ಪಾರದರ್ಶಕ ಚುನಾವಣೆಗಾಗಿ ರಾಜಕೀಯ ಮುಂಖಡರು ಸಹಕರಿಸಿ: ಸೋಮಪ್ಪ ಕಡಕೋಳ

KannadaprabhaNewsNetwork |  
Published : Mar 23, 2024, 01:04 AM IST
22ಶಿರಾ1: ಶಿರಾ ಮಿನಿವಿಧಾನಸೌಧದಲ್ಲಿ ಸಹಾಯಕ ಚುನಾವಣಾ ಅಧಿಕಾರಿ ಸೋಮಪ್ಪ ಕಡಕೋಳ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ತಹಶೀಲ್ದಾರ್ ದತ್ತಾತ್ರೆಯ ಗಾದ ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ನಡೆಸಲು ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪಾರದರ್ಶಕ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಮುಖಂಡರು ಸಹಕರಿಸಬೇಕು ಎಂದು ಸಹಾಯಕ ಚುನಾವಣಾ ಅಧಿಕಾರಿ ಸೋಮಪ್ಪ ಕಡಕೋಳ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಶಿರಾ

ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ನಡೆಸಲು ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪಾರದರ್ಶಕ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಮುಖಂಡರು ಸಹಕರಿಸಬೇಕು ಎಂದು ಸಹಾಯಕ ಚುನಾವಣಾ ಅಧಿಕಾರಿ ಸೋಮಪ್ಪ ಕಡಕೋಳ ಹೇಳಿದರು. ಅವರು ಶುಕ್ರವಾರ ನಗರದ ಮಿನಿವಿಧಾನಸೌಧದಲ್ಲಿ ರಾಜಕೀಯ ಪಕ್ಷದ ಮುಖಂಡರ ಸಭೆ ನಡೆಸಿ ಚುನಾವಣಾ ನೀತಿ ಸಂಹಿತೆಯ ಬಗ್ಗೆ ಮಾಹಿತಿ ನೀಡಿ ಮಾತನಾಡಿ ದರು. ಶಿರಾ ವಿಧಾನಸಭಾ ವ್ಯಾಪ್ತಿಯಲ್ಲಿ ಪುರುಷ ಮತದಾರರು 113788 , ಮಹಿಳಾ ಮತದಾರರು 112898 ಹಾಗೂ ಇತರೆ 8 ಮತದಾರರು ಒಟ್ಟು 226694 ಮತದಾರರಿದ್ದಾರೆ. ಒಟ್ಟು 266 ಮತಗಳಿಟ್ಟಿದ್ದು ಇದರಲ್ಲಿ 68 ಕ್ರಿಟಿಕಲ್ ಮತಗಟ್ಟೆಗಳು, 198 ಸಾಮಾನ್ಯ ಮತಗಟ್ಟೆಗಳು ಎಂದು ಗುರ್ತಿಸಲಾಗಿದೆ. ಲಕ್ಕನಹಳ್ಳಿ, ಗೌಡಗೆರೆ, ಬೋರಸಂದ್ರ, ಕೆಂತಾರ್ಲಹಟ್ಟಿ, ಕರೇಜವನಹಳ್ಳಿ, ಹಾರೋಗೆರೆಯಲ್ಲಿ ಒಟ್ಟು 6 ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ಮತದಾರರು ದೂರು ಮತ್ತು ಮಾಹಿತಿಗಾಗಿ 1950 ಮತದಾನ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು. ದಿನದ 24 ಗಂಟೆಯೂ ಸಹಾಯವಾಣಿ ಕೇಂದ್ರ ಕಾರ್ಯನಿರ್ವಹಿಸುತ್ತದೆ. ಸಿ-ವಿಜಿಲ್ ಆ್ಯಪ್‌ನಲ್ಲಿ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಬಹುದು. ಎಲ್ಲಾ ಮತಗಟ್ಟೆಗಳಿಗೆ ಮೂಲಭೂತ ಸೌಲಭ್ಯಗಳಾದ ಶೌಚಾಲಯ, ಕುಡಿಯುವ ನೀರು, ರ್‍ಯಾಂಪ್ ಮತ್ತು ನೆರಳಿನ ವ್ಯವಸ್ಥೆ ಮಾಡಲಾಗಿದೆ. 22 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, 1 ಸೆಕ್ಟರ್‌ಗೆ 10 ರಿಂದ 14 ಮತಗಟ್ಟೆಗಳಿರುತ್ತವೆ. ಪ್ರಸ್ತುತ ಚುನಾವಣೆಯಲ್ಲಿ ನೋಟಾ ಇರುತ್ತದೆ.

ಧ್ವನಿವರ್ಧಕಗಳನ್ನು ರಾತ್ರಿ 10 ರಿಂದ ಬೆಳಗಿನ ಜಾವ 6 ಗಂಟೆಯವರೆಗೆ ಉಪಯೋಗಿಸುವಂತಿಲ್ಲ. ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಪರಿಸರ ಸ್ನೇಹಿ ಪರಿಕರಗಳನ್ನು ಮಾತ್ರ ಬಳಸತಕ್ಕದ್ದು, ಇ.ವಿ.ಎಂ. ಬಗ್ಗೆ ಮತದಾರರಲ್ಲಿ ಮತಗಟ್ಟೆವಾರು ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ. ೪೮ ಗಂಟೆಗಳ ಮುಂಚಿತವಾಗಿ ಸುವಿಧಾ ಪೋರ್ಟತಲ್ ಮುಖಾಂತರ ಅನುಮತಿಗಾಗಿ ಅರ್ಜಿ ಸಲ್ಲಿಸುವುದು. ಮೊದಲನೇ ಹಂತದ ತರಬೇತಿಯನ್ನು ಮಾ.31 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಚುನಾವಣಾಧಿಕಾರಿಗಳ ಕಂಟ್ರೋಲ್ ರೂಮ್ ಸಂಖ್ಯೆ: 08135-200842 ಗೆ ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ತಹಸೀಲ್ದಾರ್ ದತ್ತಾತ್ರೆಯ ಗಾದ ಸೇರಿದಂತೆ ಹಲವರು ಹಾಜರಿದ್ದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ