ರಾಮನಗರ:
ತಾಲೂಕು ದ್ಯಾವರಸೆಗೌಡನದೊಡ್ಡಿ ಗ್ರಾಮದ ಬಳಿಯ ಜಮೀನನಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಜೂಜಾಟ ಆಡುತ್ತಿರುತ್ತಾರೆಂದು ಬಂದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಜೂಜಾಟದಲ್ಲಿ ತೊಡಗಿದ್ದ 5 ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, 28,600 ರು.ಗಳನ್ನು ವಶಪಡಿಸಿಕೊಂಡಿದ್ದಾರೆ.
ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕೆಎಸ್‌ಆರ್‌ಟಿಸಿ ಡಿಪೋ ಎದುರು ಪೆಪ್ಸಿ ಗೋಡೌನ್ ಬಳಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಜೂಜಾಟ ಆಡುತ್ತಿರುತ್ತಾರೆಂದು ಬಂದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ 6 ಜನರನ್ನು ವಶಕ್ಕೆ ಪಡೆದು, 17,050 ರು. ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದಪುರದ ಬಳಿಯ ಇರುವ ಖಾಲಿ ನೀವೇಶನದಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಜೂಜಾಟ ಆಡುತ್ತಿದ್ದ ಅಡ್ಡದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಜೂಜಿನಲ್ಲಿ ತೊಡಗಿದ್ದ 4 ಮಂದಿಯನ್ನು ವಶಕ್ಕೆ ಪಡೆದು, 2160 ರು.ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.