ಪೊಲೀಸ್‌ ನೇಮಕಾತಿ ಪರೀಕ್ಷೆ ಆ.2ರಂದು

KannadaprabhaNewsNetwork |  
Published : Jul 30, 2026, 02:45 AM IST
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ | Kannada Prabha

ಸಾರಾಂಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಾಗರಿಕ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು ಆ. 2ರಂದು ಬೆಳಗ್ಗೆ 10.30ರಿಂದ 12ರ ವರೆಗೆ ನಡೆಯಲಿದ್ದು ಅಭ್ಯರ್ಥಿಗಳಿಗೆ ಹಲವು ಸೂಚನೆ ನೀಡಲಾಗಿದೆ.

ಧಾರವಾಡ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಾಗರಿಕ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು ಆ. 2ರಂದು ಬೆಳಗ್ಗೆ 10.30ರಿಂದ 12ರ ವರೆಗೆ ನಡೆಯಲಿದ್ದು ಅಭ್ಯರ್ಥಿಗಳಿಗೆ ಹಲವು ಸೂಚನೆ ನೀಡಲಾಗಿದೆ.

ಈ ಕುರಿತು ಪ್ರಕಟಣೆ ನೀಡಿರುವ ಎಸ್ಪಿ ಗುಂಜನ್ ಆರ್ಯ, ಪುರುಷರು ಅರ್ಧ ತೋಳಿನ ಶರ್ಟ್‌ ಧರಿಸುವುದು, ಜೇಬು ಇಲ್ಲದಿರುವ ಅಥವಾ ಕಡಿಮೆ ಜೇಬುಗಳಿರುವ ಪ್ಯಾಂಟ್‌ ಧರಿಸಬೇಕು. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್‌ಗೆ ಅನುಮತಿ ಇಲ್ಲ. ಜಿಪ್ ಪಾಕೆಟ್‌, ಪಾಕೆಟ್‌, ದೊಡ್ಡ ಬಟನ್‌ ಮತ್ತು ವಿಸ್ತಾರ ಕಸೂತಿ ಇರುವ ಬಟ್ಟೆ ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂ ನಿಷೇಧಿಸಿದ್ದು ಕುತ್ತಿಗೆ ಸುತ್ತ ಲೋಹದ ಆಭರಣ ಧರಿಸುವುದು ಅಥವಾ ಕಿವಿಯೋಲೆ, ಉಂಗುರ ಮತ್ತು ಕಡಗ ಧರಿಸುವುದು ನಿಷೇಧಿಸಲಾಗಿದೆ.

ಮಹಿಳೆಯರಿಗೆ ಸೂಚನೆ:

ಮಹಿಳಾ ಅಭ್ಯರ್ಥಿಗಳು ವಿಸ್ತಾರ ಕಸೂತಿ, ಹೂ, ಬ್ರೂಜ್‌ ಅಥವಾ ಬಟನ್‌ ಹೊಂದಿರುವ ಬಟ್ಟೆ ಧರಿಸುವಂತಿಲ್ಲ. ಪೂರ್ಣ ತೋಳಿನ ಬಟ್ಟೆ, ಜೀನ್ಸ್ ಪ್ಯಾಂಟ್ ಧರಿಸಬಾರದು, ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಧರಿಸಬೇಕು. ಎತ್ತರವಾದ ಹಿಮ್ಮಡಿಯ ಶೂ, ಚಪ್ಪಲಿ ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂ, ಚಪ್ಪಲಿಗಳನ್ನಾಗಲಿ ಧರಿಸಬಾರದು.

ತಾಳಿ, ಕಾಲುಂಗರ ಓಕೆ:

ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಕಾಲುಂಗರ ಹೊರತುಪಡಿಸಿ ಯಾವುದೇ ರೀತಿಯ ಲೋಹದ ಆಭರಣ ಧರಿಸುವುದನ್ನು ನಿಷೇಧಿಸಿದೆ. ಎಲೆಕ್ಟ್ರಾನಿಕ್ ವಸ್ತು, ಮೊಬೈಲ್, ಪೆನ್ ಡ್ರೈವ್‌ , ಇಯರ್ ಫೋನ್‌, ಮೈಕ್ರೋಫೋನ್‌, ಬ್ಲೂಟೂಥ್ ಸಾಧನೆ ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ. ಆಹಾರ ಪದಾರ್ಥಗಳನ್ನು ನಿಷೇಧಿಸಿದೆ. ಬಣ್ಣದ ಹಾಗೂ ಲೋಹದ ಕುಡಿಯುವ ನೀರಿನ ಬಾಟಲಿಗೂ ಅನುಮತಿ ಇಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಇರಲಿದೆ. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್‌ಗಳು ಮತ್ತು ಲಾಗ್‌ಟೇಬಲ್‌ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸುವಂತಿಲ್ಲ. ಯಾವುದೇ ರೀತಿಯ ಮುಖ ಮುಚ್ಚುವಂತ ಮಾಸ್ಕನ್ನು ಧರಿಸಬಾರದು.

ಪ್ರವೇಶ ಪತ್ರ ತನ್ನಿ:

ಪ್ರವೇಶ ಪ್ರತಿಯೊಂದಿಗೆ ಗುರುತಿನ ಚೀಟಿ ತರುವುದು ಕಡ್ಡಾಯ. ಪರೀಕ್ಷೆಯ ಕೊನೆಯ ಬೆಲ್ ಆಗುವ ವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇಲ್ಲವೆಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಸಿಹಿತ್ಲು ಭಜನಾ ಮಂದಿರ ಸಮೀಪ ಕಡಲ್ಕೊರೆತ ಆರ್ಭಟ ತೀವ್ರ
ಪಕ್ಷ ಬಲಪಡಿಸಲು ‘ಸಂಘಟನ್ ಸೃಜನ್’ ಅಭಿಯಾನ: ಜಯಂತ್