ರಾಜಕೀಯ ಹಿತಾಸಕ್ತಿಗಳಿಂದ ಸೂಳೆಕೆರೆ ಅಭಿವೃದ್ಧಿಗೆ ಹಿನ್ನಡೆ

KannadaprabhaNewsNetwork |  
Published : Oct 09, 2026, 02:00 AM IST
ವಿಶ್ವ ಪ್ರವಾಸೋಧ್ಯಮ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಶಾಸಕ ಬಸವರಾಜು ವಿ.ಶಿವಗಂಗಾ | Kannada Prabha

ಸಾರಾಂಶ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ, ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ₹500 ಕೋಟಿಯನ್ನು ಬಿಡುಗಡೆ ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.

- ಕ್ಷೇತ್ರದ ಮಾಜಿ ಶಾಸಕರು, ಮುಖಂಡರ ಜತೆ ಶೀಘ್ರ ಚರ್ಚೆ: ಬಸವರಾಜ ಶಿವಗಂಗಾ

- - -

- ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಸೂಳೆಕೆರೆ ಅಭಿವೃದ್ಧಿಪಡಿಸಲು ₹100 ಕೋಟಿ ಕ್ರಿಯಾ ಯೋಜನೆ

- ಸ್ಥಳೀಯವಾಗಿ ಉದ್ಯೋಗ ಸೃಷ್ಠಿ, ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಲು ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ

- - -

ಕನ್ನಡಪ್ರಭ ವಾರ್ತೆ ಚನ್ನಗಿರಿ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ, ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ₹500 ಕೋಟಿಯನ್ನು ಬಿಡುಗಡೆ ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.

ಪಟ್ಟಣದ ಕೆಳದಿ ರಾಣಿ ಚನ್ನಮ್ಮಾಜಿ ಕಟ್ಟಿಸಿದ ಕೋಟೆಯಲ್ಲಿ ಜಿಲ್ಲಾಡಳಿತ ಪ್ರವಾಸೋದ್ಯಮ ಇಲಾಖೆ ಹಾಗೂ ಭಾರತೀಯ ಸರ್ವೇಕ್ಷಣಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ತಾಲೂಕಿನ ಐತಿಹಾಸಿಕ ಪ್ರವಾಸಿ ತಾಣವಾಗಿರುವ ಸೂಳೆಕೆರೆಯನ್ನು ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ₹100 ಕೋಟಿ ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಿದೆ. ಕೆಲ ರಾಜಕೀಯ ಹಿತಾಸಕ್ತಿಯಿಂದ ಈ ಯೋಜನೆಗೆ ತಡೆಯಾಗಿದೆ. ಈ ಬಗ್ಗೆ ಕ್ಷೇತ್ರದ ಎಲ್ಲ ಮಾಜಿ ಶಾಸಕರು ಮತ್ತು ಮುಖಂಡರು ಸಭೆ ನಡೆಸಿ ಚರ್ಚೆ ನಡೆಸುತ್ತೇನೆ. ಈ ಯೋಜನೆ ಬಗ್ಗೆ ವಿವರಿಸಿ ಆಕ್ಷೇಪಣೆಗೂ ಕಾಲಾವಕಾಶವನ್ನು ನೀಡಲಾಗುವುದು. ಚರ್ಚೆ ಮಾಡುವ ಅವಕಾಶ ಶೀಘ್ರವೇ ಸೃಷ್ಠಿಯಾಗಬೇಕು ಎಂದರು.

ನಮ್ಮ ಕಾಂಗ್ರೆಸ್‌ ಸರ್ಕಾರ ಸ್ಥಳೀಯವಾಗಿ ಉದ್ಯೋಗ ಸೃಷ್ಠಿಗೆ ಮತ್ತು ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಲು ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಪುರಾತತ್ವ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕಾಗಿದೆ. ಮುಂದಿನ ದಿನಗಳಲ್ಲಿ ಚನ್ನಗಿರಿ ಕೋಟೆಯ ಅಭಿವೃದ್ಧಿಗೆ ಪುರಾತತ್ವ ಇಲಾಖೆ ಅಧಿಕಾರಿಗಳನ್ನು ಕರೆಸಿ, ಅವರ ಮಾರ್ಗದರ್ಶನದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಈ ಸಂದರ್ಭ ಸ್ಥಳೀಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ಮಹಾವಿದ್ಯಾಲಯದ ಮಹಾದೇವಿ ಅಕ್ಕ ನಶೆಮುಕ್ತ ಭಾರತ ನಿರ್ಮಾಣ ಕುರಿತ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ, ಪುರಾತತ್ವ ಇಲಾಖೆಯ ಕಿರಣ್ ರಾವ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಅಮೂಲ್ಯ, ಪ್ರಸನ್ನ, ಪುರಸಭೆ ಮುಖ್ಯಾಧಿಕಾರಿ ಜೆ.ವಿ. ಮಂಜುನಾಥ್, ವಲಯ ಅರಣ್ಯಾಧಿಕಾರಿ ರಾಘವೇಂದ್ರ, ರಮೇಶ್, ಪುರಸಭೆಯ ಮಾಜಿ ಸದಸ್ಯರಾದ ಜಿ.ನಿಂಗಪ್ಪ, ಕಾಫಿ ಪುಡಿ ಶಿವಾಜಿ ರಾವ್, ಸೈಯದ್ ಗೌಸ್ ಪೀರ್ ಮೊದಲಾದವರು ಹಾಜರಿದ್ದರು.

- - -

-7ಕೆಸಿಎನ್ಜಿ1: ವಿಶ್ವ ಪ್ರವಾಸೋದ್ಯಮ ದಿನ ಕಾರ್ಯಕ್ರಮವನ್ನು ಶಾಸಕ ಬಸವರಾಜು ವಿ.ಶಿವಗಂಗಾ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬು ಬೆಳೆಗಾರರಿಗೆ ಎಸ್‌ಎಪಿ ನಿಗದಿಪಡಿಸುವಂತೆ ಆಗ್ರಹ
ಜಿಪಂ-ತಾಪಂ ಚುನಾವಣೆ ಮೀಸಲಾತಿ ಪ್ರಕಟ, ಆಕಾಂಕ್ಷಿಗಳಲ್ಲಿ ಹುರುಪು