ಕನ್ನಡಪ್ರಭ ವಾರ್ತೆ ಹಲಗೂರು
ಹಾಡ್ಲಿ ಸರ್ಕಲ್‌ನಲ್ಲಿ ಕಮ್ಯುನಿಸ್ಟ್ ಪಕ್ಷದಿಂದ ಡಿ.21ರಂದು ಬೆಂಗಳೂರಿನಲ್ಲಿ ನಡೆಯಲಿರುವ ಜನಾಂದೋಲನ ಮತ್ತು ಬೃಹತ್ ಪ್ರತಿಭಟನಾ ಬಹಿರಂಗ ಸಭೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾವೇರಿ ನದಿಯಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಲು 5ನೇ ಹಂತದ ಯೋಜನೆ ರೂಪಿಸಲಾಗುತ್ತಿದೆ. ಯೋಜನೆ ಜಾರಿಯಾದರೇ ಮಂಡ್ಯ ಜಿಲ್ಲೆಯ ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ. ಆದ್ದರಿಂದ ಪರ್ಯಾಯ ಉದ್ಯೋಗ ಮತ್ತು ಜೀವನೋಪಾಯ ಅವಕಾಶ ಸೃಷ್ಟಿಸದೇ ನೀರು ಪೂರೈಕೆ ಯೋಜನೆ ಕೈಗೊಳ್ಳಬಾರದು ಎಂದು ಆಗ್ರಹಿಸಿದರು.ಬಡವರು ಮತ್ತು ಗ್ರಾಮೀಣ ಪ್ರದೇಶದ ಜನರ ವಲಸೆ ತಪ್ಪಿಸಲು ಆರಂಭವಾದ ಉದ್ಯೋಗ ಖಾತರಿ ಯೋಜನೆಗೆ ಕೇಂದ್ರ ಸರ್ಕಾರ ಪ್ರಸ್ತುತ ವರ್ಷ ಅನುದಾನ ಕಡಿತ ಮಾಡಿದ್ದು, ಬಡಜನರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಯೋಜನೆಯನ್ನು ನಗರ ವ್ಯಾಪ್ತಿಗೂ ವಿಸ್ತರಿಸಿ ಕುಟುಂಬಕ್ಕೆ 200 ದಿನಗಳ ಕೆಲಸ ಮತ್ತು ದಿನಕ್ಕೆ 600 ರು. ಕೂಲಿ ನೀಡಬೇಕೆಂದು ಒತ್ತಾಯಿಸಿದರು.
ಪಕ್ಷದ ಸದಸ್ಯರು ಹಾಡ್ಲಿ ಸರ್ಕಲ್ ನಲ್ಲಿರುವ ಅಂಗಡಿ ಮುಂಗಟ್ಟುಗಳು ಮತ್ತು ಮನೆ ಮನೆಗೆ ಭೇಟಿ ನೀಡಿ ದೇಣಿಗೆ ಸಂಗ್ರಹಿಸಿದರು. ಕಮ್ಯುನಿಸ್ಟ್ ಪಕ್ಷವು ಬೆಂಗಳೂರಿನಲ್ಲಿ ಡಿ.21ರಂದು ಬೃಹತ್ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ ಎಂದರು.ಸಭೆಯಲ್ಲಿ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಟಿ.ಎಚ್.ಆನಂದ್, ಮಂಜುಳ, ಸುಶೀಲಾ ಲಿಂಗರಾಜಮೂರ್ತಿ, ತಾಲೂಕು ಸದಸ್ಯರಾದ ಗುರುಸ್ವಾಮಿ, ರತ್ನಮ್ಮ, ಸುನಂದಮ್ಮ, ತಾಯಮ್ಮ, ಪ್ರೇಮ ಸೇರಿದಂತೆ ಹಲವರು ಭಾಗವಹಿಸಿದ್ದರು.
ಡಿ.12 ರಂದು ಪೂರ್ವಭಾವಿ ಸಭೆಮಳವಳ್ಳಿ: ಡಿಸೆಂಬರ್ 21ರಿಂದ 24ರವರೆಗೆ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಅನುಷ್ಠಾನ ಬಗ್ಗೆ ಚರ್ಚಿಸಲು ಡಿ.12ರಂದು ಪೂರ್ವಭಾವಿ ಸಭೆ ನಡೆಯಲಿದೆ. ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ಸಭೆಗೆ ಎಲ್ಲ ಇಲಾಖೆ ಅಧಿಕಾರಿಗಳು ಭಾಗಿಯಾಗಬೇಕು ಎಂದು ತಾಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ ತಿಳಿಸಿದ್ದಾರೆ.