ಪಿಎಂ ಕಿಸಾನ್ ಸಮ್ಮಾನ್ ರೈತರ ಸಂಜೀವಿನಿ: ಪ್ರಹ್ಲಾದ ಜೋಶಿ

KannadaprabhaNewsNetwork |  
Published : Oct 07, 2024, 01:43 AM IST
ಪ್ರಹ್ಲಾದ ಜೋಶಿ | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ರೈತರ ಸಂಜೀವಿನಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ರೈತರ ಸಂಜೀವಿನಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿ, ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸಮ್ಮಾನ್ 18ನೇ ಕಂತಿನ ನಿಧಿ ರೈತರ ಖಾತೆಗೆ ನೇರ ವರ್ಗಾವಣೆಯಾದ ಬಳಿಕ ಪ್ರತಿಕ್ರಿಯಿಸಿರುವ ಸಚಿವರು, ಈ ಯೋಜನೆ ರೈತರಿಗೆ ಉತ್ತೇಜನ ನೀಡಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ ₹6000 ಧನಸಹಾಯ ನೀಡುವ ಮೂಲಕ ದೇಶದ 11 ಕೋಟಿ ರೈತರಿಗೆ ಸಂಜೀವಿನಿಯಾಗಿದೆ.

ಈ ಯೋಜನೆಯಿಂದಾಗಿ ದೇಶದಲ್ಲಿ ಕೃಷಿಗೆ ಅಪೂರ್ವ ಉತ್ತೇಜನ ದೊರಕಿದೆ. ರೈತರ ಸಾಲವನ್ನು ಕಡಿಮೆ ಮಾಡಿದೆ. ಅಲ್ಲದೇ, ಗ್ರಾಮೀಣ ಪ್ರದೇಶದ ಸಮುದಾಯಗಳನ್ನು ಸಶಕ್ತರನ್ನಾಗಿಸಿದೆ. ಜತೆಗೆ ಭಾರತದ ಕೃಷಿಕರನ್ನು ಮಾತ್ರವಲ್ಲ ದೇಶವನ್ನೇ ಸ್ವಾವಲಂಬಿ ಮಾಡುವತ್ತ ಒಂದು ಮಹತ್ತರ ಹೆಜ್ಜೆಯಾಗಿದೆ.

ಈ ಯೋಜನೆಯಡಿ 18ನೇ ಕಂತಿನಲ್ಲಿ ಒಟ್ಟು 9.4 ಕೋಟಿ ರೈತರಿಗೆ ₹20 ಸಾವಿರ ಕೋಟಿ ನೇರ ವರ್ಗಾವಣೆ ಮಾಡಲಾಗಿದೆ. ಕರ್ನಾಟಕದ 47.12 ಲಕ್ಷ ರೈತರು ₹942 ಕೋಟಿ ಪಡೆದಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ 1.15 ಲಕ್ಷ ರೈತರು ಇದರ ಪ್ರಯೋಜನ ಪಡೆದಿದ್ದಾರೆ. ₹23.09 ಕೋಟಿ ಧಾರವಾಡ ರೈತರ ಖಾತೆಗೆ ಜಮೆಯಾಗಿದ್ದು, ದಸರಾ ಹಬ್ಬದ ವೇಳೆ ರೈತರಲ್ಲಿ ಖುಷಿ ತಂದಿದೆ ಎಂದು ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ