ಭ್ರಷ್ಟಾಚಾರ ನಿರ್ಮೂಲನೆಗೆ ಪಣ : ಭಾಗೀರಥಿ ಮುರುಳ್ಯ

KannadaprabhaNewsNetwork |  
Published : Aug 16, 2026, 04:00 AM IST
ತಹಸೀಲ್ದಾ‌ರ್ ಮಂಜುಳ ಎಂ, ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. | Kannada Prabha

ಸಾರಾಂಶ

ಭ್ರಷ್ಟಾಚಾರ ನಿರ್ಮೂಲನೆ ಆದಾಗ ಮಾತ್ರ ದೇಶ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.

ಸುಳ್ಯ: ಭ್ರಷ್ಟಾಚಾರ ನಿರ್ಮೂಲನೆ ಆದಾಗ ಮಾತ್ರ ದೇಶ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.

ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಹಸೀಲ್ದಾ‌ರ್ ಮಂಜುಳ ಎಂ, ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರೋತ್ಸವದ ಸಂದೇಶ ನೀಡಿದರು.ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ದ.ಕ. ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಸುಳ್ಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ, ಸರ್ಕಲ್ ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯ್ಕ್, ಎಸ್‌ಐ ಸಂತೋಷ್ ಬಿ.ಪಿ,ನಗರ ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ನಿತಿನ್ ಪ್ರಭು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್ ಕುಮಾ‌ರ್ ಸಿ.ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕೃಷಿಕರಾದ ಡಿ.ಎಸ್.ಚಂದ್ರಶೇಖರ, ನಿವೃತ್ತ ಸೈನಿಕರಾದ ತಿರುಮಲೇಶ್ವರ ಸಣ್ಣಮನೆ, ದಯಾನಂದ ಪಿ.ಕೆ.ಅವರನ್ನು ಸನ್ಮಾನಿಸಲಾಯಿತು. ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್‌.ಹರಗಿ ವಂದಿಸಿದರು. ಮಮತಾ ಎಸ್.ಕೆ, ಧನಲಕ್ಷ್ಮಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಚಿವ ಸ್ಥಾನ ತಪ್ಪಲು ಎಂ.ಬಿ.ಪಾಟೀಲ ಕಾರಣ
ಹುನ್ನಾರಗಳಿಗೆ ಜನರೇ ಕಡಿವಾಣ ಹಾಕಲಿ