ಚಿಕ್ಕಮಗಳೂರು: ಬೆಂಗಳೂರಿನ ಜ್ಞಾನಭಾರತಿ ಸಮೀಪದ ಸೊಣ್ಣೇನಹಳ್ಳಿ ಸರ್ಕಲ್ ಬಳಿ ಶನಿವಾರ ಬೆಳಗ್ಗೆ ಸ್ಫೋಟಕ ಪತ್ತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.
- ಸೊಣ್ಣೇನಹಳ್ಳಿ ಸ್ಫೋಟಕ ಪತ್ತೆ ಹಿನ್ನೆಲೆ
ಚಿಕ್ಕಮಗಳೂರು: ಬೆಂಗಳೂರಿನ ಜ್ಞಾನಭಾರತಿ ಸಮೀಪದ ಸೊಣ್ಣೇನಹಳ್ಳಿ ಸರ್ಕಲ್ ಬಳಿ ಶನಿವಾರ ಬೆಳಗ್ಗೆ ಸ್ಫೋಟಕ ಪತ್ತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.ಭಾನುವಾರ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಯಾವುದೇ ಅಹಿತಕರ ಘಟನೆಗಳು ಸಂಭವಿಸ ದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಇಲಾಖೆ ವಿಶೇಷ ನಿಗಾ ವಹಿಸಿದೆ. ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವ ಜನಿ ಕರು ಸೇರುವ ಸ್ಥಳಗಳು, ಬಸ್ ನಿಲ್ದಾಣಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ.ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪೊಲೀಸರು ಪ್ರಯಾಣಿಕರ ಸುರಕ್ಷತೆ ದೃಷ್ಟಿ ಯಿಂದ ಬಸ್ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳು, ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳಗಳು, ಬಸ್ಗಳು ನಿಲುಗಡೆಯಾಗುವ ಪ್ರದೇಶ ಸೇರಿದಂತೆ ವಿವಿಧ ಭಾಗಗಳಲ್ಲಿ ವಿಶೇಷ ತಪಾಸಣೆ ನಡೆಸಿದರು. ಡಾಗ್ ಸ್ಕ್ವಾಡ್ ಸಹಾಯ ದಿಂದ ಬಸ್ ನಿಲ್ದಾಣದ ಮೂಲೆ ಮೂಲೆಗಳಲ್ಲೂ ಪರಿಶೀಲನೆ ನಡೆಸಿ ಅನುಮಾನಾಸ್ಪದ ವಸ್ತುಗಳ ಬಗ್ಗೆ ನಿಗಾ ವಹಿಸಲಾಯಿತು.ಇದಲ್ಲದೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವ ಪ್ರದೇಶ ಹಾಗೂ ಪ್ರಮುಖ ಸ್ಥಳಗಳಲ್ಲಿಯೂ ಪೊಲೀಸ್ ಸಿಬ್ಬಂದಿ ಗಸ್ತು ಮತ್ತು ತಪಾಸಣೆ ನಡೆಸಿದರು. ಅನುಮಾನಾಸ್ಪದ ವ್ಯಕ್ತಿ, ವಸ್ತುಗಳು ಹಾಗೂ ಚಟುವಟಿಕೆಗಳ ಮೇಲೆ ನಿಗಾ ಇರಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.ಬೆಂಗಳೂರಿನ ಸೊಣ್ಣೇನಹಳ್ಳಿ ಸರ್ಕಲ್ ಸಮೀಪ ಸ್ಫೋಟಕ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವದ ಸಾರ್ವಜನಿಕ ಆಚರಣೆಗಳು ಶಾಂತಿಯುತವಾಗಿ ನಡೆಸಲು ಚಿಕ್ಕಮಗಳೂರು ಜಿಲ್ಲೆಯಲ್ಲೂ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ಕ್ರಮ ಕೈಗೊಂಡಿದೆ.ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಆದರೆ, ಎಲ್ಲಿಯಾದರೂ ಅನುಮಾನಾಸ್ಪದ ವಸ್ತುಗಳು ಅಥವಾ ವ್ಯಕ್ತಿಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಫೋಟೋ:
ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶನಿವಾರ ಚಿಕ್ಕಮಗಳೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸ್ ತಪಾಸಣೆ, ಡಾಗ್ ಸ್ಕ್ವಾಡ್ನಿಂದ ಪರಿಶೀಲನೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.