ಕನ್ನಡಪ್ರಭ ವಾರ್ತೆ ಸಿದ್ದಾಪುರ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಿಷನ್ ಸಂಯೋಜಕಿ ಮಮತಾ ಮಾತನಾಡಿ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಹೆಣ್ಣು ಮಕ್ಕಳನ್ನು ರಕ್ಷಿಸಿ ಓದಿಸಿಬೇಕು ಹಾಗೂ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸಬೇಕು. ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಸಮಾನತೆ ನೀಡಬೇಕು ಎಂದು ಹೇಳಿದರು.
ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಿತಾ ಮಾತನಾಡಿ, ಮಕ್ಕಳು ಪೌಷ್ಠಿಕ ಆಹಾರ ಸೇವನೆ ಮಾಡಬೇಕು ಹಾಗೂ ಮೊಬೈಲ್ ನ್ನು ಅವಶ್ಯಕತೆ ಇದ್ದಾಗ ಮಿತವಾಗಿ ಬಳಸಿ ಎಂದು ತಿಳಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಸಂಯೋಜಕರು ಮಧು ಮಾತನಾಡಿ, ಜಿಲ್ಲಾ ಮಕ್ಕಳ ಸಹಾಯವಾಣಿ 1098ರ ಕಾರ್ಯವೈಖರಿ ಹಾಗೂ ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಭಿಕ್ಷಾಟನೆ, ಅನಧಿಕೃತ ದತ್ತು ಮುಂತಾದ ಮಕ್ಕಳ ಕಾಯ್ದೆ ಬಗ್ಗೆ ಹಾಗೂ ಮಕ್ಕಳ ಹಕ್ಕುಗಳ ಕುರಿತು ಮಾಹಿತಿ ನೀಡಿದರು.ಕಾನೂನು ಸಲಹೆಗಾರರಾದ ರೇವತಿ ಪಿ.ಎಂ. ಮಾತನಾಡಿ, ಪೋಕ್ಸೊ ಕಾಯ್ದೆ 2012 ಹಾಗೂ ಬಾಲ್ಯ ವಿವಾಹ ನಿಷೇದ ಕಾಯ್ದೆ 2006 ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.
ಬೇಟಿ ಬಚಾವೋ ಬೇಟಿ ಬಚಾವೋ ಯೋಜನೆ ಕುರಿತು ಪ್ರತಿಜ್ಞಾ ವಿಧಿಯನ್ನು ಮಮತಾ ಜಿಲ್ಲಾ ಮಿಷನ್ ಸಂಯೋಜಕರು ಬೋಧಿಸಿದರು ಅತಿಥಿಗಳು, ಶಾಲಾ ಶಿಕ್ಷಕರು ಹಾಗೂ ಮಕ್ಕಳು ಪ್ರತಿಜ್ಞೆ ಸ್ವೀಕರಿಸಿದರು.