ರಾಜಕೀಯ ದ್ವೇಷ ಆರೋಪ ಸಲ್ಲ: ಬಿವೈವಿ

KannadaprabhaNewsNetwork |  
Published : Dec 07, 2025, 03:00 AM IST
ಬಿ.ವೈ.ವಿಜಯೇಂದ್ರ | Kannada Prabha

ಸಾರಾಂಶ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸ್‌ ನೀಡಿರುವ ನೋಟಿಸ್‌ ನೀಡಿರುವ ಹಿಂದೆ ತೇಜೋವಧೆಗೆ ಯತ್ನ ಹಾಗೂ ರಾಜಕೀಯ ದ್ವೇಷದ ಉದ್ದೇಶವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆರೋಪಿಸಿರುವುದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸ್‌ ನೀಡಿರುವ ನೋಟಿಸ್‌ ನೀಡಿರುವ ಹಿಂದೆ ತೇಜೋವಧೆಗೆ ಯತ್ನ ಹಾಗೂ ರಾಜಕೀಯ ದ್ವೇಷದ ಉದ್ದೇಶವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆರೋಪಿಸಿರುವುದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆ ಇದೆ. ಸುಪ್ರೀಂ ಕೋರ್ಟ್‌ ಇದೆ. ಕೇಂದ್ರದಲ್ಲಿ ಯಾವುದೇ ಸರ್ಕಾರ ಇದ್ದರೂ ಪುರಾವೆ ಇಲ್ಲದೆ ರಾಜಕೀಯ ಮುಖಂಡರು ಅಥವಾ ಪಕ್ಷಗಳ ಮೇಲೆ ತನಿಖೆ ನಡೆಸಲು ಸಾಧ್ಯವಿಲ್ಲ ಎಂದರು.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಗಾಂಧಿ ಕುಟುಂಬ ಒಂದು ಸಾರ್ವಜನಿಕ ಟ್ರಸ್ಟ್‌ ಅನ್ನು ಖಾಸಗಿ ಟ್ರಸ್ಟ್‌ ಆಗಿ ಪರಿವರ್ತಿಸಿದೆ. ಟ್ರಸ್ಟಿಗಳನ್ನು ತೆಗೆದು ಹಾಕಿ ತಮಗೆ ಬೇಕಾದವರನ್ನು ಟ್ರಸ್ಟಿಗಳನ್ನಾಗಿ ಸೇರಿಸಿ, ಟ್ರಸ್ಟ್‌ನ ಆಸ್ತಿ ಲಪಟಾಯಿಸಿರುವುದು ಜಗಜ್ಜಾಹೀರಾಗಿದೆ. ಈ ಸಂಬಂಧ ನೋಟಿಸ್‌ ಕೊಟ್ಟು ತನಿಖೆಗೆ ಬನ್ನಿ ಎಂದರೆ, ತೇಜೋವಧೆ, ರಾಜಕೀಯ ದ್ವೇಷ ಎಂದು ಆರೋಪಿಸುವುದು ಡಿ.ಕೆ.ಶಿವಕುಮಾರ್‌ ಅವರ ಮೂರ್ಖತನದ ಪರಮಾವಧಿ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲೂ ಕಾಂಗ್ರೆಸ್ಸಿಗರನ್ನು ಕೈ ಬಿಡುವ ಕಾಲ ಸನಿಹ
ಹುಚ್ಚು ನಾಯಿ ದಾಳಿ, ಒಂಭತ್ತು ಜನರಿಗೆ ಗಾಯ