ಆರಿಫ್‌ ಹತ್ಯೆ ಆರೋಪಿಗಳ ಬಂಧನಕ್ಕೆ ಮುಂದುವರಿದ ಪೊಲೀಸ್‌ ಬೇಟೆ

KannadaprabhaNewsNetwork |  
Published : Mar 31, 2026, 03:00 AM IST
25ಕೆಎಂಎನ್ ಡಿ17 | Kannada Prabha

ಸಾರಾಂಶ

ನಗರದ ಹೊರವಲಯದ ತೊಕ್ಕೊಟ್ಟಿನಲ್ಲಿ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ರೌಡಿ ಶೀಟರ್‌ ಆರಿಫ್ ಹುಸೈನ್‌ (46) ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಆರು ಮಂದಿ ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ಬಂಧನಕ್ಕೆ ಜಾಲ ಬೀಸಿದ್ದಾರೆ.

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟಿನಲ್ಲಿ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ರೌಡಿ ಶೀಟರ್‌ ಆರಿಫ್ ಹುಸೈನ್‌ (46) ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಆರು ಮಂದಿ ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ಬಂಧನಕ್ಕೆ ಜಾಲ ಬೀಸಿದ್ದಾರೆ.ಆದರೆ ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ ಅವರನ್ನು ತಕ್ಷಣ ಬಂಧಿಸುವುದು ತನಿಖಾ ತಂಡಗಳಿಗೆ ಸವಾಲಾಗಿ ಪರಿಣಮಿಸಿದೆ. ಹಾಗಾಗಿ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವಹಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀ‌ರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.ಈವರೆಗೆ ನಡೆದ ತನಿಖೆಯಲ್ಲಿ ಈ ಕೊಲೆ ಕೃತ್ಯದಲ್ಲಿ ಇನ್ನಷ್ಟು ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದೆ. ಆರೋಪಿಗಳಿಗೆ ಕೃತ್ಯ ಎಸಗಲು ಹಾಗೂ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಶಂಕಿತ ಕೆಲವು ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಕೃತ್ಯದಲ್ಲಿ ಅವರ ಪಾತ್ರ ದೃಢಪಟ್ಟರೆ, ಅವರನ್ನು ಕೂಡ ಬಂಧಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಆರೋಪಿಗಳಿಗೆ ಯಾರಾದರೂ ಯಾವುದೇ ರೀತಿಯಲ್ಲಿ ಸಹಾಯ ಮಾಡಿದರೆ ಬಿಎನ್ಎಸ್ ಸೆಕ್ಷನ್ 249(ಎ) ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಕಮಿಷನ‌ರ್ ಎಚ್ಚರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವರ ನಾಡಿನಲ್ಲಿ ಮಹಾ ಸಮರಕ್ಕೆ ಅಖಾಡ ಸಿದ್ಧ
ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಅಗತ್ಯ: ಪಲ್ಲವಿ