ರೈತರಿಂದ ಪಿಎಲ್‌ಡಿ ಬ್ಯಾಂಕ್ ಉತ್ತಮ ಸ್ಥಿತಿಯಲ್ಲಿದೆ: ಮಾಡಾಳು ವಿರೂಪಾಕ್ಷಪ್ಪ

KannadaprabhaNewsNetwork |  
Published : Apr 03, 2025, 12:36 AM IST
ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ನ ನೂತನ ಅಧ್ಯಕ್ಷ ಅಧ್ಯಕ್ಷರಾಗಿ ಬಿ.ಎನ್.ಶೋಭಾಉಮೇಶ್ ಕುಮಾರ್, ಉಪಾಧ್ಯಕ್ಷರಾಗಿ ಪಿ.ದೊಡ್ಡಬಸಪ್ಪ ಇವರನ್ನು ಅಭಿನಂಧಿಸುತ್ತೀರುವ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ | Kannada Prabha

ಸಾರಾಂಶ

ಚನ್ನಗಿರಿ ತಾಲೂಕಿನಲ್ಲಿ ಇತಿಹಾಸ ಉಳ್ಳದಾಗಿರುವ ಪಿಎಲ್‌ಡಿ ಬ್ಯಾಂಕ್ ಈ ಹಿಂದೆ ರೈತರಿಗೆ ಸಾಲ ಸೌಲಭ್ಯವನ್ನು ನೀಡುತ್ತಿತ್ತು. ರೈತರು ಸಾಲ ಪಡೆಯುತ್ತ ಈ ಬ್ಯಾಂಕಿನ ಪ್ರಯೋಜನವನ್ನು ಪಡೆಯುತ್ತಿದ್ದ ಕಾರಣ ಉತ್ತಮ ಸ್ಥಿತಿಯಲ್ಲಿ ಮುನ್ನಡೆಯುತ್ತಿದೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದರು.

ನೂತನ ಅಧ್ಯಕ್ಷರಿಗೆ ಅಭಿನಂದನಾ ಸಮಾರಂಭ

ಕನ್ನಡಪ್ರಭ ವಾರ್ತೆ ಚನ್ನಗಿರಿ

ಚನ್ನಗಿರಿ ತಾಲೂಕಿನಲ್ಲಿ ಇತಿಹಾಸ ಉಳ್ಳದಾಗಿರುವ ಪಿಎಲ್‌ಡಿ ಬ್ಯಾಂಕ್ ಈ ಹಿಂದೆ ರೈತರಿಗೆ ಸಾಲ ಸೌಲಭ್ಯವನ್ನು ನೀಡುತ್ತಿತ್ತು. ರೈತರು ಸಾಲ ಪಡೆಯುತ್ತ ಈ ಬ್ಯಾಂಕಿನ ಪ್ರಯೋಜನವನ್ನು ಪಡೆಯುತ್ತಿದ್ದ ಕಾರಣ ಉತ್ತಮ ಸ್ಥಿತಿಯಲ್ಲಿ ಮುನ್ನಡೆಯುತ್ತಿದೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದರು.

ನಗರದಲ್ಲಿ ಬುಧುವಾರ ಪಟ್ಟಣದಲ್ಲಿರುವ ಪಿಎಲ್‌ಡಿ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಬಿ.ಎನ್.ಶೋಭ ಉಮೇಶ್ ಕುಮಾರ್, ಉಪಾಧ್ಯಕ್ಷರಾಗಿ ಪಿ.ದೊಡ್ಡಬಸಪ್ಪ ಅವಿರೋಧವಾಗಿ ಆಯ್ಕೆಯಾದ ನಂತರ ನಡೆದ ಅಭಿನಂಧನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಬ್ಯಾಂಕ್ ನ ಆರಂಭದಲ್ಲಿ ಹಿರಿಯರಾದ ಪಾಂಡೋಮಟ್ಟಿ ಚನ್ನಬಸಪ್ಪ, ಬಿಳಿಯಪ್ಪಗೌಡರು, ಡಾ.ಎ.ಬಸವಣ್ಣಯ್ಯ ಇಂತಹ ಹಿರಿಯರು ಆಧ್ಯಕ್ಷರಾಗಿ ಸೇವೆ ಸಲ್ಲಿಸಿ ಬ್ಯಾಂಕ್ ಪ್ರಗತಿಗಾಗಿ ಶ್ರಮಿಸಿದವರು ಎಂದು ತಿಳಿಸುತ್ತಾ ಹಳೇ ಬೇರು-ಹೊಸಚಿಗುರು ಒಂದಾಗಿ ಬ್ಯಾಂಕನ್ನು ಪ್ರಗತಿದಾಯಕವಾಗಿ ಮುನ್ನಡೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ನೂತನವಾಗಿ ಆಯ್ಕೆಗೊಂಡಿರುವ ಅಧ್ಯಕ್ಷರು, ಉಪಾಧ್ಯಕ್ಷರುಗಳು ತಾಲೂಕಿನ ರೈತರುಗಳ ಶ್ರೇಯೋಭಿವೃದ್ದಿಗಾಗಿ ಶ್ರಮಿಸಬೇಕೆಂದು ಹೇಳುತ್ತ ನೂತನವಾಗಿ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದಿಸಿದರು.

ಬ್ಯಾಂಕಿನ ನೂತನ ಅಧ್ಯಕ್ಷೆ ಶೋಭಾ ಉಮೇಶ್ ಕುಮಾರ್ ಮಾತನಾಡಿ, ಬ್ಯಾಂಕ್ ನ ಆಡಳಿತದಲ್ಲಿ ಯಾವುದೇ ತಾರತಮ್ಯಗಳನ್ನು ಮಾಡದೆ ಬ್ಯಾಂಕಿನ ಪ್ರಗತಿಗೆ ಶ್ರಮ ವಹಿಸುತ್ತೇನೆ ಎಂದರು.

ಸಮಾರಂಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಪಾಂಡೋಮಟ್ಟಿ ಲೋಕಣ್ಣ, ಶಿವಕುಮಾರ್ ಮಾತನಾಡಿದರು.

ಸಭೆಯಲ್ಲಿ ಉಪಾಧ್ಯಕ್ಷ ಪಿ.ದೊಡ್ಡಬಸಪ್ಪ, ತಾಲೂಕು ಬಿಜೆಪಿ ಪಕ್ಷದ ಅಧ್ಯಕ್ಷ ಮಲಹಾಳ್ ಕುಮಾರಸ್ವಾಮಿ, ಬ್ಯಾಂಕ್ ನ ಮಾಜಿ ಅಧ್ಯಕ್ಷ ಗಂಗಗೊಂಡನಹಳ್ಳಿ ಜಗದೀಶ್, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ದಿಗ್ಗೇನಹಳ್ಳಿ ನಾಗರಾಜ್, ತಾಪಂ ಮಾಜಿ ಅಧ್ಯಕ್ಷ ಎ.ಎಸ್.ಬಸವರಾಜಪ್ಪ, ಸಂತೆಬೆನ್ನೂರು ಬಸವರಾಜ್, ಮಾಚನಾಯ್ಕನಹಳ್ಳಿ ಪುನೀತ್, ಸಂಗಮೇಶ್ ಸೇರಿದಂತೆ ಬ್ಯಾಂಕಿನ ಎಲ್ಲಾ ಚುನಾಯಿತ ನಿರ್ದೇಶಕರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!