ಕಡೂರಿನಲ್ಲಿ ಫಾರಂ-7 ಮೂಲಕ 30 ಮತದಾರರ ಹೆಸರು ಅಳಿಸಲು ಹುನ್ನಾರ: ಸಮೀಹುಲ್ಲಾ

KannadaprabhaNewsNetwork |  
Published : Oct 05, 2026, 01:15 AM IST
 | Kannada Prabha

ಸಾರಾಂಶ

ಕಡೂರುಫಾರಂ-7 ಸಲ್ಲಿಸುವ ಮೂಲಕ ಮತದಾರರ ಹಕ್ಕು ಕಸಿಯುವ ಹುನ್ನಾರ ಕಡೂರು ಪುರಸಭೆ 23ನೇ ವಾರ್ಡ್‌ನಲ್ಲಿ ನಡೆದಿದೆ ಎಂದು ಆರೋಪಿಸಿ ಅಸೋಸಿಯೇಟ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷ ಮೊಹಮದ್ ಸಮೀಹುಲ್ಲಾ ತಹಸೀಲ್ದಾರ್‌ಗೆ ದೂರು ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಕಡೂರು

ಫಾರಂ-7 ಸಲ್ಲಿಸುವ ಮೂಲಕ ಮತದಾರರ ಹಕ್ಕು ಕಸಿಯುವ ಹುನ್ನಾರ ಕಡೂರು ಪುರಸಭೆ 23ನೇ ವಾರ್ಡ್‌ನಲ್ಲಿ ನಡೆದಿದೆ ಎಂದು ಆರೋಪಿಸಿ ಅಸೋಸಿಯೇಟ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷ ಮೊಹಮದ್ ಸಮೀಹುಲ್ಲಾ ತಹಸೀಲ್ದಾರ್‌ಗೆ ದೂರು ನೀಡಿದ್ದಾರೆ.ಪಟ್ಟಣದ ಮುದಿಯಪ್ಪ ಬಡಾವಣೆ 23ನೇ ವಾರ್ಡ್‌ನ ಭಾಗ ಸಂಖ್ಯೆ 128ರಲ್ಲಿ ವಾಸವಿರುವ 30 ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಪುರಸಭೆ ಮಾಜಿ ಸದಸ್ಯರೊಬ್ಬರು ಫಾರಂ-7 ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.ಈ 30 ಮಂದಿ ಕಳೆದ ಸುಮಾರು 23 ವರ್ಷಗಳಿಂದ ಇದೇ ವಾರ್ಡ್ ಹಾಗೂ ಮತಗಟ್ಟೆ ವ್ಯಾಪ್ತಿಯಲ್ಲಿ ವಾಸವಿದ್ದು, ಹಿಂದಿನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲೂ ಮತದಾನ ಮಾಡಿದ್ದಾರೆ. ಆದರೂ ದುರುದ್ದೇಶದಿಂದ ಅವರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲು ಫಾರಂ-7 ಸಲ್ಲಿಸಲಾಗಿದೆ ಎಂದು ಸಮೀಹುಲ್ಲಾ ದೂರಿನಲ್ಲಿ ತಿಳಿಸಿದ್ದಾರೆ.ಶನಿವಾರ ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ ಅವರಿಗೆ ಮನವಿ ಸಲ್ಲಿಸಿದ ಅವರು, ಪರಿಶೀಲನೆ ನಡೆಸದೆ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಬಾರದು. ಪ್ರಕರಣದಲ್ಲಿ ಅಕ್ರಮ ನಡೆದಿರುವುದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಗೂ ದೂರು ಸಲ್ಲಿಸಲಾಗಿದೆ. ಕಡೂರು ಪೊಲೀಸ್ ಠಾಣೆಗೂ ದೂರು ನೀಡಲಾಗಿದೆ. ಪೊಲೀಸರು ತನಿಖೆ ನಡೆಸುವ ಭರವಸೆ ನೀಡಿದ್ದಾರೆ ಎಂದು ಸಮೀಹುಲ್ಲಾ ತಿಳಿಸಿದರು.ಈ ಸಂದರ್ಭದಲ್ಲಿ ನದೀಮ್ ಪಾಷಾ, ಮುನ್ನಾ, ಭಾನುಪ್ರಕಾಶ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಲ್ಲಿ ಸ್ಪರ್ಧೆ ಎದುರಿಸುವ ಆತ್ಮವಿಶ್ವಾಸ ಬೆಳೆಸುವುದು ಮುಖ್ಯ
ಸರ್ಕಾರಿ ಶಾಲೆಗಳ ಪ್ರಗತಿಗೆ ಎಲ್ಲರ ಸಹಕಾರ ಅಗತ್ಯ