ಅಪರಾಧ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಕಾರ್ಯ ಜನಮೆಚ್ಚುಗೆ

KannadaprabhaNewsNetwork |  
Published : Apr 04, 2026, 04:00 AM IST
ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ | Kannada Prabha

ಸಾರಾಂಶ

ವರ್ಷದುದ್ದಕ್ಕೂ ಸದಾ ಒತ್ತಡದ ಮಧ್ಯೆಯೇ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ನೆಮ್ಮದಿಯ ಜೀವನಕ್ಕಾಗಿ, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೊಲೀಸರು ನಿಭಾಯಿಸುವ ಕರ್ತವ್ಯಕ್ಕೆ ಬೆಲೆ ಕಟ್ಟಲಾಗದು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಶ್ಲಾಘಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ವರ್ಷದುದ್ದಕ್ಕೂ ಸದಾ ಒತ್ತಡದ ಮಧ್ಯೆಯೇ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ನೆಮ್ಮದಿಯ ಜೀವನಕ್ಕಾಗಿ, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೊಲೀಸರು ನಿಭಾಯಿಸುವ ಕರ್ತವ್ಯಕ್ಕೆ ಬೆಲೆ ಕಟ್ಟಲಾಗದು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಶ್ಲಾಘಿಸಿದರು.

ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ಬೆಳಗ್ಗೆ ಹಮ್ಮಿಕೊಂಡಿದ್ದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸದಾ ಸಮಾಜದ ಒಳಿತಿಗಾಗಿ ಯಾವ ಪ್ರತಿಫಲಾಪೇಕ್ಷೆಯಿಲ್ಲದೇ ಹಗಲಿರುಳು ಶ್ರಮಿಸುವ ಪೊಲೀಸರು ಕಾರ್ಯ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಜಿಲ್ಲೆಯ ಕಾನೂನು ಸುವ್ಯವಸ್ಥೆ ಗಟ್ಟಿಗೊಳಿಸುವಲ್ಲಿ ಪೊಲೀಸರ ಕಾರ್ಯ ಅಪ್ರತಿಮವಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಸುರಕ್ಷತೆ ಕಾಪಾಡಿ ಸಮಾಜದಲ್ಲಿ ನೆಮ್ಮದಿಯ ಜೀವನಕ್ಕೆ ಕಾರಣವಾಗಿದೆ. ಪೊಲೀಸರ ಕಾರ್ಯ ಸರಳವಲ್ಲ ಅದೊಂದು, ಅತ್ಯಂತ ಕಠಿಣ ಕೆಲಸ. ನಾವೆಲ್ಲ ನೋಡಿದ್ದೇವೆ. ಅಪರಾಧ ತಡೆ ಸೇರಿದಂತೆ ಯಾವುದೇ ಅಪರಾಧ ತಡೆಗೆ ತುರ್ತು ಸ್ಪಂದನೆ ಪೊಲೀಸರದ್ದಾಗಿದೆ ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಈ ದಿನದಂದು ಹೆಚ್ಚು ಶ್ರದ್ಧಾಪೂರ್ವಕವಾಗಿ, ರಚನಾತ್ಮಕವಾಗಿ ಮತ್ತು ನಿಷ್ಠೆಯೊಂದಿಗೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಸೇವೆಯಲ್ಲಿರುವ ಪೊಲೀಸ್ ಸಿಬ್ಬಂದಿ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ನಮ್ಮ ಸಂಕಲ್ಪವನ್ನು ಮತ್ತಷ್ಟು ದೃಢಪಡಿಸಿಕೊಳ್ಳುವುದಾಗಿದೆ ಎಂದರು. ನಿವೃತ್ತ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಕೆ.ಮಾರಿಹಾಳ ಧ್ವಜವಂದನೆ ಸ್ವೀಕರಿಸಿ ಮಾತನಾಡಿ, ಇತಿಹಾಸ ತ್ಯಾಗ ಶೌರ್ಯ ಅಚಲ ನಿಷ್ಠೆಯ ಪ್ರತಿಬಿಂಬವಾಗಿದೆ. ಧ್ವಜದಡಿ ಸೇವೆ ಮಾಡಿರುವ ಪ್ರತಿ ಹೃದಯದಲ್ಲಿ ದೇಶ ಭಕ್ತಿ,ಕರ್ತವ್ಯ ನಿಷ್ಠೆ ಮತ್ತು ಸೇವಾ ಮನೋಭಾವ ಹೊಂದಿರುತ್ತಾರೆ. ಪೊಲೀಸ್ ಧ್ವಜವೂ ಚಿಹ್ನೆಯಲ್ಲ ಅದೊಂದು ಮಹತ್ವದ್ದು. ಇದು ಕರ್ತವ್ಯವಲ್ಲ ಇದೊಂದು ಬದ್ಧತೆ, ಜನರ ವಿಶ್ವಾಸವನ್ನು ಕಾಪಾಡುವ ಪವಿತ್ರ ಜವಾಬ್ದಾರಿಯಾಗಿದೆ ಎಂದು ಪೊಲೀಸರ ಕರ್ತವ್ಯವನ್ನು ಪ್ರಶಸಂಸಿದರು.ಕಾರ್ಯಕ್ರಮದಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ, ಐಆರ್‌ಬಿ ಡೆಪ್ಯೂಟಿ ಕಮಾಂಡೆಂಟ್ ರಾಚಪ್ಪ ಕಾಜಗಾರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಡಿವೈಎಸ್ಪಿ ನಾಗರಾಜ.ಡಿ ಸೇರಿದಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ನಿವೃತ್ತ ಅಧಿಕಾರಿ, ಸಿಬ್ಬಂದಿ ಸಾರ್ವಜನಿಕರು ಭಾಗವಹಿಸಿದ್ದರು. ನಿವೃತ್ತ ಶಿಕ್ಷಕ ಎಚ್.ಎ.ಮಮದಾಪುರ ಹಾಗೂ ದಶರಥ ನಿರೂಪಿಸಿದರು.

ಆಕರ್ಷಕ ಪಥಸಂಚಲನ:

ಪರೇಡ್ ಕಮಾಂಡರ್‌ ಐ.ಎಸ್.ತೇಲಿ ನೇತೃತ್ವದಲ್ಲಿ ಪೊಲೀಸ್ ತಂಡಗಳು ಆಕರ್ಷಕ ಪಥ ಸಂಚಲನ ನಡೆಸಿಕೊಟ್ಟರು. ಅರ್ಜುನ ಭಜಂತ್ರಿ ಹಾಗೂ ಸುರೇಶ ಉತ್ಲಾಸಕರ ನೇತೃತ್ವದ ತಂಡ ಕದಮ್, ಕದಮ್ ಬಡಾಯೆ ಜಾಯೆ ಸೇರಿದಂತೆ ಸುಶ್ರಾವ್ಯ ಸಂಗೀತದ ನಿನಾದ ಬ್ಯಾಂಡ್ ಮೂಲಕ ನುಡಿಸಿದರು.

ಜಿಲ್ಲೆಯ ಪೊಲೀಸರ ಕಾರ್ಯದಕ್ಷತೆಗೆ ಹೆಸರುವಾಸಿಯಾಗಿದ್ದಾರೆ. ಇದಕ್ಕೆ ತಾಜಾ ನಿದರ್ಶನವೇ ಇತ್ತೀಚೆಗಷ್ಟೇ ಜಿಲ್ಲೆಯ ಐವರು ಪೊಲೀಸ್ ಅಧಿಕಾರಿ, ಸಿಬ್ಬಂದಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನವಾಗಿದ್ದು, ಹೆಮ್ಮ ತರುವುದರ ಜೊತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ದಕ್ಷ ಕಾರ್ಯವೈಖರಿಗೆ ಸಾಕ್ಷಿಯಾಗಿದೆ.

-ಡಾ.ಆನಂದ.ಕೆ, ಜಿಲ್ಲಾಧಿಕಾರಿ.

ತಂತ್ರಜ್ಞಾನ ಯುಗದಲ್ಲಿ ಅಪರಾಧ ಪ್ರಕರಣಗಳ ಸ್ವರೂಪ ಬೇರೆ ಬೇರೆಯಾಗಿದೆ. ಪೊಲೀಸ್ ಸೇವೆ ಸ್ವರೂಪ ಗಮನಾರ್ಹ ಬದಲಾವಣೆಯಾಗಿದ್ದು, ತಂತ್ರಜ್ಞಾನದ ಬಗ್ಗೆ ತರಬೇತಿ ನೀಡಿ, ತಂತ್ರಜ್ಞಾನದ ಬಳಕೆಯಿಂದ ಅಪರಾಧಗಳ ಪ್ರಕರಣಗಳನ್ನು ಬೇಧಿಸಲು ಸಹಾಯಕವಾಗಿದೆ.

-ರಿಷಿ ಆನಂದ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ.ಇಲಾಖೆಯಲ್ಲಿ ಅನೇಕ ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಪೊಲೀಸರ ಸೇವೆ, ತ್ಯಾಗ ಮನೋಭಾವನೆ ಗೌರವಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ.ಧ್ವಜ ದಿನಾಚರಣೆ ಸಂದರ್ಭದಲ್ಲಿ ಪೊಲೀಸ್ ಧ್ವಜಗಳನ್ನು ಮಾರಾಟ ಮಾಡಿ ಧ್ವಜಗಳ ಮಾರಾಟದಿಂದ ಸಂಗ್ರಹವಾದ ವಂತಿಗೆಯನ್ನು ನಿವೃತ್ತ ಮತ್ತು ಸೇವಾ ನಿರತ ಪೊಲೀಸರ ಕ್ಷೇಮಾಭಿವೃದ್ಧಿಗೆ ಉಪಯೋಗಿಸಿಕೊಳ್ಳಲಾಗುತ್ತದೆ.

-ಲಕ್ಷ್ಮಣ ನಿಂಬರಗಿ,

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಂಥನಾಳ ಸಂಗನಬಸವ ಶಿವಯೋಗಿಗಳ ಸ್ಮಾರಕ ನಿರ್ಮಾಣಕ್ಕೆ ಆಗ್ರಹ
ಪೂರ್ವಿಜರ ಧರ್ಮ ಪರಂಪರೆಯಿಂದ ಹಿಂದೂ ಧರ್ಮ ಜೀವಂತಿಕೆ