ಅಜೀಜಅಹ್ಮದ ಬಳಗಾನೂರ
ಸಂಧ್ಯಾಕಾಲದಲ್ಲಿ ಒಂಟಿತನ ಅನುಭವಿಸುತ್ತಿರುವ ಹಿರಿಯ ನಾಗರಿಕರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭರವಸೆ ತುಂಬಲು ಪೊಲೀಸ್ ಇಲಾಖೆ ''''''''ಆಸರೆ'''''''' ಎಂಬ ವಿನೂತನ ಕಾರ್ಯಕ್ರಮ ಜಾರಿಗೊಳಿಸಿದ್ದು, ಎರಡ್ಮೂರು ತಿಂಗಳಿಂದ ಮಹಾನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇದು ಕಾರ್ಯನಿರ್ವಹಿಸುತ್ತಿದೆ.
ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ಹಾಗೂ ಹಿರಿಯ ನಾಗರಿಕರ ಕಾಳಜಿಯ ದೃಷ್ಟಿಯಿಂದ ರಾಜ್ಯ ಪೊಲೀಸ್ ಇಲಾಖೆ ಈ ಯೋಜನೆ ಜಾರಿಗೆ ತಂದಿದೆ. ಇದರನ್ವಯ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂಟಿಯಾಗಿ ವಾಸವಾಗಿರುವ ವೃದ್ಧರ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಅವರಿಗೆ ಬೇಕಾದ ಅಗತ್ಯ ಕಾನೂನು ನೆರವು ನೀಡುವ ಜತೆಗೆ ಮಾನವೀಯತೆಯ ಸಹಾಯಹಸ್ತ ನೀಡಲು ಮುಂದಾಗಿದ್ದಾರೆ.ಹು-ಧಾ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದ 2 ತಿಂಗಳಿಂದ ಮನೆ-ಮನೆ ಸಮೀಕ್ಷೆ ನಡೆಸಿ 7025 ಜನರನ್ನು "ಆಸರೆ "ಯಡಿ ಗುರುತಿಸಲಾಗಿದೆ.
ಅಪರಾಧ ಕೃತ್ಯ ನಡೆಯದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡುತ್ತಿದ್ದಾರೆ. ಕಳ್ಳತನ, ದರೋಡೆ ಕೃತ್ಯ ನಡೆದಾಗ ತುರ್ತು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ನೀಡಲಾಗುತ್ತಿದೆ. ಅಹಿತಕರ ಘಟನೆ ನಡೆಯದಂತೆ ಸಿಸಿ ಕ್ಯಾಮೆರಾ, ಅಪಾಯದ ಸೈರನ್ ಅಳವಡಿಕೆ ಸಹಿತ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆಯೂ ಸಿಬ್ಬಂದಿ ಮಾಹಿತಿ ನೀಡುತ್ತಿದ್ದಾರೆ.
ಸಿಬ್ಬಂದಿ ಮೇಲೂ ನಿಗಾ:
ಮಾಹಿತಿ ಸಂಗ್ರಹ:
ಮಕ್ಕಳು ವೃತ್ತಿಯಲ್ಲಿ ವಿವಿಧೆಡೆ ಕೆಲಸ ನಿರ್ವಹಿಸುವ ಹಿನ್ನೆಲೆ ಹಿರಿಯರು ಮನೆಯಲ್ಲಿ ಒಬ್ಬಂಟಿಯಾಗಿ ಇರುತ್ತಾರೆ. ಈ ವೇಳೆ ಅಪರಾಧ ಕೃತ್ಯ, ವಂಚನೆ ನಡೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಆಸರೆ ಯೋಜನೆಯಡಿ ಅವರಿಗೆ ಸುರಕ್ಷತೆ ನೀಡುವ ಜತೆಗೆ ರಕ್ಷಣೆ ನೀಡುವುದು ಇದರ ಉದ್ದೇಶವಾಗಿದೆ. ಎರಡು ತಿಂಗಳಿಂದ ಹು-ಧಾ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಗಿದೆ. ಆಸರೆಯಡಿ ಈ ವರೆಗೆ 7025 ಜನರನ್ನು ಗುರುತಿಸಿದ್ದು ಅವರಿಗೆ ಸುರಕ್ಷತೆ, ಅಗತ್ಯ ಸಹಕಾರ ನೀಡಲಾಗುತ್ತಿದೆ.