ಹಿಂಡಲಗಾ ಜೈಲಿನ ಮೇಲೆ ಪೊಲೀಸ್‌ ದಾಳಿ

KannadaprabhaNewsNetwork |  
Published : Aug 11, 2024, 01:33 AM IST
ಹಿಂಡಲಗಾ ಜೈಲಿನ ಮೇಲೆ ಪೊಲೀಸ್‌ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲಿಸಿದರು | Kannada Prabha

ಸಾರಾಂಶ

ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ಶನಿವಾರ ಬೆಳ್ಳಂಬೆಳಗ್ಗೆ ಪೊಲೀಸ್‌ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಹಲವಾರು ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ಶನಿವಾರ ಬೆಳ್ಳಂಬೆಳಗ್ಗೆ ಪೊಲೀಸ್‌ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಹಲವಾರು ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್, ಡಿಸಿಪಿ ಜಗದೀಶ ರೋಹನ್‌ ಸೇರಿದಂತೆ 40 ಪೊಲೀಸ್‌ ಅಧಿಕಾರಿಗಳು ಹಾಗೂ 220ಕ್ಕೂ ಅಧಿಕ ಪೊಲೀಸ್‌ ಸಿಬ್ಬಂದಿ ಜೈಲಿನ ಮೇಲೆ ದಿಢೀರ್‌ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದರು. ದಾಳಿ ವೇಳೆ ಜೈಲಿನಲ್ಲಿ ಮೂರು ಚಾಕು, 10 ತಂಬಾಕು ಪ್ಯಾಕೇಟ್‌, ಸಿಗರೇಟ್‌, ಸಣ್ಣ ಹೀಟರ್‌ ವೈರ್‌ ಬಂಡಲ್‌ ಹಾಗೂ ಎಲೆಕ್ಟ್ರಿಕಲ್ ಒಲೆ ಜಫ್ತಿ ಮಾಡಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸ್‌ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗ್ಳೂರು-ಹೈದ್ರಾಬಾದ್‌ ಹೈಸ್ಪೀಡ್‌ ರೈಲಿಗೆ ಒಪ್ಪಿಗೆ?
ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಇನ್ಮುಂದೆ ‘ಸಮಗ್ರ ಪ್ರಗತಿ ಪತ್ರ’