ಜನರ ಬದುಕಿನಲ್ಲಿ ಬದಲಾವಣೆ ಸಂಕಲ್ಪ: ಡಿಕೆಶಿ

KannadaprabhaNewsNetwork |  
Published : Sep 20, 2026, 02:15 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರುಕೊಟ್ಟ ಅವಕಾಶದಲ್ಲಿ ಪ್ರತಿ ದಿನ ಜನರ ಬದುಕಿನಲ್ಲಿ ಬದಲಾವಣೆ ಮಾಡಬೇಕು ಎಂಬುದು ದೃಢವಾದ ಸಂಕಲ್ಪ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ವಿರೋಧಿಸಿ ನಡೆದ ರೈತರ ಸಭೆಯಲ್ಲಿ ಅಹವಾಲು ಸ್ವೀಕಾರ ಸಮಾರಂಭ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಕೊಟ್ಟ ಅವಕಾಶದಲ್ಲಿ ಪ್ರತಿ ದಿನ ಜನರ ಬದುಕಿನಲ್ಲಿ ಬದಲಾವಣೆ ಮಾಡಬೇಕು ಎಂಬುದು ದೃಢವಾದ ಸಂಕಲ್ಪ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಬಾಳೆಹೊನ್ನೂರಿನಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ವಿರೋಧಿಸಿ ನಡೆದ ರೈತರ ಸಭೆಯಲ್ಲಿ ಜನರಿಂದ ಅಹವಾಲು ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜನರ ಭಾವನೆಗಳನ್ನು ಆಧಾರವಾಗಿಟ್ಟುಕೊಂಡು ನಾನು ಎಂದೂ ರಾಜಕಾರಣ ಮಾಡಿಲ್ಲ. ಜನರ ಬದುಕನ್ನು ಆಧಾರವಾಗಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದೇನೆ. ಹಾಗಾಗಿ ಜನರ ಸಮಸ್ಯೆ ಆಲಿಸುವ ಉದ್ದೇಶದಿಂದ ಜನರ ಮುಂದೆ ಬಂದಿದ್ದೇನೆ ಎಂದರು.

ದೇವರು ವರ ಅಥವಾ ಶಾಪ ಕೊಡುವುದಿಲ್ಲ. ಬದಲಿಗೆ ಅವಕಾಶ ಕೊಡುತ್ತಾನೆ. ನನಗೆ ಅವಕಾಶ ಸಿಕ್ಕಿದೆ. ಆ ಅವಕಾಶ ಬಳಸಿ ಜನರ ಬದುಕು ಬದಲಿಸುವ ಕೆಲಸ ಮಾಡುತ್ತೇನೆ ಎಂದರು.

ಅಧಿವೇಶನ ನಡೆಯುವಾಗ ವಿರೋಧ ಪಕ್ಷದವರು 10 ದಿನ ಏನು ಚರ್ಚೆ ಮಾಡಲು ಬಿಡಲಿಲ್ಲ. ಹೀಗಾಗಿ ರೈತರಿಗೆ ಮರಣ ಶಾಸನವಾಗಿರುವ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಬಗ್ಗೆಯೇ ಚರ್ಚೆ ನಡೆಸಲು ವಿಶೇಷ ಅಧಿವೇಶನ ಕರೆ ದಿ ದ್ದೇನೆ. ಇಲ್ಲಿ ಬೇರೆ ಯಾವುದೇ ವಿಷಯ ಚರ್ಚೆಗೆ ಅವಕಾಶವಿಲ್ಲ. ಕೇವಲ ಕರಡು ಅಧಿಸೂಚನೆ ಹಾಗೂ ಬರದ ಕುರಿತು ಮಾತ್ರ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ರಾಜ್ಯದ ರೈತರಿಗೆ ಯಾವುದೇ ರೀತಿ ಸಮಸ್ಯೆಯಾಗಲು ಬಿಡುವುದಿಲ್ಲ. ಒಂದು ವೇಳೆ ಅಂತ ಸ್ಥಿತಿ ಬಂದಿದ್ದೆ ಆದಲ್ಲಿ, ಕೇಂದ್ರ ಸರ್ಕಾರದ ಬಳಿಗೆ ಪ್ರತ್ಯೇಕ ಯೋಗ ಕೊಂಡೊಯ್ದು ಜನರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುತ್ತೇನೆ. ಹೀಗಾಗಿ ಯಾವೊಬ್ಬ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ, ಶಾಸಕರಾದ ಟಿ.ಡಿ.ರಾಜೇಗೌಡ, ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ನಯನಾ ಮೋಟಮ್ಮ, ಕೆ.ಎಸ್.ಆನಂದ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮತ್ತಿತರರಿದ್ದರು.

-- ಬಾಕ್ಸ್.....

ಇನ್ನಷ್ಟು ತಾಲೂಕು ಬರಪೀಡಿತ ಪಟ್ಟಿಗೆ

ಭೀಕರ ಬರಗಾಲದ ಪರಿಸ್ಥಿತಿಯಲ್ಲಿ ಇದ್ದೇವೆ. ಭರತ್ ಸಮೀಕ್ಷೆ ಕಾರ್ಯ ಮುಂದುವರಿದಿದ್ದು ಮತ್ತಷ್ಟು ತಾಲೂಕುಗಳು ಬರ ಪೀಡಿತ ಪಟ್ಟಿಗೆ ಸೇರ್ಪಡೆಯಾಗಲಿವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬರಗಾಲದ ಬಗ್ಗೆ ಹಿಂದೆಯೇ ಪ್ರಧಾನಿ ಎಚ್ಚರಿಕೆ ನೀಡಿದ್ದರು. ಮಲೆನಾಡು ಭಾಗದಲ್ಲಿ ಭೀಕರ ಬರದ ಸ್ಥಿತಿ ಇದೆ. ಬರ ನಿರ್ವಹಣೆಗೆ ಎಲ್ಲಾ ರೀತಿ ಮುಂಜಾಗ್ರತೆ ಕೈಗೊಳ್ಳಲಾಗಿದೆ ಡಿ.ಕೆ.ಶಿವಕುಮಾರ್ ಹೇಳಿದರು... ಬಾಕ್ಸ್....

ಕರಾವಳಿ, ಮಲೆನಾಡು ಪ್ರವಾಸೋದ್ಯಮಕ್ಕೆ ವಿಶೇಷ ಪಾಲಿಸಿ

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರವಾಸೋದ್ಯಮ ಉತ್ತೇಜನಕ್ಕೆ ವಿಶೇಷ ಪಾಲಿಸಿ ರೂಪಿಸಲು ತೀರ್ಮಾನಿ ಸ ಲಾಗಿದೆ. ಕೆಲವೇ ದಿನಗಳಲ್ಲಿ ಪ್ರವಾಸೋದ್ಯಮ ಇಲಾಖೆ ಸಚಿವ ಕೆ.ಜೆ.ಜಾರ್ಜ್ ನೂತನ ಪಾಲಿಸಿಯಲ್ಲಿ ಏನಿರಲಿದೆ ಎಂದು ಘೋಷಣೆ ಮಾಡಲಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಲೆನಾಡು ಹಾಗೂ ಕರಾವಳಿಯಲ್ಲಿ ಉದ್ಯೋಗ ಹೆಚ್ಚಬೇಕು. ಬಂಡವಾಳ ಹರಿದು ಬರಬೇಕು. ವಲಸೆ ತಪ್ಪಬೇಕು ಎಂಬ ದೃಷ್ಟಿಯಿಂದ ಹೊಸ ಪಾಲಿಸಿ ರೂಪಿಸಲಾಗಿದೆ ಎಂದು ವಿವರಿಸಿದರು...ಬಾಕ್ಸ್..

ಚಿಕ್ಕಮಗಳೂರಿನಲ್ಲಿ ಸಚಿವ ಸಂಪುಟ ಸಭೆ

ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಯಾವ ಜಿಲ್ಲೆಗಳಲ್ಲಿ ಸಮಸ್ಯೆಗಳು ಹೆಚ್ಚಿವೆಯೋ ಅಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ. ಸ್ಥಳೀಯವಾಗಿಯೇ ಸಚಿವ ಸಂಪುಟ ಸಭೆ ನಡೆಸಿದಾಗ ಅಲ್ಲಿನ ಸಮಸ್ಯೆ ಪರಿಹರಿಸಲು ಸಾಧ್ಯ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಲಿನ ದರ ಲೀ.ಗೆ 8ಕ್ಕೆ ಹೆಚ್ಚಿಸಿ : ಒಕ್ಕೂಟಗಳು
ಜಲಾಶಯಗಳಲ್ಲಿ ನೀರಿನ ತೀವ್ರ ಕೊರತೆ - ಬೇಸಿಗೆಯಲ್ಲಿ ಕುಡಿಯುವ ನೀರಿನ ಆತಂಕ