ಸುಂಟಿಕೊಪ್ಪ: ಸುಂಟಿಕೊಪ್ಪ ಹೋಬಳಿಯಲ್ಲಿ ಮೀತಿ ಮೀರಿರುವ ಆನೆ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ಕುರಿತು ಸುಂಟಿಕೊಪ್ಪ ಹೋಬಳಿ ರೈತಸಂಘ ಮಡಿಕೇ ಶಾಸಕ ಡಾ. ಮಂತರ್‌ಗೌಡ ಅವರಿಗೆ ಮನವಿ ಸಲ್ಲಿಸಿದೆ. ಸುಂಟಿಕೊಪ್ಪದಲ್ಲಿ ಮಾನವ ವನ್ಯಜೀವಿ ಸಂಘರ್ಷದ ಕುರಿತು ಪರಿಹಾರರೋಪಯ್ಯಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಏರ್ಪಡಿಸಲಾಗಿದ್ದ ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರೈತ ಸಂಘದ ಅಧ್ಯಕ್ಷ ನಾಗಚೆಟ್ಟಿರ ಸ.ಪೊನ್ನಪ್ಪ ಶಾಸಕರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಆನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಶಾಶ್ವತ ಆನೆ ತಡೆಗೋಡೆ ಮತ್ತು ಸೌರಬೇಲಿ ನಿರ್ಮಿಸಬೇಕು ಆನೆಗಳ ಸಮಚಾರ ಮಾರ್ಗಗಳನ್ನು ಗುರುತಿಸಿ ಅವುಗಳನ್ನು ಕಾಡಿನೊಳಗೆ ಉಳಿಸುವ ಕ್ರಮಕೈಗೊಳ್ಳಬೇಕು. ಅಪಾಯಕಾರಿ ಪ್ರದೇಶಗಳಲ್ಲಿ ಅರಣ್ಯ ಇಲಾಖೆಯ ವತಿಯಿಂ ರೈತರ ಬೆಳೆ ಅಸ್ತಿಗೆ ಉಂಟಾದ ಹಾನಿಗೆ ಸಮಗ್ರ ಪರಿಹಾರ ನೀಡಬೇಕು ಮಾನವ ಜೀವಕ್ಕೆ ಅಪಾಯ ಉಂಟು ಮಾಡುತ್ತಿರುವ ಕಾಡಾನೆಗಳ ಚಲನವಲನದ ಕುರಿತು ಮುನ್ನಚ್ಚರಿಕೆ ವ್ಯವಸ್ಥೆ ಕಲ್ಪಿಸಬೇಕು ಆನೆಗಳ ಹಾವಳಿ ಹೆಚ್ಚರುವ ಗ್ರಾಮಗಳಲ್ಲಿ ಅರಣ್ಯ ಇಲಾಖೆ ಮತ್ತು ರೈತರ ಪ್ರತಿನಿಧಿಗಳ ಸಮನ್ವಯ ಸಮಿತಿ ರಚನೆ ಮಾಡಬೇಕು ಆನೆ ಮಾನವ ಸಂಘರ್ಷ ಶಾಶ್ವತ ಪರಿಹಾರ ಕಂಡುಕೊಳ್ಳಲು ವಿಶೇಷ ಕಾರ್ಯಯೋಜನೆ ರೂಪಿಸಿ ತುರ್ತು ಅನುಷ್ಠಾನ ಮಾಡಬೇಕೆಂದು ಕೋರಲಾಗಿದೆ.