ಮಡಿಕೇರಿ: ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡುವ ಮೂಲಕ ಕೊಡಗು ಜಿಲ್ಲೆಯಾದ್ಯಂತ ಭಾನುವಾರ ಚಾಲನೆ ದೊರೆಯಿತು.
ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ರಾಷ್ಟ್ರವು ಪೋಲಿಯೋ ಮುಕ್ತವಾಗಿದ್ದರೂ ಸಹ, ಇತರೆ ದೇಶಗಳಲ್ಲಿ ಪೋಲಿಯೋ ಪ್ರಕರಣಗಳು ಇರುವುದರಿಂದ ಹೆಚ್ಚಿನ ಎಚ್ಚರ ವಹಿಸಬೇಕಿದೆ. ಆದ್ದರಿಂದ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಕೊಡಿಸಬೇಕು ಎಂದು ಕರೆ ನೀಡಿದರು.
ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡುವುದರಿಂದ ಮಕ್ಕಳ ಬೆಳವಣಿಗೆ ಸಂದರ್ಭದಲ್ಲಿ ಉಂಟಾಗಬಹುದಾದ ವಿಕಲತೆಯನ್ನು ತಡೆಯಬಹುದಾಗಿದೆ. ಆದ್ದರಿಂದ ಈ ಬಗ್ಗೆ ಹತ್ತಿರದವರಿಗೂ ಮಾಹಿತಿ ನೀಡಿ ಶಿಶುಗಳಿಗೆ ಪೋಲಿಯೋ ಹನಿ ಹಾಕಿಸಬೇಕು ಎಂದರು. ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಎರಡು ಹನಿ ನೀಡುವುದರಿಂದ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಮಾತನಾಡಿ, ಪೋಲಿಯೋ ನಿರ್ಮೂಲನೆ ಮಾಡುವಲ್ಲಿ ವಿಶ್ವಸಂಸ್ಥೆ, ರೋಟರಿ ಸಂಸ್ಥೆ, ರೆಡ್ ಕ್ರಾಸ್ ಸಂಸ್ಥೆಗಳು ಸೇರಿದಂತೆ ಹಲವು ಸಂಸ್ಥೆಗಳು ಸರ್ಕಾರದ ಕೈಜೋಡಿಸಿ ಕೆಲಸ ನಿರ್ವಹಿಸುತ್ತಿವೆ ಎಂದರು.
ಆರ್.ಸಿ.ಎಚ್.ಅಧಿಕಾರಿ ಡಾ.ಮಧುಸೂದನ ಮಾತನಾಡಿ ಪಲ್ಸ್ ಪೋಲಿಯೋ ಹನಿ ನೀಡುವ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 471 ಬೂತ್ ತೆರೆಯಲಾಗಿದೆ. ಜನಸಂದಣಿ ಪ್ರದೇಶಗಳು, ಬಸ್ ನಿಲ್ದಾಣ ಹಾಗೂ ಪ್ರವಾಸಿ ಕೇಂದ್ರಗಳನ್ನು ಗುರಿಯಾಗಿಸಿ, 33 ಟ್ರಾನ್ಸಿಟ್ ಬೂತ್ ಗಳನ್ನು ತೆರೆಯಲಾಗಿದ್ದು, ಮಡಿಕೇರಿ ತಾಲೂಕಿನಲ್ಲಿ 1 ಸಂಚಾರಿ ತಂಡವನ್ನು ಸಹ ನಿಯೋಜಿಸಲಾಗಿದೆ ಎಂದರು.
ರೋಟರಿ ಸಂಸ್ಥೆಯ ಮನೋಹರ್ ಕಾಮತ್, ರತನ್ ತಮ್ಮಯ್ಯ, ಡಾ.ಚಂದ್ರಶೇಖರ್, ಡಾ.ದಿವ್ಯಾರಾಣಿ, ಆರೋಗ್ಯ ಶಿಕ್ಷಣಾಧಿಕಾರಿ ಪಾಲಕ್ಷ, ಶ್ರೀಕಾಂತ್, ದೇವರಾಜು ಇತರರು ಇದ್ದರು.ಪೋಲಿಯೋ ಹನಿ ನೀಡುವ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 471 ಬೂತ್ ತೆರೆಯಲಾಗಿದೆ. ಜನಸಂದಣಿ ಪ್ರದೇಶಗಳು, ಬಸ್ ನಿಲ್ದಾಣ ಹಾಗೂ ಪ್ರವಾಸಿ ಕೇಂದ್ರಗಳನ್ನು ಗುರಿಯಾಗಿಸಿ, 33 ಟ್ರಾನ್ಸಿಟ್ ಬೂತ್ ಗಳನ್ನು ತೆರೆಯಲಾಗಿದೆ. ಮಡಿಕೇರಿ ತಾಲೂಕಿನಲ್ಲಿ 1 ಸಂಚಾರಿ ತಂಡವನ್ನು ಸಹ ನಿಯೋಜಿಸಲಾಗಿದೆ