ನೈಸರ್ಗಿಕ ಕೃಷಿಯಿಂದ ವಿಷಮುಕ್ತ ಆಹಾರ: ಸ್ಫೂರ್ತಿ ಜಿ.ಎಸ್

KannadaprabhaNewsNetwork |  
Published : Oct 15, 2025, 02:07 AM IST
ಕಾರ್ಯಕ್ರಮವನ್ನು ಸ್ಫೂರ್ತಿ ಜಿ.ಎಸ್. ಉದ್ಘಾಟಿಸಿದರು. | Kannada Prabha

ಸಾರಾಂಶ

ಕೃಷಿ ವಿಸ್ತರಣಾ ಕಾರ್ಯಕರ್ತರಾಗಿ ತಮ್ಮ ಗ್ರಾಮದಲ್ಲಿ ರೈತರಿಗೆ ನೈಸರ್ಗಿಕ ಕೃಷಿಯ ಕುರಿತು ವರ್ಗಾವಣೆ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೈಸರ್ಗಿಕ ಕೃಷಿಯನ್ನು ಮಾಡಲು ಪ್ರೇರಣೆ ನೀಡಬೇಕೆಂದರು.

ಗದಗ: ನೈಸರ್ಗಿಕ ಕೃಷಿ ತಾಂತ್ರಿಕತೆಗಳನ್ನು ವರ್ಗಾವಣೆ ಮಾಡುವಲ್ಲಿ ಕೃಷಿ ಸಖಿಯರ ಪಾತ್ರ ಮುಖ್ಯವಾದುದು. ರೈತರು ನೈಸರ್ಗಿಕ ಕೃಷಿಯನ್ನು ಮಾಡಿ ಮಣ್ಣಿನ ಆರೋಗ್ಯವನ್ನು ಕಾಪಾಡಿ ಜನಸಾಮಾನ್ಯರಿಗೆ ವಿಷಮುಕ್ತ ಆಹಾರವನ್ನು ನೀಡಬೇಕೆಂದು ಉಪ ಕೃಷಿ ನಿರ್ದೇಶಕಿ ಸ್ಫೂರ್ತಿ ಜಿ.ಎಸ್. ತಿಳಿಸಿದರು.

ತಾಲೂಕಿನ ಹುಲಕೋಟಿ ಗ್ರಾಮದ ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೆವಿಕೆ ಐಸಿಎಆರ್, ಕೆವಿಕೆ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ ರಾಷ್ಟ್ರೀಯ ಮಿಷನ್ ಅಡಿ ನೈಸರ್ಗಿಕ ಕೃಷಿಯಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಕೃಷಿ ಸಖಿ ಐದು ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೃಷಿ ವಿಸ್ತರಣಾ ಕಾರ್ಯಕರ್ತರಾಗಿ ತಮ್ಮ ಗ್ರಾಮದಲ್ಲಿ ರೈತರಿಗೆ ನೈಸರ್ಗಿಕ ಕೃಷಿಯ ಕುರಿತು ವರ್ಗಾವಣೆ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೈಸರ್ಗಿಕ ಕೃಷಿಯನ್ನು ಮಾಡಲು ಪ್ರೇರಣೆ ನೀಡಬೇಕೆಂದರು.

ಹಿರಿಯ ವಿಜ್ಞಾನಿ ಡಾ. ಸುಧಾ ಮಂಕಣಿ ಮಾತನಾಡಿ, ನೈಸರ್ಗಿಕ ಕೃಷಿ ತರಬೇತಿಯು ಒಂದು ವಿಶೇಷ ತರಬೇತಿಯಾಗಿದ್ದು, ಈ ನಿಟ್ಟಿನಲ್ಲಿ ಕೃಷಿ ಸಖಿಯರು ರೈತರನ್ನು ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಲು ಪ್ರೋತ್ಸಾಹವನ್ನು ನೀಡಿ, ನೈಸರ್ಗಿಕ ಕೃಷಿಯ ಮಹತ್ವವನ್ನು ರೈತರಿಗೆ ತಿಳಿಸಬೇಕು. ತಮಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳನ್ನು ಸಂಪರ್ಕಿಸಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ನೈಸರ್ಗಿಕ ಕೃಷಿ ತರಬೇತಿ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು. ನಾರಾಯಣ ಭಂಡಿ, ಸ್ವಾಗತಿಸಿದರು. ಹೇಮಾವತಿ ಹಿರೇಗೌಡರ ನಿರೂಪಿಸಿದರು. ಡಾ. ಚೇತನ ಬಾಬು ವಂದಿಸಿದರು.ಇಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಮುಂಡರಗಿ: ಅ. 15ರಂದು 110 ಕೆವಿ ಶಿಂಗಟಾಲೂರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ರಾಜವಾಳ ಗ್ರಾಮದಲ್ಲಿ ಕೆಎನ್ಎನ್ಎಲ್ ವಿಭಾಗ- 2 ಹೂವಿನಹಡಗಲಿ ಎಲ್ಐಎಸ್ 18000 ಕೆವಿಎ ಸ್ಥಾವರಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕೆಎನ್ಎನ್ಎಲ್ ಲೈನ್ ಚಾರ್ಜಿಂಗ್‌ ಕಾಮಗಾರಿ ಕೈಗೊಳ್ಳುವುದರಿಂದ ಮಧ್ಯಾಹ್ನ 2ರಿಂದ ಸಂಜೆ 6ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.ಈ ಉಪಕೇಂದ್ರದಿಂದ ಪೂರೈಕೆಯಾಗುವ ಎಲ್ಲ ನೀರಾವರಿ ಪಂಪಸೆಟ್‌ಗಳ ಮಾರ್ಗ, ಕುಡಿಯುವ ನೀರು ಮತ್ತು ಗ್ರಾಮೀಣ ಪ್ರದೇಶಗಳ ಎಲ್ಲ 11 ಕೆವಿ ವಿತರಣಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಪ್ರಕಟಣೆ ತಿಳಿಸಿದೆ.

PREV

Recommended Stories

ನಿರೀಕ್ಷೆಯಂತೆ ನಡೆಯದ ಸಮೀಕ್ಷೆ: ಬೆಂಗಳೂರು ಮುಖ್ಯ ಆಯುಕ್ತರಿಗೆ ಸಿಎಸ್‌ ಪತ್ರ
ಬೆಂಗಳೂರಲ್ಲಿನ್ನು ವೈದ್ಯಕೀಯ ಪರಿಕರಗಳ ಡ್ರೋನ್‌ ಡೆಲಿವರಿ