ಸಿರಾಜ್‌ನನ್ನು ಪೊಲೀಸರು ಎನ್‌ಕೌಂಟರ್‌ ಮಾಡಲಿ

KannadaprabhaNewsNetwork | Published : Apr 4, 2025 12:49 AM

ಸಾರಾಂಶ

ನೇಹಾ ಹಿರೇಮಠ ಹತ್ಯೆಯಾಗಿ ಇನ್ನೂ ಒಂದು ವರ್ಷ ಕಳೆದಿಲ್ಲ. ಈಗ ಮತ್ತೆ ಅಂತಹ ಘಟನೆಗಳು ಮರುಕಳಿಸುತ್ತಿರುವುದು ಆಘಾತಕಾರಿ ಬೆಳವಣಿಗೆ

ಹುಬ್ಬಳ್ಳಿ: ಹಿಂದು ಯುವತಿಗೆ ಕಿರುಕುಳ ನೀಡಿದ ಸಿರಾಜ್‌ನನ್ನು ಪೊಲೀಸರು ಎನ್‌ಕೌಂಟರ್‌ ಮಾಡಲಿ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದರು.

ಈ ನಡುವೆ ನೇಹಾ ಹಿರೇಮಠ ಮೃತಪಟ್ಟು ಒಂದು ವರ್ಷ ಆದ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಏ. 18ರಂದು ತ್ರಿಶೂಲ್‌ ದೀಕ್ಷೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಅನ್ಯಕೋಮಿನ ಯುವಕನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ನಗರದ ಕೆಎಂಸಿಆರ್‌ಐನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯನ್ನು ಗುರುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿ, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನೇಹಾ ಹಿರೇಮಠ ಹತ್ಯೆಯಾಗಿ ಇನ್ನೂ ಒಂದು ವರ್ಷ ಕಳೆದಿಲ್ಲ. ಈಗ ಮತ್ತೆ ಅಂತಹ ಘಟನೆಗಳು ಮರುಕಳಿಸುತ್ತಿರುವುದು ಆಘಾತಕಾರಿ ಬೆಳವಣಿಗೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ಇಂತಹ ಕೃತ್ಯ ಮಾಡುವವರಿಗೆ ಭಯವೇ ಇಲ್ಲದಂತಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರ, ಪೊಲೀಸ್ ಇಲಾಖೆ, ನ್ಯಾಯಾಲಯವೇ ಕಾರಣ. ಇಂತವರನ್ನು ಎನ್‌ಕೌಂಟರ್ ಮಾಡಿ ಬಿಸಾಕಿದ್ದರೆ ಈ ರೀತಿಯ ಕೃತ್ಯ ಮರುಕಳುಸುತ್ತಿರಲಿಲ್ಲ. ಸರ್ಕಾರ ಶಿಕ್ಷೆ ನೀಡದೇ ಇದ್ದರೆ ನಾವೇ ಅವನಿಗೆ ಶಿಕ್ಷೆ ನೀಡುತ್ತೇವೆ ಎಂದರು.

ಸಾವಿರ ಮಹಿಳೆಯರಿಗೆ ತ್ರಿಶೂಲ ದೀಕ್ಷೆ:

ನೇಹಾ ಹಿರೇಮಠ ಹತ್ಯೆಯಾಗಿ ಏ.18ಕ್ಕೆ ಒಂದು ವರ್ಷವಾಗಲಿರುವ ಹಿನ್ನೆಲೆಯಲ್ಲಿ ಶ್ರೀರಾಮಸೇನೆಯಿಂದ 1ಸಾವಿರ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದರು.

ಅಂದು ಬೆಳಗ್ಗೆ 11ಕ್ಕೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಶಿವಕೃಷ್ಣ ಮಂದಿರದಲ್ಲಿ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಹಿಳೆಯರು ಆತ್ಮ ರಕ್ಷಣೆಗೆ ತಮ್ಮ ಬ್ಯಾಗ್‌ನಲ್ಲಿ ತ್ರಿಶೂಲ ಇಟ್ಟುಕೊಳ್ಳಬೇಕು. ಜಿಹಾದಿಗಳು, ಅತ್ಯಾಚಾರಿಗಳು, ಕೊಲೆಗಡುಕರು ಯಾರಾದರೂ ಬಂದರೆ ಅವರಿಗೆ ಚುಚ್ಚುವಂತೆ ಸಲಹೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಹಾಗೂ ಲವ್ ಜಿಹಾದ್ ನಂತಹ ಕೃತ್ಯಗಳು ಹೆಚ್ಚಾಗುತ್ತಿವೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾಂಗ್ರೆಸ್ ಇರುವುದು ಕೇವಲ ಮುಸ್ಲಿಮರ ರಕ್ಷಣೆಗಾಗಿ ಎನ್ನುವಂತಾಗಿದೆ ಎಂದರು.

Share this article