ಬೆಳ್ತಂಗಡಿ: ಅಂಬೇಡ್ಕರ್ ಭವನ ನಿರ್ಮಾಣ ಪೂರ್ವಭಾವಿ ಸಭೆ

KannadaprabhaNewsNetwork |  
Published : Oct 17, 2025, 01:03 AM IST
 ದಲಿತ ಮುಖಂಡರುಗಳ ಜೊತೆ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಿರುವ ಶಾಸಕ ಹರೀಶ್ ಪೂಂಜ | Kannada Prabha

ಸಾರಾಂಶ

ಅಂಬೇಡ್ಕರ್ ಭವನ ನಿರ್ಮಾಣ ಕುರಿತು ದಲಿತ ಮುಖಂಡರ ಜೊತೆ ಪೂರ್ವಭಾವಿ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮಂಗಳವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ: ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ದಲಿತ ಮುಖಂಡರ ಜೊತೆ ಪೂರ್ವಭಾವಿ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮಂಗಳವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.ರಾಜ್ಯಕ್ಕೆ ಮಾದರಿಯಾಗುವ ರೀತಿಯಲ್ಲಿ ಅಂದಾಜು 7 ಕೋಟಿ ರು. ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗಲಿದೆ. ಈಗಾಗಲೇ ಕಟ್ಟಡ ನಿರ್ಮಾಣಕ್ಕೆ 3.60 ಕೋಟಿ ರು. ಅನುದಾನ ಮಂಜೂರಾಗಿದೆ. ಬೆಳ್ತಂಗಡಿ ತಾಲೂಕು ಕ್ರೀಡಾಂಗಣದ ಸ್ಥಳದಲ್ಲಿ 2.48 ಎಕ್ರೆ ಜಾಗದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣವಾಗಲಿದೆ. ಅತೀ ಶೀಘ್ರದಲ್ಲೇ ಶಿಲಾನ್ಯಾಸ ನೆರವೇರಲಿದೆ ಎಂದು ಶಾಸಕ ಹರೀಶ್‌ ಪೂಂಜ ಮಾಹಿತಿ ನೀಡಿದರು.

ಅಂಬೇಡ್ಕರ್ ಭವನದಲ್ಲಿ 500 ಮಂದಿ ಕುಳಿತುಕೊಳ್ಳುವ ಸಾಮರ್ಥ್ಯದ ಸಭಾ ಭವನ ಸುಂದರ ಪಾರ್ಕ್, ನಿರ್ಮಾಣ ವಾಕಿಂಗ್ ಟ್ರ್ಯಾಕ್ ಮಾಡುವ ಹಾಗೂ ಅಂಬೇಡ್ಕರ್ ಅವರ ಜೀವನಾಧರಿತ ಪುಸ್ತಕಗಳನ್ನೊಳಗೊಂಡ ಗ್ರಂಥಾಲಯ ನಿರ್ಮಾಣದ ಯೋಚನೆ ಮಾಡಲಾಗಿದೆ. ಸೋಮವತಿ ನದಿಯ ತಟದ ಪ್ರಕೃತಿ ರಮಣೀಯ ಪ್ರದೇಶದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣವಾಗಲಿದೆ ಎಂದ ಶಾಸಕರು ಭವನದ ನೀಲಿ ನಕಾಶೆಯನ್ನು ಸಭೆಯ ಮುಂದಿಟ್ಟರು. ಪ್ರಮುಖರಾದ ವಸಂತ ಬಿ.ಕೆ. ಸಂಜೀವ ಆರ್. ನೇಮಿರಾಜ ಕಿಲ್ಲೂರು, ನವೀನ್ ನೆರಿಯ, ರಾಜೇಶ್ ಕಳೆಂಜ, ಪ್ರಭಾಕರ ಶಾಂತಿಗೋಡ್ ಸೇರಿದಂತೆ ಇನ್ನಿತರ ಪ್ರಮುಖರು ಅಂಬೇಡ್ಕರ್ ಪ್ರತಿಮೆ, ನಿರ್ವಹಣೆ,800 ಸಾಮರ್ಥ್ಯದ ಸಭಾ ಭವನ ವಿಸ್ತರಣೆ, ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರೆಂಕೆದಗುತ್ತು ಎಂಬಲ್ಲಿ 10 ಎಕರೆ ವಿಸ್ತೀರ್ಣದಲ್ಲಿ ನೂತನ ತಾಲೂಕು ಕ್ರೀಡಾಂಗಣಕ್ಕೆ ಜಾಗ ಕಾಯ್ದಿರಿಸಿಲಾಗಿದೆ ಎಂದು ಈ ವೇಳೆ ಶಾಸಕರು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ ಮತ್ತು ಸದಸ್ಯ ಅಂಬರೀಷ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಹಾಜರಿದ್ದರು.ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದರ್ಶನ್‌ ಜೈಲಿಂದ ಹೊರಬರಲು ನಿತ್ಯ ಪ್ರಾರ್ಥಿನೆ: ನಟ ಜೈದ್‌
ನಟ ಯಶ್‌ಗೆ ಜಾರಿಯಾಗಿದ್ದ ಆದಾಯ ತೆರಿಗೆ ನೋಟಿಸ್‌ ರದ್ದು