ಈದ್ ಹಬ್ಬದ ಹಿನ್ನೆಲೆ ಪೊಲೀಸ್ ರೂಟ್ ಮಾರ್ಚ್

KannadaprabhaNewsNetwork |  
Published : Aug 26, 2026, 03:15 AM IST
ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ನಗರದ ವಿವಿಧ ಪ್ರದೇಶಗಳಲ್ಲಿ ರೂಟ್ ಮಾರ್ಚ್ ನಡೆಸಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ನಗರದ ವಿವಿಧ ಪ್ರದೇಶಗಳಲ್ಲಿ ರೂಟ್ ಮಾರ್ಚ್ ನಡೆಸಿದರು. ನಗರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕೆಎಸ್‌ಆರ್‌ಪಿ ಮತ್ತು ಸಿಎಆರ್ ಸಿಬ್ಬಂದಿ ಒಳಗೊಂಡ ತಂಡವು ಅನಗೋಳ, ಮಾರ್ಕೆಟ್ ಹಾಗೂ ಖಡೆಬಜಾರ್ ಪ್ರದೇಶಗಳಲ್ಲಿ ರೂಟ್ ಮಾರ್ಚ್ ನಡೆಸಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಂದೇಶ ನೀಡಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ನಗರದ ವಿವಿಧ ಪ್ರದೇಶಗಳಲ್ಲಿ ರೂಟ್ ಮಾರ್ಚ್ ನಡೆಸಿದರು. ನಗರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕೆಎಸ್‌ಆರ್‌ಪಿ ಮತ್ತು ಸಿಎಆರ್ ಸಿಬ್ಬಂದಿ ಒಳಗೊಂಡ ತಂಡವು ಅನಗೋಳ, ಮಾರ್ಕೆಟ್ ಹಾಗೂ ಖಡೆಬಜಾರ್ ಪ್ರದೇಶಗಳಲ್ಲಿ ರೂಟ್ ಮಾರ್ಚ್ ನಡೆಸಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಂದೇಶ ನೀಡಿತು.

ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆಯುವಂತೆ ಬೆಳಗಾವಿ ನಗರದಲ್ಲಿ ಅಗತ್ಯ ಪ್ರಮಾಣದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ನಗರದ ಜನರು ಶಾಂತಿ, ಸೌಹಾರ್ದತೆ ಕಾಪಾಡಿಕೊಂಡು ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನೆಗಳ್ಳತನ: ಹುಬ್ಬಳ್ಳಿಯ ಇಬ್ಬರ ಬಂಧನ
ಹಬ್ಬದ ಹೊತ್ತಲ್ಲೇ ಸಕ್ಕರೆ ದರ ಏರಿಕೆ