ಕನ್ನಡಪ್ರಭ ವಾರ್ತೆ ಮಧುಗಿರಿ
ಇಲ್ಲಿನ ಕನ್ನಡ ಭವನದ ಕೆ.ಎನ್.ರಾಜಣ್ಣ ಅವರ ಸಭಾಂಗಣದಲ್ಲಿ ಬುಧವಾರ ತುಮಕೂರು ಜಿಲ್ಲಾ ಪೋಲಿಸ್ , ಮಧುಗಿರಿ ಉಪ ವಿಭಾಗ ಪೋಲಿಸ್ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಡ್ರಗ್ಸ್ ಮುಕ್ತ ಕರ್ನಾಟಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಧುಗಿರಿ ಕ್ಷೇತ್ರವನ್ನು ಡ್ರಗ್ಸ್ ಮುಕ್ತಗೊಳಿಸಲು ಅಧಿಕಾರಿಗಳ ಜೊತೆ ಈಗಾಗಲೇ ಚರ್ಚಿಸಿದ್ದು, ಮುಂಬರುವ ದಿನಗಳಲ್ಲಿ ಎಲ್ಲರ ಸಹಕಾರದಿಂದ ನಶೆ ಮುಕ್ತ ತಾಲೂಕನ್ನಾಗಿ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ವಿದ್ಯಾರ್ಥಿಗಳು ಸ್ವಯಂ ನಿಯಂತ್ರಣ ಹೊಂದಿ ಡ್ರಗ್ಸ್ ಸೇವನೆಯಿಂದ ಮಾನಸಿಕ ದೌರ್ಬಲ್ಯ ಉಂಟಾಗುತ್ತದೆ. ಮಕ್ಕಳು ಓದುವ ವಯಸ್ಸಿನಲ್ಲಿ ದುಶ್ಚಟಗಳಿಗೆ ದಾಸರಾಗದೇ ಸರ್ಕಾರದಿಂದ ದೊರೆಯುವ ಸಮವಸ್ತ್ರ,ನೋಟ್ ಪುಸ್ತಕ ಉಪಯೋಗಿಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು ಎಂದರು. ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಮಾತನಾಡಿ, ಯುವ ಜನತೆ ಕೆಟ್ಟ ಚಟಗಳಿಗೆ ಬಲಿಯಾಗದೇ ಆರೋಗ್ಯವಂತ ಸಮಾಜ ಕಟ್ಟಲು ಶ್ರಮಿಸಬೇಕು ಎಂದರು.ಡಿವೈಎಸ್ಪಿ ಮಂಜುನಾಥ್ ಮಾತನಾಡಿ, ಮಾದಕ ವಸ್ತುಗಳಿಂದ ಅಪರಾದ ಚಟುವಟಿಕೆಗಳು ಹೆಚ್ಚಿ ಯುವಕರು ದಾರಿ ತಪ್ಪುತ್ತಿದ್ದಾರೆ. ಆದ್ದರಿಂದ ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಬೇಕು ಎಂದರು.