ಕನ್ನಡಪ್ರಭ ವಾರ್ತೆ ಮದ್ದೂರು
ದಸಂಸ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಮಾತನಾಡಿ, ಕತ್ತರಘಟ್ಟ ಗ್ರಾಮದ ಯುವಕ ಜಯಕುಮಾರ್ ಸಾವಿಗೆ ಪೊಲಿಸರೇ ನೇರ ಕಾರಣರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಸಂಬಂಧ ಪುಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮವಾಗಬೇಕು. ಇಲ್ಲದಿದ್ದರೆ ನ್ಯಾಯ ಸಿಗುವವರೆಗೂ ಉಗ್ರ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.ಮೃತ ಜಯಕುಮಾರನ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 50 ಲಕ್ಷ ರು. ಪರಿಹಾರ ನೀಡಬೇಕು. ಆತನ ಪತ್ನಿಗೆ ಸರ್ಕಾರಿ ನೌಕರಿ ನೀಡಬೇಕು. ಕೊಲೆ ಮಾಡಿರುವ ವ್ಯಕ್ತಿಯ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡು ಗಲ್ಲುಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.
ಕೊಲೆ ಆರೋಪಿ ರಕ್ಷಿಸಲು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಡಾ.ಸ್ಮಿತಾರಾಮು ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಶಂಕರ್, ಮಾದೇಶ್, ಅಂಬರೀಷ್, ಮುತ್ತಯ್ಯ, ಬಸವರಾಜು, ವೆಂಕಟೇಶ್, ಶಿವು, ಆನಂದ್, ಅಣ್ಣೂರು ರಾಜಣ್ಣ, ರಂಗಸ್ವಾಮಿ, ಡಿ.ಕೆ.ಕೃಷ್ಣ, ನಗರಕೆರೆ ಜಗದೀಶ್, ಸಣ್ಣಮ್ಮ ಇದ್ದರು.