ಕೊಡಗಿನಾದ್ಯಂತ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ

KannadaprabhaNewsNetwork |  
Published : Dec 22, 2025, 02:45 AM IST
ಚಿತ್ರ :  21ಎಂಡಿಕೆ3 : ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಗೋಣಿಕೊಪ್ಪದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಪೋಲಿಯೊ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. | Kannada Prabha

ಸಾರಾಂಶ

5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲೆಯಾದ್ಯಂತ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮ ಭಾನುವಾರ ನಡೆಯಿತು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಗೋಣಿಕೊಪ್ಪದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಪೋಲಿಯೊ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಎ.ಎಸ್.ಪೊನ್ನಣ್ಣ ಅವರು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸುವಂತೆ ಪೋಷಕರಲ್ಲಿ ಮನವಿ ಮಾಡಿದರು.

ಜಿಲ್ಲೆಯಲ್ಲಿ ವಲಸಿಗ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಐದು ವರ್ಷದೊಳಗಿನ ಮಕ್ಕಳು ಪೋಲಿಯೊ ಲಸಿಕೆಯಿಂದ ಬಿಟ್ಟುಹೋಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ಮಾಡಿದರು.

ಪ್ರವಾಸಿಗರು ಸಹ ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಪ್ರವಾಸಿ ಕೇಂದ್ರಗಳು ಸೇರಿದಂತೆ ಎಲ್ಲೆಡೆ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವಂತೆ ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು.

ಜಿಲ್ಲಾ ಕೇಂದ್ರ ಮಡಿಕೇರಿಯ ಶಿಶುವಿಹಾರ ಕೇಂದ್ರದಲ್ಲಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಗುವಿಗೆ ಪೋಲಿಯೊ ಲಸಿಕೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಲೋಕೇಶ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಆರ್ ಸಿ ಎಚ್ ಅಧಿಕಾರಿ ಡಾ.ಮಧುಸೂದನ, ಡಾ.ಸನತ್ ಕುಮಾರ್, ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ, ಡಾ.ಚೇತನ್, ಡಾ.ಸುಕೃತ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ದೇವರಾಜು, ಸವಿತಾ ಕೀರ್ತನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಪಾಲಾಕ್ಷ, ರೋಟರಿ ಸಂಸ್ಥೆಯ ಸಭಾಪತಿ ರವೀಂದ್ರ ರೈ, ಉತ್ತಯ್ಯ, ಲಯನ್ಸ್ ಸಂಸ್ಥೆಯ ಮದನ್, ಮಧುಕರ್, ನವೀನ್ ಅಂಬೆಕಲ್ಲು ಇತರರು ಇದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ವಲಸಿಗ ಹಾಗೂ ಪ್ರವಾಸಿ ಮಕ್ಕಳು ಸೇರಿದಂತೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಲಸಿಕೆ ನೀಡಲಾಗುತ್ತದೆ ಎಂದರು.

ಸೋಮವಾರ ಮತ್ತು‌ ಮಂಗಳವಾರವೂ ಸಹ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ಭೇಟಿ ನೀಡಿ ಪೋಲಿಯೊ ಲಸಿಕೆ ನೀಡಲಾಗುತ್ತಿದ್ದು. ಲಸಿಕೆ ಪಡೆಯದಿರುವ ಮಕ್ಕಳಿಗೆ ಲಸಿಕೆ ಕೊಡಿಸುವಂತೆ ಡಾ.ಸತೀಶ್ ಕುಮಾರ್ ಅವರು ಕೋರಿದರು.

ಕಲಾವಿದ ಈ. ರಾಜು ಮತ್ತು ತಂಡದವರು ಪೊಲಿಯೊ ಲಸಿಕೆ ಮಹತ್ವ ಕುರಿತ ಜಾಗೃತಿ ಗೀತೆ ಹಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?