ಕನ್ನಡಪ್ರಭ ವಾರ್ತೆ ಮಂಡ್ಯ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ದೂರಿನಲ್ಲಿ ನಡೆದ ಅಪರಾಧ ಕೃತ್ಯವನ್ನು ಕೋಮು ಗಲಭೆಯಾಗಿ ಕೆಲವು ರಾಜಕೀಯ ಪಕ್ಷಗಳು ಬದಲಾಯಿಸಿದ್ದಾರೆ. ಇದು ಮೇಲಿನ ಆರೋಪಕ್ಕೆ ಪುಷ್ಟಿ ನೀಡಿದಂತಿದೆ ಎಂದರು.
ರಾಜ್ಯಾದ್ಯಂತ ನಡೆಯುತ್ತಿರುವ ಎಲ್ಲಾ ಕೋಮು ಗಲಭೆಗಳಿಗೆ ಮೂಲ ಒಂದು ಕೋಮನ್ನು ವಿರೋಸುವ ಅಥವಾ ಒಲೈಸುವ ರಾಜಕೀಯ ಪಕ್ಷಗಳ ನಾಯಕರುಗಳೇ ಆಗಿದ್ದಾರೆ ಎಂಬುದನ್ನು ಪೊಲೀಸ್ ಇಲಾಖೆ ಮನಗಾಣಬೇಕು. ಇಂತಹ ಘಟನೆಗಳು ಪದೇ ಪದೇ ಮರುಕುಳಿಸುತ್ತಿದ್ದರೂ ರಾಜಕೀಯ ಪಕ್ಷಗಳ ಮುಖಂಡರ ಎಡೆಮುರಿ ಕಟ್ಟಿ ಕಾನೂನು ಕ್ರಮಗಳನ್ನು ಕೈಗೊಳ್ಳುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾಗಿದೆ ಎಂದು ಆರೋಪಿಸಿದರು.ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ತಾವು ಬೆಂಬಲಿಸುವ ಕೋಮಿನ ಮುಖಂಡರು ಮತ್ತು ಕಾರ್‍ಯಕರ್ತರ ಮೇಲಿನ ಕೋಮು ಗಲಭೆ ಪ್ರಕರಣಗನ್ನು ವಜಾ ಮಾಡುವ ಅನೈತಿಕ ರೂಢಿಯೊಂದು ರಾಜ್ಯದಲ್ಲಿ ಜಾರಿಯಲ್ಲಿದೆ. ಇದು ಕೋಮು ಗಲಭೆಗಳಲ್ಲಿ ತೊಡಗುವ ಕಿಡಿಗೇಡಿ ರಾಜಕೀಯ ಪಕ್ಷಗಳ ಕಾರ್‍ಯಕರ್ತರು ಮತ್ತು ಮುಖಂಡರುಗಳಿಗೆ ರಾಜಕೀಯ ಪಕ್ಷಗಳು ನೇರವಾಗಿ ಕುಮ್ಮಕ್ಕು ನೀಡುತ್ತಿರುವುದಕ್ಕೆ ಸಾಕ್ಷ್ಯವಾಗಿದೆ ಎಂದುಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ನಾಗರಾಜ್, ಮುಖಂಡರಾದ ಚೇತನ್, ಮಲ್ಲೇಶ್, ಪ್ರಮೋದ್, ನಾಗರಾಜು, ಹರೀಶ್ ಇತರರು ಇದ್ದರು.
ಮಂಡ್ಯ: ಮಂಡ್ಯ ಲೋಕಾಯುಕ್ತ ವಿಭಾಗದ ಅಧಿಕಾರಿಗಳು ತಾಲೂಕಿನಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿ ಸಾರ್ವಜನಿಕರಿಂದ ದೂರು/ ಅಹವಾಲು ಸ್ವೀಕಾರ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದೂರುಗಳನ್ನು ಸ್ವೀಕಾರ ಮಾಡಲಿದ್ದಾರೆ. ಸಭೆಯಲ್ಲಿ ಡಿವೈಎಸ್ಪಿ ಸುನೀಲ್ ಕುಮಾರ್.ಎಚ್.ಟಿ, ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ, ಬಿ.ಪಿ.ಕುಮಾರ, ಎಂ.ಲೇಪಾಕ್ಷ ಮೂರ್ತಿ ಪಾಲ್ಗೊಳ್ಳಲಿದ್ದಾರೆ.