ಕನ್ನಡಪ್ರಭ ವಾರ್ತೆ ಹನೂರು
ಬಳಿಕ ಅವರು ಮಾತನಾಡಿ, ಮುಂದಿನ ವಾರ ಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಲಕ್ಷಾಂತರ ಭಕ್ತರು ಪಾದಯಾತ್ರೆ ಮೂಲಕ ಬರುತ್ತಾರೆ. ಭಕ್ತರು ಅರಣ್ಯ ದಾರಿಯಲ್ಲಿ, ಬೆಟ್ಟದ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿ, ಆಹಾರ ಪೊಟ್ಟಣ ಸೇರಿದಂತೆ ಪ್ಲಾಸ್ಟಿಕ್ ವಸ್ತುಗಳನ್ನು ಎಸೆಯುತ್ತಿದ್ದು, ಇದರಿಂದ ಪರಿಸರಕ್ಕೆ ಮತ್ತು ಕಾಡು ಪ್ರಾಣಿಗಳಿಗೆ ತೊಂದರೆಯಾಗುತ್ತಿದೆ. ಇದನ್ನು ಸಂಪೂರ್ಣವಾಗಿ ತಡೆಗಟ್ಟಲು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ ಭಕ್ತಾದಿಗಳು ಸಹಕಾರ ನೀಡಬೇಕು ಎಂದರು.
ತಾಳುಬೆಟ್ಟದಲ್ಲಿಯೇ ಅರಣ್ಯ ಇಲಾಖೆಯ ಸಹಯೋಗದಲ್ಲಿ ತನಿಖಾ ಠಾಣೆ ತೆರಯಲಾಗಿದ್ದು ಭಕ್ತರಿಗೆ ಪ್ಲಾಸ್ಟಿಕ್ ಬಳಕೆಯ ಬಗ್ಗೆ ತಿಳಿಹೇಳುವುದರ ಜೊತೆಗೆ, ಅವರೊಂದಿಗೆ ಪ್ಲಾಸ್ಟಿಕ್ ವಸ್ತುಗಳಿವೆಯೇ ಎಂಬುದನ್ನು ತಪಾಸಣೆ ಮಾಡಿ ವಶಕ್ಕೆ ಪಡೆದು ನಂತರ ಶ್ರೀಕ್ಷೇತ್ರಕ್ಕೆ ಪ್ರವೇಶ ಮಾಡಲು ಅವಕಾಶ ಮಾಡಿಕೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್ ಪಾಟೀಲ್ ಅಮಿತ್ ಹಾಗೂ ಪ್ರಾಧಿಕಾರದ ಸಿಬ್ಬಂದಿ ಹಾಜರಿದ್ದರು.