ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೋಲಿಯೋ ಲಸಿಕೆ ಬಹಳ ಮುಖ್ಯ

KannadaprabhaNewsNetwork |  
Published : Dec 22, 2025, 01:45 AM IST
21ಎಚ್ಎಸ್ಎನ್14 :  | Kannada Prabha

ಸಾರಾಂಶ

ಪಲ್ಸ್ ಪೋಲಿಯೋ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಮುಂದೆ ಆರೋಗ್ಯದಲ್ಲಿ ಯಾವ ಸಮಸ್ಯೆಗಳಾಗದಂತೆ ಎಚ್ಚರ ವಹಿಸುವಂತೆ ಪೋಷಕರಿಗೆ ಸಲಹೆ ನೀಡಿದೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೋಲಿಯೋ ಲಸಿಕೆ ಬಹಳ ಮುಖ್ಯ, ಆದುದರಿಂದ ಎಲ್ಲಾ ತಾಯಂದಿರು ತಮ್ಮ ಮಕ್ಕಳಿಗೆ ತಪ್ಪದೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದೆ. ಪ್ರತಿ ಐದು ಬೂತ್‌ಗಳಿಗೆ ಒಬ್ಬರಂತೆ ಒಟ್ಟು ೧೭೪ ಮೇಲ್ವಿಚಾರಕರನ್ನು ನಿಯೋಜಿಸಿ ತಾಲೂಕುವಾರು ಸೂಕ್ಷ್ಮ ಕ್ರಿಯಾ ಯೋಜನೆ ರೂಪಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಅಭಿಯಾನ ಮೂರು ದಿನಗಳು ಹಾಗೂ ನಗರ ಪ್ರದೇಶಗಳಲ್ಲಿ ನಾಲ್ಕು ದಿನಗಳು ನಡೆಯಲಿದೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಹಿಮ್ಸ್ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಐದು ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಭಾನುವಾರ ಬೆಳಿಗ್ಗೆ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಚಾಲನೆ ನೀಡಿದರು.

ನಂತರ ಉದ್ದೇಶಿಸಿ ಮಾತನಾಡಿದ ಶಾಸಕರು, ಪಲ್ಸ್ ಪೋಲಿಯೋ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಮುಂದೆ ಆರೋಗ್ಯದಲ್ಲಿ ಯಾವ ಸಮಸ್ಯೆಗಳಾಗದಂತೆ ಎಚ್ಚರ ವಹಿಸುವಂತೆ ಪೋಷಕರಿಗೆ ಸಲಹೆ ನೀಡಿದೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೋಲಿಯೋ ಲಸಿಕೆ ಬಹಳ ಮುಖ್ಯ, ಆದುದರಿಂದ ಎಲ್ಲಾ ತಾಯಂದಿರು ತಮ್ಮ ಮಕ್ಕಳಿಗೆ ತಪ್ಪದೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದೆ. ಪ್ರತಿ ಐದು ಬೂತ್‌ಗಳಿಗೆ ಒಬ್ಬರಂತೆ ಒಟ್ಟು ೧೭೪ ಮೇಲ್ವಿಚಾರಕರನ್ನು ನಿಯೋಜಿಸಿ ತಾಲೂಕುವಾರು ಸೂಕ್ಷ್ಮ ಕ್ರಿಯಾ ಯೋಜನೆ ರೂಪಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಅಭಿಯಾನ ಮೂರು ದಿನಗಳು ಹಾಗೂ ನಗರ ಪ್ರದೇಶಗಳಲ್ಲಿ ನಾಲ್ಕು ದಿನಗಳು ನಡೆಯಲಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಲ್ಲೆಯ ೫ ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಪೋಲಿಯೋ ರೋಗದಿಂದ ರಕ್ಷಿಸುವ ಉದ್ದೇಶದಿಂದ ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು “ಎರಡು ಹನಿಗಳು ಪೋಲಿಯೋ ವಿರುದ್ಧ ನಿರಂತರ ಗೆಲುವು” ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ಜಿಲ್ಲೆಯಲ್ಲಿ ಒಟ್ಟು ೧,೦೬,೭೪೭ ಮಕ್ಕಳನ್ನು ಗುರಿಯಾಗಿಸಿಕೊಂಡಿದ್ದು, ೪,೬೮,೪೯೩ ಮನೆಗಳನ್ನು ವ್ಯಾಪ್ತಿಗೆ ತೆಗೆದುಕೊಳ್ಳಲಾಗಿದೆ ಎಂದರು. ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ಒಟ್ಟು ೮೭೨ ಬೂತ್‌ಗಳನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ ನಗರ ಪ್ರದೇಶದಲ್ಲಿ ೧೪೦ ಹಾಗೂ ಗ್ರಾಮೀಣ ಪ್ರದೇಶದಲ್ಲಿ ೭೩೨ ಬೂತ್‌ಗಳು ಕಾರ್ಯನಿರ್ವಹಿಸಲಿವೆ. ಪ್ರತಿಯೊಂದು ಬೂತ್‌ಗೆ ನಾಲ್ವರು ಸದಸ್ಯರಂತೆ ಒಟ್ಟು ೩,೪೮೮ ಬೂತ್ ತಂಡದ ಸದಸ್ಯರನ್ನು ನಿಯೋಜಿಸಲಾಗಿದೆ. ಜೊತೆಗೆ ಮನೆ-ಮನೆಗೆ ತೆರಳಿ ಲಸಿಕೆ ನೀಡಲು ೧,೭೪೪ ಮನೆ ಭೇಟಿ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಮಕ್ಕಳ ಆರೋಗ್ಯ ರಕ್ಷಣೆಗೆ ಕೈಜೋಡಿಸಬೇಕೆಂದು ಕರೆ ಕೊಟ್ಟರು. ಐಎಂಎ ಅಧ್ಯಕ್ಷರಾದ ಡಾ. ದಿನೇಶ್ ಭೈರೇಗೌಡ ಮಾತನಾಡಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಮನವಿ ಮಾಡಿದ್ದು, ತಮ್ಮ ಮನೆಯಲ್ಲಿರುವ ೫ ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟು ಬಾರಿ ಪಲ್ಸ್ ಪೋಲಿಯೋ ಹನಿಗಳನ್ನು ನೀಡಿದ್ದರೂ ಸಹ, ಡಿಸೆಂಬರ್ ೨೧ರಂದು ನಡೆಯುವ ಪಲ್ಸ್ ಪೋಲಿಯೋ ದಿನದಂದು ಕಡ್ಡಾಯವಾಗಿ ಸಮೀಪದ ಬೂತ್‌ಗಳಿಗೆ ಕರೆತಂದು ಪೋಲಿಯೋ ಹನಿಗಳನ್ನು ಹಾಕಿಸಬೇಕು ಎಂದರು.ಇದೇ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅನೀಲ್, ನಾಗಪ್ಪ, ಚನ್ನವೀರಪ್ಪ, ಮನುಪ್ರಕಾಶ್, ಶಿವಶಂಕರ್, ವಿಜಯ್, ಮೀನಾಕ್ಷಿ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಿಗೆ ಪೋಲಿಯೋ ಬರದಂತೆ ಎಚ್ಚರಿಕೆ ವಹಿಸಿ: ಡೀಸಿ ಡಾ.ಕುಮಾರ್
ಜಗತ್ತಿಗೆ ಇಂದು ಶಾಂತಿ ಅಗತ್ಯ