ಮಣಿಪಾಲ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಸಿಎಂಗೆ ದೂರು

KannadaprabhaNewsNetwork |  
Published : Nov 21, 2026, 02:45 AM IST
ವಿದ್ಯಾರ್ಥಿಗಳ ಪ್ಲಾಟ್‌ಗಳಲ್ಲಿ ಪೊಲೀಸರ ಕಾರ್ಯಾಚರಣೆ | Kannada Prabha

ಸಾರಾಂಶ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ಪ್ರಕರಣದಲ್ಲಿ ಮಣಿಪಾಲ ಪೊಲೀಸರು ಅಮಾಯಕ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ, ಮಣಿಪಾಲದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಗೆ ಈಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ಮಣಿಪಾಲ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ಪ್ರಕರಣದಲ್ಲಿ ಮಣಿಪಾಲ ಪೊಲೀಸರು ಅಮಾಯಕ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ, ಮಣಿಪಾಲದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಗೆ ಈಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ.ನ. 8 ರಂದು ಅಪಾರ್ಟ್‌ಮೆಂಟ್ ಆವರಣದಲ್ಲಿ ದೀಪಾವಳಿ ಆಚರಿಸಲಾಗಿತ್ತು. ಆದರೆ ನ. 10 ರಂದು ಪೊಲೀಸ್ ಸಿಬ್ಬಂದಿಗಳು ಪ್ಲಾಟ್‌ಗಳಿಗೆ ನುಗ್ಗಿ, ಪರೀಕ್ಷೆಗೆ ಓದುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ದೃಶ್ಯಗಳು ಅಪಾರ್ಟ್‌ಮೆಂಟ್‌ನ ಸಿಸಿ ಕ್ಯಾಮರದಲ್ಲಿ ಸೆರೆಯಾಗಿವೆ. ಅಲ್ಲದೆ ಸೂಕ್ತ ಕಾರಣ ನೀಡದೆ ಠಾಣೆಗೆ ಕರೆದೊಯ್ದು ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ ಸುಳ್ಳು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವಿದ್ಯಾರ್ಥಿಗಳು ಸಿಎಂಗೆ ದೂರಿದ್ದಾರೆ.ಡಿವೈಎಸ್ಪಿಯಿಂದ ತನಿಖೆ - ಎಸ್ಪಿ

ಈ ಬಗ್ಗೆ ಸ್ಪಷ್ಟನೆ ನೀಡಿರುವ ಉಡುಪಿ ಎಸ್ಪಿ ಹರಿರಾಮ್ ಶಂಕರ್, ಪೊಲೀಸರ ದೌರ್ಜನ್ಯದ ಬಗ್ಗೆ ವಿದ್ಯಾರ್ಥಿಗಳು ತಮಗೂ ದೂರು ನೀಡಿದ್ದು, ಈ ಬಗ್ಗೆ ಉಡುಪಿ ಡಿವೈಎಸ್ಪಿಅವರಿಗೆ ತನಿಖೆಗೆ ವಹಿಸಲಾಗಿದೆ ತಿಳಿಸಿದ್ದಾರೆ.ಸ್ಥಳದ ಸಿಸಿ ಕ್ಯಾಮರ ದೃಶ್ಯಗಳು, ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಗುರುತಿಸಿ ನೋಟಿಸ್ ನೀಡಲಾಗಿದೆ. ದಾಖಲಿಸಿದ್ದ ಕಲಂಗಳಲ್ಲಿ ಕೇಸು ಹಾಕಲು ಸಾಧ್ಯವಿರದಿದ್ದುದರಿಂದ ಕೋರ್ಟ್ ಅನುಮತಿ ಪಡೆದು ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ, ಇನ್ನೂ ಯಾರ ಮೇಲೂ ಆರೋಪಪಟ್ಟಿ ಹಾಕಿಲ್ಲ ಎಂದವರು ಹೇಳಿದ್ದಾರೆ. ವಿದ್ಯಾರ್ಥಿಗಳು ಪಟಾಕಿ ಸಿಡಿಸಿದ ಪ್ರಕರಣದ ತನಿಖೆಯನ್ನು ಮಣಿಪಾಲ ಉಪನಿರೀಕ್ಷಕರಿಂದ ನಿರೀಕ್ಷರಿಗೆ ವರ್ಗಾಯಿಸಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಸಿಗೆಗೆ ನೀರು ಆಪೋಶನ: ಜಲಕ್ಷಾಮ ಭೀತಿ !
371ಜೆ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿಗಳ ಅಭೂತಪೂರ್ವ ಬೆಂಬಲ