5ರ ಒಳಗಿನ ಮಕ್ಕಳಿಗೆ ಪೊಲಿಯೋ ಲಸಿಕೆ ಕಡ್ಡಾಯ: ತಹಶೀಲ್ದಾರ್ ಎರ್ರಿಸ್ವಾಮಿ

KannadaprabhaNewsNetwork |  
Published : Mar 03, 2024, 01:30 AM IST
ಇಲ್ಲಿನ ತಾಲೂಕು ಕಛೇರಿಯ ಸಭಾಂಗಣದಲ್ಲಿ ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕಾಗಿ ನಿಯೋಜನೆ ಗೊಂಡಿರುವ ಅಧಿಕಾರಿಗಳ ಪೋರ್ವಭಾವಿ ಸಭೆಯು ತಹಶೀಲ್ದಾರ್ ಎರ್ರಿಸ್ವಾಮಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು | Kannada Prabha

ಸಾರಾಂಶ

ಚನ್ನಗಿರಿ ತಾಲೂಕು ಕಛೇರಿಯ ಸಭಾಂಗಣದಲ್ಲಿ ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕಾಗಿ ನಿಯೋಜನೆಗೊಂಡಿರುವ ಅಧಿಕಾರಿಗಳ ಪೂರ್ವಭಾವಿ ಸಭೆಯು ತಹಶೀಲ್ದಾರ್ ಎರ್ರಿಸ್ವಾಮಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಚನ್ನಗಿರಿ

ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮವು ಮಾರ್ಚ್‌ 3 ರಿಂದ 6ನೇ ತಾರೀಖಿನವರೆಗೆ ನಡೆಯಲಿದ್ದು, ತಾಲೂಕಿನಲ್ಲಿರುವ 5ವರ್ಷದ ಒಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯ ವಾಗಿ ಪೊಲೀಯೋ ಲಸಿಕೆಯನ್ನು ಹಾಕಿಸಬೇಕು ಎಂದು ತಹಶೀಲ್ದಾರ್ ಎರ್ರಿಸ್ವಾಮಿ ಹೇಳಿದರು.ಅವರು ಶನಿವಾರ ಇಲ್ಲಿನ ತಾಲೂಕು ಕಛೇರಿಯ ಸಭಾಂಗಣದಲ್ಲಿ ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕಾಗಿ ನಿಯೋಜನೆಗೊಂಡಿರುವ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಐದು ವರ್ಷದ ಒಳಗಿನ ಮಕ್ಕಳು 24,749 ಇದ್ದು, ಚನ್ನಗಿರಿ ಪಟ್ಟಣದಲ್ಲಿ 1.945 ಮಕ್ಕಳಿದ್ದರೆ ಗ್ರಾಮಾಂತರ ಪ್ರದೇಶದಲ್ಲಿ 22, 804 ಮಕ್ಕಳಿದ್ದಾರೆ ಈ ಎಲ್ಲಾ ಮಕ್ಕಳಿಗೂ ಪೊಲೀಯೋ ಲಸಿಕೆ ಹಾಕಲು ಅನುಕೂಲವಾಗುವಂತೆ 217 ಬೂತ್‌ಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಚನ್ನಗಿರಿ ಪಟ್ಟಣದಲ್ಲಿ 22, ಗ್ರಾಮಾಂತರ ಪ್ರದೇಶಗಳಲ್ಲಿ 195 ಬೂತ್ ಗಳನ್ನು ಸ್ಥಾಪಿಸಲಾಗಿದೆ ಎಂದರು.

ಲಸಿಕೆ ಹಾಕಲು 436 ಜನ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದ್ದು, ಪಟ್ಟಣದಲ್ಲಿ 46, ಗ್ರಾಮಾಂತರ ಪ್ರದೇಶದಲ್ಲಿ 390 ಜನ ಸಿಬ್ಬಂದ್ದಿಗಳನ್ನು ನೇಮಕ ಮಾಡಲಾಗಿದೆ ಎಂದರು.

ತಾಲೂಕಿನಲ್ಲಿ 76 ಸಾವಿರ ಮನೆಗಳಿದ್ದು, ಪಟ್ಟಣದಲ್ಲಿ 6276 ಮನೆಗಳಿವೆ ಎಂದು ಹೇಳುತ್ತಾ, ಲಸಿಕೆ ಹಾಕುವ ಮಾರ್ಚ್‌ 3ರ ಮೊದಲನೆ ದಿನದಂದು ಬೂತ್‌ಗಳಲ್ಲಿ ಲಸಿಕೆ ಹಾಕಲಾಗುವುದು. ನಂತರದ ಮೂರು ದಿನಗಳ ಕಾಲ ಲಸಿಕೆ ಹಾಕುವ ಕಾರ್ಯಕರ್ತರು ಪ್ರತಿ ಮನೆ-ಮನೆಗಳಿಗೆ ಭೇಟಿ ನೀಡಿ ಲಸಿಕೆ ಹಾಕುವರು ಎಂದು ತಿಳಿಸುತ್ತಾ, ಲಸಿಕಾ ಕಾರ್ಯಕ್ರಮದ ಬಗ್ಗೆ ಈಗಾಗಲೇ ಪಟ್ಟಣದಲ್ಲಿ ಪುರಸಭೆಯ ವಾಹನದ ಮೂಲಕ ಪ್ರಚಾರ ಮಾಡಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಟಾಂ ಟಾಂ ಬಾರಿಸುವ ಮೂಲಕ ಹಾಗೂ ಶಾಲೆಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಪೊಲೀಯೋ ಲಸಿಕೆ ಹಾಕಿಸುವ ಬಗ್ಗೆ ವ್ಯಾಪಕ ಪ್ರಚಾರ ಮಾಡಲಾಗಿದೆ ಎಂದು ತಿಳಿಸುತ್ತಾ ಇದರ ಪ್ರಯೋಜವನ್ನು 5 ವರ್ಷದ ಒಳಗಿನ ಎಲ್ಲಾ ಮಕ್ಕಳು ಪಡೆದುಕೊಳ್ಳುವಂತೆ ತಿಳಿಸಿದರು.

ಈ ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಶಿವಕುಮಾರ್, ಆರೋಗ್ಯ ಇಲಾಖೆಯ ಕಾರ್ಯಕ್ರಮಾಧಿಕಾರಿ ರವಿಕುಮಾರ್, ಕ್ಷೇತ್ರಶಿಕ್ಷಣಾಧಿಕಾರಿ ಎಲ್.ಜಯಪ್ಪ, ಪುರಸಭೆ ಯ ಹಿರಿಯ ಆರೋಗ್ಯ ನಿರೀಕ್ಷಕ ಶಿವರುದ್ರಪ್ಪ, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್, ವಲಯ ಅರಣ್ಯಾಧಿಕಾರಿ ಮಧುಸೂದನ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

PREV

Recommended Stories

ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಸಿಎಂಗೆ ಕಣ್ಣು ಪರೀಕ್ಷೆ ನಡೆಸಿ ಎರಡು ಕನ್ನಡಕ ಕೊಟ್ಟ ಶಾಸಕ ಶ್ರೀನಿವಾಸ್‌