
16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ । 6,640 ಅಭ್ಯರ್ಥಿಗಳು ಹಾಜರು, 451 ಅಭ್ಯರ್ಥಿಗಳು ಗೈರು
ಕಳೆದ ಎರಡ್ಮೂರು ದಿನದಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾನುವಾರವೂ ಭಾರೀ ಮಳೆ ಸುರಿಯಿತು. ಮಳೆಯ ನಡುವೆಯೂ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಗೆ ಚಿಕ್ಕಮಗಳೂರಿನ 16 ಪರೀಕ್ಷಾ ಕೇಂದ್ರದಲ್ಲಿ ಒಟ್ಟು 7,091 ಅಭ್ಯರ್ಥಿಗಳು ಪರೀಕ್ಷೆ ಬರೆಯುವುದಕ್ಕೆ ನೋಂದಣಿ ಮಾಡಿಕೊಂಡಿದ್ದರು.ಈ ಪೈಕಿ 6,640 ಅಭ್ಯರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದು, 451 ಅಭ್ಯರ್ಥಿಗಳು ಗೈರಾಗಿದ್ದಾರೆ. ಬೆಳಗ್ಗೆ 10.30 ರಿಂದ 12 ಗಂಟೆ ವರೆಗೆ ಪರೀಕ್ಷೆ ನಡೆಯಿತು. ಮೊದಲೇ ಸೂಚನೆಯಂತೆ ಅಭ್ಯರ್ಥಿಗಳು ಕನಿಷ್ಠ ಒಂದು ಗಂಟೆ ಪರೀಕ್ಷೆಗೆ ಆಗಮಿಸಿದ್ದರು. ಪ್ರತಿಯೊಬ್ಬರನ್ನು ಫೇಸ್ ರೆಕಗ್ನೀಶನ್ ಮತ್ತು ಮೆಟಲ್ ಡಿಟೆಕ್ಟರ್ ತಪಾಸಣೆ ನಡೆಸಿ ಕೊಠಡಿಗೆ ಪ್ರವೇಶಕ್ಕೆ ಅವಕಾಶ ನೀಡಲಾಯಿತು.ಪ್ರಶ್ನೆ ಪತ್ರಿಕೆ ಹಾಗೂ ಒಆರ್‌ಎಂ ಶೀಟ್‌ಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಜಿಲ್ಲಾಧಿಕಾರಿ ಕಚೇರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ನಿಯೋಜಿಸಿದ ಅಧಿಕಾರಿ -ಸಿಬ್ಬಂದಿ ತಂಡ ವ್ಯವಸ್ಥಿತವಾಗಿ ನೆರವೇರಿಸಿದರು.ಜಾಮರ್. ಸಿಸಿ ಕ್ಯಾಮರಾ ಅಳವಡಿಕೆ: ಪರೀಕ್ಷಾ ಕಾರ್ಯದಲ್ಲಿ ತೊಡಗಿದ ಯಾವುದೇ ಅಧಿಕಾರಿ ಸಿಬ್ಬಂದಿ ಮೊಬೈಲ್ ಬಳಕೆಗೆ ನಿರ್ಬಂಧ ವಿಧಿಸಲಾಗಿತ್ತು. ಪರೀಕ್ಷಾ ಕೇಂದ್ರದಲ್ಲಿ ನೆಟ್‌ವರ್ಕ್ ಜಾಮರ್ ಅಳವಡಿಸಿ, ಪ್ರತಿ ಪರೀಕ್ಷಾ ಕೊಠಡಿ ಹಾಗೂ ಆವರಣದಲ್ಲಿ ಸಿಸಿ ಕ್ಯಾಮರಾ ಕಣ್ಗಾವಲು ಇಡಲಾಗಿತ್ತು.ಇನ್ನೂ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಅಧಿಕಾರಿ ಸಿಬಂದಿ ತಂಡ ನಿಯೋಜಿಸುವ ಮೂಲಕ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ಸಣ್ಣ ಲೋಪ ದೋಷ ಉಂಟಾಗದಂತೆ ಪರೀಕ್ಷೆ ಸುಸೂತ್ರವಾಗಿ ನಡೆಸಲಾಗಿದೆ ಎಂದು ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳಾ ಕನ್ನಡಪ್ರಭಕ್ಕೆ ಮಾಹಿತಿ ನೀಡಿದ್ದಾರೆ.-- ಬಾಕ್ಸ್ --ಜಿಲ್ಲಾಧಿಕಾರಿಯಿಂದ ವಿವಿಧ ಪರೀಕ್ಷಾ ಕೇಂದ್ರಕ್ಕೆ ಭೇಟಿಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳಿಗೆ ನಡೆದ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.