ಪೊಲೀಯೋ ಲಸಿಕೆ ಸಮಾಜಮಮುಖಿ ಅಭಿಯಾನ: ಪೂಜಾ ಸಜೇಶ್‌

KannadaprabhaNewsNetwork |  
Published : Jun 30, 2026, 02:45 AM IST
ಚಾಲನೆ | Kannada Prabha

ಸಾರಾಂಶ

ಮಗ್ಗುಲ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಆಯೋಜಿಸಲಾಗಿತ್ತು.

ವಿರಾಜಪೇಟೆ: ಮಗ್ಗುಲ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಆಯೋಜಿಸಲಾಗಿತ್ತು.

ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕ ಪೂಜಾ ಸಜೇಶ್‌ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಸರ್ಕಾರ ದೇಶಾದ್ಯಂತ ಪೋಲಿಯೋ ನಿರ್ಮೂಲನೆ ಮಾಡಿ ಪೋಲಿಯೋ ಮುಕ್ತ ದೇಶ ನಿರ್ಮಿಸುವ ಉದ್ದೇಶವನ್ನು ಹೊಂದಿದೆ. ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ಜೊತೆಗೆ ನಮ್ಮ ವಿದ್ಯಾಸಂಸ್ಥೆ ಕೂಡ ಈ ಅಭಿಯಾನಕ್ಕೆ ಸಂಪೂರ್ಣ ಸಹಕಾರ ನೀಡಿದ್ದು, ಸಂಸ್ಥೆಯು ಸಮುದಾಯದ ಸಹಭಾಗಿತ್ವದ ಜೊತೆಗೆ ಆರೋಗ್ಯಯುಕ್ತ ರಾಷ್ಟ್ರದ ನಿರ್ಮಾಣಕ್ಕೆ ಕೈ ಜೋಡಿಸಿದೆ ಎಂದು ಹೇಳಿದರು.

ಈ ಕಾರ್ಯಕ್ರಮ ಅತ್ಯಂತ ಜವಾಬ್ದಾರಿಯುತ ಹಾಗೂ ಸಾಮಾಜಿಕ ಕಳಕಳಿಯುಳ್ಳ ಕಾರ್ಯ ಎಂದರು. ಆರೋಗ್ಯ ಇಲಾಖೆ ಸಿಬ್ಬಂದಿ, ಲಿಟಲ್ ಸ್ಕಾಲರ್ಸ್ ಅಕಾಡೆಮಿ ಸಿಬ್ಬಂದಿ, ಮಕ್ಕಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಮಗ್ಗುಲ ಹಾಗೂ ವಿರಾಜಪೇಟೆ ವ್ಯಾಪ್ತಿಯ ಒಟ್ಟು ಐದು ಪಲ್ಸ್ ಪೋಲಿಯೋ ಲಸಿಕಾ ಬೂತ್ ನಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಆಡಳಿತ ಮಂಡಳಿಯವರು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಸ್ವಯಂ ಸೇವಕರಾಗಿ ಪಾಲ್ಗೊಂಡರು. ಶಿಕ್ಷಣ ಸಂಸ್ಥೆಯೊಂದು ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡು ಜಾಗೃತಿ ಮೂಡಿಸಿ ಸ್ವಯಂ ಸೇವೆಯನ್ನು ಸಲ್ಲಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಗವಿಕಲತೆ ತಡೆಗೆ ಪೋಲಿಯೋ ಲಸಿಕೆ ಕಡ್ಡಾಯ: ಪೊನ್ನಣ್ಣ
ಜಾಗತಿಕ ಆರ್ಥಿಕತೆಗೆ ಎಂಎಸ್‌ಎಂಇಯಿಂದ ಅಗಾಧ ಕೊಡುಗೆ: ಸಿಎ ಎಸ್‌.ಎಸ್‌. ನಾಯಕ್‌