ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರಿನಲ್ಲಿ ಪೊಲೀಸ್ ಪೇದೆ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿರುವ ಕುರಿತು ಗುರುವಾರ ಪ್ರತಿಕ್ರಿಯಿಸಿದ ಅವರು, ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾದ ಬಳಿಕವೂ ಎಚ್ಚೆತ್ತುಕೊಂಡಿಲ್ಲ. ಪೊಲೀಸರಿಗೆ ಹೀಗಾದರೆ ಕಾನೂನು ಸುವ್ಯವಸ್ಥೆ ಎಲ್ಲಿದೆ ಹೇಳಿ ಎಂದು ಪ್ರಶ್ನಿಸಿದರು.
ಮೈಸೂರು ಮಾತ್ರವಲ್ಲದೇ ಬಳ್ಳಾರಿ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ಗಲಾಟೆಗಳು ನಡೆದಿವೆ. ಹುಬ್ಬಳ್ಳಿ ಘಟನೆ ಅತ್ಯಂತ ಖಂಡನಿಯ. ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವುದು ಅಮಾನವೀಯ. ಈ ವಿಚಾರದಲ್ಲಿ ಸಂತ್ರಸ್ತ ಮಹಿಳೆಯ ವಿರುದ್ಧವೇ ಕಾಂಗ್ರೆಸ್ ಆರೋಪ ಮಾಡುತ್ತಿರುವುದು ಸರಿಯಲ್ಲ. ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಸಮಗ್ರವಾದ ತನಿಖೆಯಾಗಲಿ ಎಂದು ಅವರು ಆಗ್ರಹಿಸಿದರು.ಚಾಮರಾಜ ವಿಧಾನಸಭೆ ಕ್ಷೇತ್ರದ ಟಿಕೆಟ್ ಗಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಮಾಜಿ ಶಾಸಕ ಎಲ್. ನಾಗೇಂದ್ರ ನಡುವೆ ವಾಕ್ಸಮರ ವಿಚಾರವಾಗಿ ಈ ಬಗ್ಗೆ ಈಗಾಗಲೇ ಮಾತನಾಡಿದ್ದೇನೆ. ಹಲವು ಆಕಾಂಕ್ಷಿಗಳಿರುತ್ತಾರೆ, ಅಂತಿಮ ತೀರ್ಮಾನ ಮಾಡುವುದು ವರಿಷ್ಠರು. ಪಕ್ಷದ ಗೆಲುವಿಗೆ ಶ್ರಮಿಸುವುದು ಎಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಅವರು ಹೇಳಿದರು.
ಶುದ್ಧ ನೀರು ಪೂರೈಸಿರಾಜ್ಯದ ಪ್ರಮುಖ ನದಿಗಳ ನೀರು ಕಲುಷಿತಗೊಂಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಾವೇರಿ, ಕಪಿಲ, ಲಕ್ಷ್ಮಣತೀರ್ಥ ಸೇರಿದಂತೆ ರಾಜ್ಯದ ಬಹುತೇಕ ನದಿಗಳು ಕಲುಷಿತಗೊಂಡಿವೆ. ನದಿಗಳ ಸ್ವಚ್ಛತೆಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು. ಅಮೃತ್ ಯೋಜನೆ, ಜಲಜೀವನ್ ಮಿಷನ್ ಯೋಜನೆಗಳನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು. ಜನರಿಗೆ ಶುದ್ಧವಾದ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದರು.