ಕನ್ನಡಪ್ರಭ ವಾರ್ತೆ ಮಂಡ್ಯ
ಜನಪ್ರತಿನಿಧಿಗಳಾದವರು ಕೇಂದ್ರ ಮತ್ತು ರಾಜ್ಯಸರ್ಕಾರದಿಂದ ಜಿಲ್ಲೆಗೆ ಅಗತ್ಯವಾಗಿ ಬೇಕಾಗಿರುವ ಎಲ್ಲವನ್ನೂ ತರುವಂತಹ ಬದ್ಧತೆ ಬೆಳೆಸಿಕೊಳ್ಳಬೇಕೇ ಹೊರತು, ಇರುವುದನ್ನು ಕಳೆದುಕೊಳ್ಳುವಂತಹ ಸ್ಥಿತಿಗೆ ಮುಂದಾಗಿರುವುದು ದುರಾದೃಷ್ಟಕರ ಸಂಗತಿ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
ಜಿಲ್ಲೆ ಒದಗಿರುವ ವಿಶ್ವವಿದ್ಯಾಲಯವನ್ನು ಮಾಜಿ ಶಾಸಕ ಮರಿತಿಬ್ಬೇಗೌಡ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರಿಗೆ ಮೈಸೂರಿ ವಿವಿಗೆ ವಿಲೀನ ಮಾಡಲು ಒಲವು ತೋರಿರುವಷ್ಟು ಆಸಕ್ತಿಯನ್ನು ಉಳಿಸಿಕೊಳ್ಳುವಲ್ಲಿ ತೋರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಮುಚ್ಚುವ ಆತಂಕ ಬೇಡ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದರೂ, ಮಾಜಿ ಶಾಸಕ ಮರಿತಿಬ್ಬೇಗೌಡ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿಲೀನಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಮೈಸೂರು, ಧಾರವಾಡ, ಬೆಂಗಳೂರು, ಮಂಗಳೂರು ವಿವಿಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ವೇತನ ನೀಡಲು ಕಷ್ಟ ಪಡುತ್ತಿವೆ. ಕೇಂದ್ರ ಸರ್ಕಾರ ಸಹಾಯಕ್ಕೆ ಬರುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಒತ್ತಾಯಿಸಿದ್ದು, ಕಷ್ಟದಲ್ಲಿದೆ ಎಂದು ಎಲ್ಲ ವಿಶ್ವವಿದ್ಯಾಲಯಗಳನ್ನು ಮುಚ್ಚುವುದೇ ಪರಿಹಾರವೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು.
ಹೆಮ್ಮಿಗೆ ಚಂದ್ರಶೇಖರ್, ಅಪ್ಪಾಜಿಗೌಡ, ಅಚ್ಯುತ್, ಆರಾಧ್ಯ ಗೋಷ್ಠಿಯಲ್ಲಿದ್ದರು.