ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲ

KannadaprabhaNewsNetwork |  
Published : Nov 25, 2024, 01:04 AM IST
ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿಪೂಜೆ | Kannada Prabha

ಸಾರಾಂಶ

ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ, ನಗರದಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಸ್ಥಳೀಯ ಶಾಸಕರ ಜತೆಗೂಡಿ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಜನಪ್ರತಿನಿಧಿಗಳು ಯಾವ ಪಕ್ಷದಲ್ಲಿ ಇದ್ದರೂ ಒಬ್ಬರಿಗೊಬ್ಬರ ಸಹಕಾರದಿಂದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ಕೊಡಬೇಕು.

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ನಗರದಲ್ಲಿ 1.26 ಕೋಟಿ ರು.ಗಳ ವೆಚ್ಚದ ಸಿ.ಸಿ. ರಸ್ತೆ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಡಾ.ಕೆ.ಸುಧಾಕರ್ ಮತ್ತು ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ಭೂಮಿ ಪೂಜೆ ನೆರವೇರಿಸಿದರು.ಸಂಸದರ ನಿಧಿಯಿಂದ 1.26 ಕೋಟಿ ವೆಚ್ಚದಲ್ಲಿ ನಗರದಲ್ಲಿನ 12ವಾರ್ಡುಗಳಲ್ಲಿ ಸುಸಜ್ಜಿತವಾದ ಕಾಂಕ್ರೀಟ್ ರಸ್ತೆಗಳ ಅಭಿವೃದ್ದಿಗೆ ಮತ್ತು ವಿಶಾಲವಾದ ಚರಂಡಿಗಳ ನಿರ್ಮಾಣ ಕಾಮಗಾರಿಗಳಿಗೆ ನಗರದ ಕರೇಕಲ್ಲಹಳ್ಳಿಯ, ಸ್ವಾಗತ್ ಲೇಔಟ್ ಮತ್ತು ಕೆ.ಎಲ್.ಎನ್.ಲೇಔಟ್ ಗಳಲ್ಲಿ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.

ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ

ನಂತರ ಸಂಸದ ಡಾ. ಕೆ.ಸುಧಾಕರ್ ಮಾತನಾಡಿ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ, ನಗರದಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಸ್ಥಳೀಯ ಶಾಸಕರಾದ ಕೆ.ಹೆಚ್.ಪುಟ್ಟಸ್ವಾಮಿಗೌಡ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ನಾವು ಯಾವ ಪಕ್ಷದಲ್ಲಿ ಇದ್ದರೂ ಒಬ್ಬರಿಗೊಬ್ಬರ ಸಹಕಾರದಿಂದ ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಮಹತ್ವ ಕೊಡಲಾಗುವುದು ಎಂದು ತಿಳಿಸಿದರು.

ಅನುದಾನ ಮಂಜೂರು

ನಗರವು ಅತ್ಯಂತ ವೇಗವಗಿ ಗಡಿ ಮೀರಿಬೆಳೆಯುತ್ತಿರುವ ನಗರವನ್ನು ಕಾಪಾಡಬೇಕಿದೆ. ಈ ನಿಟ್ಟಿನಲ್ಲಿ ನಗರದ ಸಮರ್ಪಕ ನಿರ್ವಹನೆ ಹಾಗೂ ಸರ್ವತೋಮುಖ ಅಭಿವೃದ್ದಿಗೆ ಅನುದಾನಗಳನ್ನು ತರಲಾಗಿದೆ. ನಗರದ ಸರ್ವತೋಮುಖ ಅಭಿವೃದ್ಧಿಗಾಗಿ ಸರಕಾರದಿಂದ ಹಂತ ಹಂತವಾಗಿ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದರು.ಇದೇ ವೇಳೆ ಮಾಜಿ ಶಾಸಕಿ ಜ್ಯೋತಿರೆಡ್ಡಿ, ತಹಸೀಲ್ದಾರ್ ಮಹೇಶ್‌ ಎಸ್.ಪತ್ರಿ, ನಗರಸಭೆ ಅಧ್ಯಕ್ಷ ಲಕ್ಷ್ಮೀ ನಾರಾಯಣಪ್ಪ, ಉಪಾಧ್ಯಕ್ಷ ಫರೀದ್, ಪೌರಾಯುಕ್ತೆ ಡಿ.ಎಂ.ಗೀತಾ, ಬಿಜೆಪಿ ಮುಖಂಡರಾದ ರವಿನಾರಾಯಣರೆಡ್ಡಿ, ಡಾ. ಶಶಿಧರ್, ಜೆ.ಡಿ.ಎಸ್. ಮುಖಂಡ ನರಸಿಂಹಮೂರ್ತಿ. ಮಾಜಿ ನಗರಸಭೆ ಅಧ್ಯಕ್ಷರು ಶ್ರೀಮತಿ ರೂಪಅನಂತರಾಜು, ನಗರಸಭೆ ಸದಸ್ಯ ಮಾರ್ಕೆಟ್ ಮೋಹನ್, ಭವ್ಯರಂಗನಾಥ್, ನಗರಸಭೆ ಸದಸ್ಯರುಗಳಾದ ಪದ್ಮಾವತಮ್ಮ, ರಾಜೇಶ್ವರಿ ಮೈಲಾರಿ ಭಾಗಿಯಾಗಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಂಜೇದೇವನಪುರದಲ್ಲಿ ಆನೆಮಡುವಿನಲ್ಲಿ ಹೆಣ್ಣು ಹುಲಿ ಸೆರೆ
ಶಾಸಕ ಬಾಲಕೃಷ್ಣ ವಿರುದ್ಧ ಕೆಡಿಪಿ ಸದಸ್ಯರ ಆಕ್ರೋಶ