ಪೊಲೀಸರು ಶಿಸ್ತು, ಸಂಯಮ ರೂಢಿಸಿಕೊಳ್ಳಲಿ: ಆರ್.ವೈ. ಅಂಬಿಗೇರ

KannadaprabhaNewsNetwork | Published : Apr 3, 2025 12:31 AM

ಸಾರಾಂಶ

ಪೊಲೀಸರಿಗೆ ಧರ್ಮವೆಂದರೆ ಕಾನೂನು ಕಾಪಾಡುವುದಾಗಿದೆ. ಪೊಲೀಸರಿಗೆ ಗ್ರಂಥವೆಂದರೆ ಸಂವಿಧಾನವಾಗಿದೆ. ಇವೆರಡರ ಅಡಿಯಲ್ಲಿ ಕೆಲಸ ಮಾಡಬೇಕಾಗಿದೆ.

ಹಾವೇರಿ: ಪೊಲೀಸರು ಸಮಾಜದ ಬಗ್ಗೆ ಕಳಕಳಿ ಭಾವನೆ ಹೊಂದಬೇಕು. ಸಾರ್ವಜನಿಕರ ನೆಮ್ಮದಿಗೆ ಕಾರ್ಯಪ್ರವೃತ್ತರಾಗಬೇಕು ಎಂದು ನಿವೃತ್ತ ಪಿಎಸ್‌ಐ ಆರ್.ವೈ. ಅಂಬಿಗೇರ ತಿಳಿಸಿದರು.ನಗರದ ಕೆರಿಮತ್ತಿಹಳ್ಳಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿವರ್ಷ ಏ. 2ರಂದು ಪೊಲೀಸ್ ಧ್ವಜ ದಿನವನ್ನು ಆಚರಿಸಲಾಗುತ್ತದೆ. ಪೊಲೀಸ್ ಧ್ವಜಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಿ ಬಂದ ಹಣವನ್ನು ನಿವೃತ್ತ ಪೊಲೀಸರ ಕ್ಷೇಮಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ಬಳಕೆ ಮಾಡಿಕೊಳ್ಳಲಾಗಿತ್ತದೆ ಎಂದರು.ಪೊಲೀಸ್ ಕರ್ತವ್ಯ ನಿರ್ವಹಿಸುವಾಗ ಪೊಲೀಸ್ ಬಾವುಟ ಅವರ ಬಳಿ ಇರುತ್ತದೆ. ಅವರ ಕರ್ತವ್ಯ ಪ್ರಜ್ಞೆ ಆ ಬಾವುಟವು ಎತ್ತರೆತ್ತರಕ್ಕೆ ಹೋಗುತ್ತದೆ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ಇಲಾಖೆಯ ಘನತೆ ಗೌರವ ಹಾಳಾಗುತ್ತದೆ. ಆದಕಾರಣ ಪೊಲೀಸರು ಶಿಸ್ತು ಮತ್ತು ಸಂಯಮದಿಂದ ಕರ್ತವ್ಯ ನಿರ್ವಹಿಸಬೇಕಾಗಿರುವುದು ಅವಶ್ಯಕವಾಗಿದೆ. ಪೊಲೀಸರಿಗೆ ಧರ್ಮವೆಂದರೆ ಕಾನೂನು ಕಾಪಾಡುವುದಾಗಿದೆ. ಪೊಲೀಸರಿಗೆ ಗ್ರಂಥವೆಂದರೆ ಸಂವಿಧಾನವಾಗಿದೆ. ಇವೆರಡರ ಅಡಿಯಲ್ಲಿ ಕೆಲಸ ಮಾಡಬೇಕಾಗಿದೆ ಎಂದರು.ಪ್ರಭಾರ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ ವರದಿವಾಚನ ನೀಡಿ, ಕರ್ನಾಟಕ ಪೊಲೀಸ್ ಪಡೆಯನ್ನು 1965ರ ಏ. 2ರಂದು ಕರ್ನಾಟಕ ಪೊಲೀಸ್ ಕಾಯ್ದೆಗೆ ಒಳಪಡಿಸಲಾಯಿತು. ಅದರ ಸ್ಮರಣೆಗಾಗಿ ಪ್ರತಿವರ್ಷ ಪೊಲೀಸ್ ಧ್ವಜ ದಿನವನ್ನಾಗಿ ರಾಜ್ಯದ ಎಲ್ಲ ಘಟಕಗಳಲ್ಲಿ ಆಚರಿಸಲಾಗುತ್ತದೆ. ಕಾನೂನು ಹಾಗೂ ಸಾರ್ವಜನಿಕ ಆಸ್ತಿಗಳ ಸಂರಕ್ಷಣೆ ಮಾಡಲು ಈ ದಿನವನ್ನು ಮುಡಿಪಾಗಿಡಲಾಗುತ್ತದೆ ಎಂದರು.ಕಾರ್ಯಕ್ರಮದಲ್ಲಿ ಪರೇಡ್ ಕಮಾಂಡರ್ ಆರ್‌ಪಿಐ ಶಂಕರಗೌಡ ಪಾಟೀಲ್ ಅವರು ಪೊಲೀಸ್ ಪಡೆಗಳ ಪಥಸಂಚಲನದ ನೇತೃತ್ವ ವಹಿಸಿದ್ದರು. ಆರ್‌ಪಿಐ ಅಶೋಕ ಹೊಸಮನಿ ಅವರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್ ಪಥಸಂಚಲನ ನಡೆಸಿತು. ಕಾರ್ಯಕ್ರಮದಲ್ಲಿ ಬ್ಯಾಡಗಿ ಸಿಪಿಐ ಮಾಲತೇಶ ಲಂಬಿ ವಂದಿಸಿದರು ಹಾಗೂ ಸಂತೋಷ ಜವಳಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ವಿಭಾಗದ ಪೊಲೀಸ್ ಡಿಎಸ್‌ಪಿ, ಸಿಪಿಐ, ಪಿಎಸ್‌ಐ, ಎಎಸ್‌ಐ, ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.4ರಂದು ರಾಷ್ಟ್ರಮಟ್ಟದ ವಿಚಾರಸಂಕಿರಣ

ಬ್ಯಾಡಗಿ: ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಏ. 4ರಂದು ವಿಕಸಿತ ಭಾರತ ಸವಾಲುಗಳು ಮತ್ತು ಅವಕಾಶಗಳನ್ನು ಅರ್ಥ ಮಾಡಿಕೊಳ್ಳುವುದು ಎಂಬ ವಿಷಯ ಕುರಿತು ರಾಷ್ಟ್ರಮಟ್ಟದ ಒಂದು ದಿನದ ವಿಚಾರಸಂಕಿರಣ ಏರ್ಪಡಿಲಾಗಿದೆ.ಬೆಳಗ್ಗೆ 10.30ಕ್ಕೆ ನಡೆಯವ ಕಾರ‍್ಯಕ್ರಮವನ್ನು ಶಾಸಕ ಬಸವರಾಜ ಶಿವಣ್ಣವವರ ಉದ್ಘಾಟಿಸುವರು. ಅಧ್ಯಕ್ಷತೆಯನ್ನ ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜನ ಕಡ್ಡಿಪುಡಿ ವಹಿಸಲಿದ್ದಾರೆ. ಹಾವೇರಿ ವಿಶ್ವವಿದ್ಯಾಲಯ ಕುಲಪತಿ ಡಾ. ಸುರೇಶ ಜಂಗಮಶೆಟ್ಟಿ, ಶಶಿಧರ ಆರ್., ಪ್ರವೀಣ ಜಾಧವ ಉಪನ್ಯಾಸ ನೀಡಲಿದ್ದಾರೆ. ಸಮಾರೋಪ ಸಮಾರಂಭ ಸಂಜೆ ನಡೆಯಲಿದೆ.

Share this article