ಮಳೆಯಲ್ಲೂ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಕೆ ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸರ ಸ್ಮಾರಕದ ಪುತ್ಥಳಿಗೆ ಪುಷ್ಪಗುಚ್ಛ ಇರಿಸಿ ಗೌರವ ಸಲ್ಲಿಸಿ ಮಾತನಾಡಿದರು.
ದೇಶದಲ್ಲಿ ನಾವುಗಳು ರಾತ್ರಿ ವೇಳೆ ನೆಮ್ಮದಿಯಾಗಿ ನಿದ್ದೆ ಮಾಡುತ್ತಿದ್ದೇವೆ ಎಂದರೆ ಅದಕ್ಕೆ ಪೊಲೀಸರ ಸೇವೆಯೇ ಕಾರಣ. ಪೊಲೀಸರು ದೇಶಕ್ಕಾಗಿ, ಸಮಾಜಕ್ಕಾಗಿ ದಿನದ 24 ಗಂಟೆಯೂ ಸಾಕಷ್ಟು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ ಎಂದರು.ದೇಶ ಮತ್ತು ಸಮಾಜದ ರಕ್ಷಣೆಗಾಗಿ ಪ್ರತಿ ಕ್ಷಣವೂ ಸೇವೆ ಸಲ್ಲಿಸುತ್ತಿರುವ ಪೊಲೀಸರ ಕಾರ್ಯವನ್ನು ನಾವೆಲ್ಲರೂ ಸ್ಮರಿಸಬೇಕು. ಒಮ್ಮೊಮ್ಮೆ ತಮ್ಮ ಕುಟುಂಬದ ಹಿತವನ್ನು ಬದಿಗೊತ್ತಿ ಸಮಾಜದ ರಕ್ಷಣೆ ಕಾಪಾಡುವ ಪೊಲೀಸರ ಸೇವೆ ಶ್ಲಾಘನೀಯ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ದೇಶದ ಉತ್ತರದ ಗಡಿ ಭಾಗವು ವರ್ಷವಿಡೀ ಹಿಮದಿಂದ ಆವೃತವಾಗಿರುವ ದುರ್ಗಮ ಪ್ರದೇಶವಾಗಿದೆ. ಇಂತಹ ಸಂದರ್ಭದಲ್ಲಿ 1959 ರ ಅ. 21 ರಂದು ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಕರಣ್‌ಸಿಂಗ್ ಎಂಬ ಡಿವೈಎಸ್ಪಿರವರ ನಾಯಕತ್ವದಲ್ಲಿ ಸಿಆರ್‌ಪಿ ತಂಡದವರು ನಮ್ಮ ದೇಶದ ಗಡಿ ಭಾಗದ ಲಡಾಕ್ ಎಂಬಲ್ಲಿ ಕಾವಲು ಕಾಯುತ್ತಿರುವಾಗ ಚೀನಾ ದೇಶದ ಅಸಂಖ್ಯಾತ ಸೈನಿಕರು ನಮ್ಮ ದೇಶದ ಗಡಿ ಭಾಗದಲ್ಲಿ ಒಳನುಗ್ಗಿದರು. ಅಲ್ಲಿದ್ದ ನಮ್ಮ ಸೈನಿಕರು ದೇಶದ ರಕ್ಷಣೆಗಾಗಿ ಕೊನೆಯ ಹನಿ ರಕ್ತ ಇರುವವರೆಗೂ ಅಪ್ರತಿಮವಾಗಿ ಹೋರಾಡಿ ವೀರ ಮರಣ ಹೊಂದಿದರು ಎಂದು ಸ್ಮರಿಸಿದರು.
ಈ ಬಾರಿ ತುಮಕೂರು ಜಿಲ್ಲೆಯ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ಮಹೇಶ್ ಜಿ.ವಿ. ಸೇರಿದಂತೆ ಕರ್ನಾಟಕದಲ್ಲಿ 5 ಮಂದಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ ಎಂದು ಸ್ಮರಿಸಿದರು.
ಇದೇ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದರು.
ಜಯಂತಕುಮಾರ್ ನ್ಯಾಯಾಧೀಶ