ತಾಲೂಕಿನ ಕನ್ನುಘಟ್ಟ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ ಅರಣ್ಯ ಕಾರ್ಯಕ್ರಮದಡಿ ಯೋಜನೆಯ ಸದಸ್ಯರಿಗೆ ವಿವಿಧ ಗಿಡಗಳನ್ನು ವಿತರಿಸಿ, ನಾಟಿ ಮಾಡಲಾಯಿತು.
ತಿಪಟೂರು: ತಾಲೂಕಿನ ಕನ್ನುಘಟ್ಟ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ ಅರಣ್ಯ ಕಾರ್ಯಕ್ರಮದಡಿ ಯೋಜನೆಯ ಸದಸ್ಯರಿಗೆ ವಿವಿಧ ಗಿಡಗಳನ್ನು ವಿತರಿಸಿ, ನಾಟಿ ಮಾಡಲಾಯಿತು.
ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಚಾಲನೆ ನೀಡಿ ಮಾತನಾಡಿ, ಧರ್ಮಸ್ಥಳ ಯೋಜನೆಯು ಕೇವಲ ಸಾಲ ನೀಡುವ ಸಂಸ್ಥೆಯಾಗದೆ ಹತ್ತಾರು ಸಾಮಾಜಿಕ ಕಳಕಳಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಬಡವರು, ನಿರ್ಗತಿಕರು, ನಿರಾಶ್ರಿತರ ಅಭ್ಯೂದಯಕ್ಕಾಗಿ ಶ್ರಮಿಸುತ್ತಿದೆ. ರಾಜ್ಯದಲ್ಲಿ ೮೦೦ ಕೆರೆಗಳ ಹೂಳು ತೆಗೆಯಲಾಗಿದ್ದು, ಜಿಲ್ಲೆಯಲ್ಲಿ ೬೦ ಕೆರೆಗಳ ಹೂಳೆತ್ತಲಾಗಿದೆ. ಪ್ರಾಣಿ- ಪಕ್ಷಿಗಳ, ಜನರ ಉಪಯೋಗಕ್ಕೆ ಹಾಗೂ ಕೃಷಿ ಬಳಕೆಗೆ ಬೋರ್‌ವೆಲ್ ರೀಚಾರ್ಜ್, ಪರಿಸರ ಸಂರಕ್ಷಣೆಗಾಗಿ ಗಿಡ ನಾಟಿ ಹೀಗೆ ಹಲವು ಕಾರ್ಯಕ್ರಮಗಳ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ ಎಂದರು.
ಗ್ರಾಮಾಂತರ ಯೋಜನಾಧಿಕಾರಿ ಸುರೇಶ್, ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮ, ಕೃಷಿ ಅಧಿಕಾರಿ, ಮೇಲ್ವಿಚಾಕರು, ಸೇವಾಪ್ರತಿನಿಧಿಗಳು ಹಾಗೂ ಗ್ರಾಮಸ್ಥರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.