ಕನ್ನಡಪ್ರಭ ವಾರ್ತೆ ಬಾದಾಮಿ
17 ವರ್ಷ ಸೈನಿಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ನಂತರ ನಾಲ್ಕು ವರ್ಷದ ಹಿಂದೆ ಪೊಲೀಸ್ ಇಲಾಖೆಗೆ ಸೇರಿದ್ದು, ಸದ್ಯ ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಕರ್ತವ್ಯ ಸಲ್ಲಿಸುತ್ತಿರುವ ವೇಳೆ ಹೃದಯಘಾತದಿಂದ ನಿಧನರಾಗಿದ್ದಾರೆ. ಮೃತರ ಪಾರ್ಥಿವ ಶರೀರ ಬುಧವಾರ ಬೆಳಗ್ಗೆ ಸ್ವಗ್ರಾಮ ಚಿಂಚಲಕಟ್ಟಿ ಗ್ರಾಮಕ್ಕೆ ಬರಲಿದ್ದು, ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಜರುಗಲಿದೆ. ಮೃತರಿಗೆ ಪತ್ನಿ ಮೈನಾವತಿ, ಪುತ್ರ ಅಕ್ಷಯ (10), ಪುತ್ರಿ ಅಮೃತಾ (6) ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ.
ಗ್ರಾಮದಲ್ಲಿ ನೀರವ ಮೌನ; ಮೃತ ಹನಮಂತ ಮೈಲಾರ ನಿಧನಕ್ಕೆ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕುಟುಂಬಸ್ಥರು ಮಂಗಳವಾರ ಮಧ್ಯಾಹ್ನವೇ ಬೆಂಗಳೂರಿಗೆ ತೆರಳಿದ್ದಾರೆ.