ಬಸವೇಶ್ವರ ಜಾತ್ರೆ ಯಶಸ್ಸಿಗೆ ಸಹಕಾರ ನೀಡಿ

KannadaprabhaNewsNetwork |  
Published : Aug 28, 2026, 03:00 AM IST
27ಬಿಎಸ್ವಿ01- ಬಸವನಬಾಗೇವಾಡಿಯ ಬಸವೇಶ್ವರ ದೇವಾಲಯ ಅಂತರಾಷ್ಟ್ರೀಯ ಶಾಲಾ ಆವರಣದಲ್ಲಿರುವ ನಂದೀಶ್ವರ ರಂಗಮಂದಿರದಲ್ಲಿ ಮೂಲನಂದೀಶ್ವರ(ಬಸವೇಶ್ವರ) ದೇವರ ಜಾತ್ರೆಯಂಗವಾಗಿ ಗುರುವಾರ ಸಂಜೆ ಜರುಗಿದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿದರು.  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ ಜಾತ್ರೆಯು ಆ.31 ರಿಂದ ಸೆ.4 ರವರೆಗೆ ಐದು ದಿನಗಳ ಕಾಲ ನಡೆಯಲಿದ್ದು, ಜಾತ್ರಾಮಹೋತ್ಸವವನ್ನು ಯಶಸ್ವಿಗೊಳಿಸಲು ತಾಲೂಕುಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಜೊತೆಗೆ ಎಲ್ಲರೂ ಸಹಕಾರ ನೀಡಿದರೆ ಜಾತ್ರೆ ಯಶಸ್ವಿಯಾಗಲು ಸಾಧ್ಯ ಎಂದು ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ ಜಾತ್ರೆಯು ಆ.31 ರಿಂದ ಸೆ.4 ರವರೆಗೆ ಐದು ದಿನಗಳ ಕಾಲ ನಡೆಯಲಿದ್ದು, ಜಾತ್ರಾಮಹೋತ್ಸವವನ್ನು ಯಶಸ್ವಿಗೊಳಿಸಲು ತಾಲೂಕುಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಜೊತೆಗೆ ಎಲ್ಲರೂ ಸಹಕಾರ ನೀಡಿದರೆ ಜಾತ್ರೆ ಯಶಸ್ವಿಯಾಗಲು ಸಾಧ್ಯ ಎಂದು ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.

ಪಟ್ಟಣದ ನಂದೀಶ್ವರ ರಂಗಮಂದಿರದ ಮುಂಭಾಗ ಗುರುವಾರ ಸಂಜೆ ಮೂಲನಂದೀಶ್ವರ ಜಾತ್ರಾಮಹೋತ್ಸವದಂಗವಾಗಿ ಜರುಗಿದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಾತ್ರೆಯ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಹೆಸ್ಕಾಂ ಅಧಿಕಾರಿಗಳು ಗಮನ ಹರಿಸಬೇಕು. ರೌಡಿ ಶೀಟರ್‌ಗಳು ಸೇರಿದಂತೆ ಕಿಡಿಗೇಡಿಗಳ ಮೇಲೆ ಪೊಲೀಸ್ ಇಲಾಖೆ ವಿಶೇಷ ನಿಗಾ ವಹಿಸಬೇಕು. ಪುರಸಭೆ ಅಧಿಕಾರಿಗಳು ಪಟ್ಟಣದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಆರೋಗ್ಯ ಇಲಾಖೆಯವರು ಮುನ್ನಚ್ಚರಿಕೆಯ ಕ್ರಮವಾಗಿ ಸಂಚಾರಿ ಆಸ್ಪತ್ರೆಗಳನ್ನು ಆಯಕಟ್ಟಿನ ಸ್ಥಳದಲ್ಲಿ ಇರುವಂತೆ ಕೈಗೊಳ್ಳುವಂತಾಗಬೇಕು. ಪಟ್ಟಣದಲ್ಲಿ ಜಾತ್ರೆಯಂಗವಾಗಿ ದೀಪಾಲಂಕಾರ ಮಾಡಲಾಗುತ್ತಿದೆ. ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಜಾತ್ರೆಯ ಸಂದರ್ಭದಲ್ಲಿ ವಾಹನಗಳನ್ನು ಮೆಗಾ ಮಾರುಕಟ್ಟೆ ಆವರಣದಲ್ಲಿ ನಿಲುಗಡೆ ಮಾಡುವಂತೆ ಸೂಚನೆ ನೀಡಲಾಗುವುದು. ಐದು ದಿನಗಳ ಕಾಲ ವಾಹನಗಳ ಶುಲ್ಕ ವಿನಾಯಿತಿ ನೀಡುವಂತೆ ಅವಕಾಶ ಮಾಡಿಕೊಡಲಾಗುವುದು. ಮೆರವಣಿಗೆ ವೇಳೆ ಬೈಕ್ ಸೇರಿದಂತೆ ಯಾವುದೇ ವಾಹನಗಳು ಮಧ್ಯೆ ಪ್ರವೇಶಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದರು.

ಆ.13ರಿಂದ ಆರಂಭವಾಗಿರುವ ಪ್ರವಚನ ಕಾರ್ಯಕ್ರಮದಲ್ಲಿ ನಿತ್ಯ ಬಸವಪ್ರಸಾದ ಸೇವೆಗೆ ಭಕ್ತರು ಸ್ವಯಂಪ್ರೇರಿತವಾಗಿ ಮುಂದಾಗುತ್ತಿರುವುದು ಶ್ಲಾಘನೀಯವಾಗಿದೆ. ಜಾತಿ-ಮತ ಭೇದವಿಲ್ಲದೆ ನಡೆಯುವ ಜಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಬಸವೇಶ್ವರ ಜಾತ್ರೆಯನ್ನು ಸುವ್ಯವಸ್ಥಿತವಾಗಿ ಆಚರಿಸಲು ತಾಲೂಕು ಆಡಳಿತ ಸಕಲ ರೀತಿಯಲ್ಲಿ ಸಹಕಾರ ನೀಡಲಿದೆ. ಜಾತ್ರೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ತಾಲೂಕು ಆಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಮಾತನಾಡಿ, ಪಟ್ಟಣದಲ್ಲಿ ಈಗಾಗಲೇ ವಿದ್ಯುತ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಾತ್ರೆಯ ಸಂದರ್ಭದಲ್ಲಿ ಪಟ್ಟಣದ ಸ್ವಚ್ಛತೆಗೆ ಪುರಸಭೆಯಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಪಿಐ ಗುರುಶಾಂತ ದ್ಯಾಶಾಳ ಮಾತನಾಡಿ, ಜಾತ್ರೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಮೆರವಣಿಗೆಯ ಸಂದರ್ಭದಲ್ಲಿ ಡ್ರೋಣ್‌ ಕ್ಯಾಮೆರಾ ಮೂಲಕ ನಿಗಾ ವಹಿಸಲಾಗುವುದು. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿ ಶಾಂತಿಯುತವಾಗಿ ಜಾತ್ರೆ ಆಚರಿಸಬೇಕು ಎಂದು ಮನವಿ ಮಾಡಿದರು.

ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ಶ್ರೀಕಾಂತ ಕೊಟ್ರಶೆಟ್ಟಿ ಮಾತನಾಡಿ, ಅಧಿಕಾರಿಗಳೊಂದಿಗೆ ಸಹಕಾರ ನೀಡುವ ಮೂಲಕ ಜಾತ್ರೆಯನ್ನು ಯಶಸ್ವಿಗೊಳಿಸಬೇಕು. ಇದು ಧಾರ್ಮಿಕ ಕ್ಷೇತ್ರವಾಗಿರುವುದರಿಂದ ಭಕ್ತರು ಯಾವುದೇ ರೀತಿಯ ಗಲಾಟೆ ಮಾಡದೆ ಶಾಂತಿಯುತವಾಗಿ ಜಾತ್ರೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಬಸವೇಶ್ವರ ಸೇವಾ ಸಮಿತಿ ಉಪಾಧ್ಯಕ್ಷ ಬಸವರಾಜ ಹಾರಿವಾಳ, ಎಂ.ಜಿ.ಆದಿಗೊಂಡ, ಭರತು ಅಗರವಾಲ, ಶೇಖರ ಗೊಳಸಂಗಿ, ಡಾ.ಬಸವರಾಜ ಕೋಟಿ, ರವಿ ಚಿಕ್ಕೊಂಡ, ಸುರೇಶಗೌಡ ಪಾಟೀಲ, ಸಂಗಮೇಶ ಓಲೇಕಾರ, ಡಾ.ಜಗದೀಶ ನಿಡಗುಂದಿ, ಸಂಕನಗೌಡ ಪಾಟೀಲ, ಜಟ್ಟಿಂಗರಾಯ ಮಾಲಗಾರ, ಅಮರ ಗಾಯಕವಾಡ, ರವಿ ನಾಯ್ಕೋಡಿ, ಭದ್ರು ಮಣ್ಣೂರ, ಯಶ್ ಅಗರವಾಲ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಇತರರು ಇದ್ದರು. ರವಿ ರಾಠೋಡ ಸ್ವಾಗತಿಸಿ,ನಿರೂಪಿಸಿದರು. ವಿನುತ ಕಲ್ಲೂರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆ: ಐಶ್ವರ್ಯ, ಸ್ನೇಹಾ ಪ್ರಥಮ
ಕೇಸರೆಕರ ದಂಪತಿ ಹತ್ಯೆ ಪ್ರಕರಣ ಸಿಬಿಐಗೆ ಹಸ್ತಾಂತರಿಸಲು ಆಗ್ರಹ