಮನರೇಗಾ ಸಿಬ್ಬಂದಿ, ಎನ್‌ಆರ್‌ಎಲ್‌ಎಂ ಸಂಜೀವಿನ ಒಕ್ಕೂಟದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಡಿಇಓ, ಬಿಎಫ್‌ಟಿ, ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.