ಬಿಜೆಪಿಯಿಂದ ಧರ್ಮ ರಾಜಕಾರಣ, ಕಾಂಗ್ರೆಸ್‌ನಿಂದ ಧರ್ಮ ಪರಿಪಾಲನೆ: ಪೊನ್ನಣ್ಣ

KannadaprabhaNewsNetwork | Published : Apr 8, 2024 1:04 AM

ಸಾರಾಂಶ

ಧರ್ಮ ಪಾಲನೆ ಮಾಡುತ್ತಿರುವವರು ಕಾಂಗ್ರೆಸ್‌ ಪಕ್ಷ. ಧರ್ಮ ರಾಜಕಾರಣ ಮಾಡುತ್ತಿರುವವರು ಬಿಜೆಪಿ ಪಕ್ಷದವರು ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.

ಕನ್ನಡಪ್ರಭ ವಾರ್ತೆ ಗೋಣಿಕೊಪ್ಪ

ಧರ್ಮ ಪಾಲನೆ ಮಾಡುತ್ತಿರುವವರು ಕಾಂಗ್ರೆಸ್ ಪಕ್ಷ. ಧರ್ಮ ರಾಜಕಾರಣ ಮಾಡುತ್ತಿರುವವರು ಬಿಜೆಪಿ ಪಕ್ಷದವರು ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.

ಗೋಣಿಕೊಪ್ಪ ಕಿತ್ತಳೆ ಬೆಳಗಾರರ ಸಂಘದ ಆವರಣದಲ್ಲಿ ಆಯೋಜಿಸಲಾಗಿದ್ದ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಬೂತ್ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

2014ರಲ್ಲಿ ಮನಮೋಹನ್ ಸಿಂಗ್ ಸರ್ಕಾರ ಅಧಿಕಾರ ತ್ಯಜಿಸುವಾಗ ಭಾರತದ ಸಾಲ 55 ಲಕ್ಷ ಕೋಟಿ ರು. ಇತ್ತು. ಇದೀಗ ಬಿಜೆಪಿ ಸರ್ಕಾರದ 10 ವರ್ಷದ ಅವಧಿಯಲ್ಲಿ ಸಾಲದ ಪ್ರಮಾಣ 188 ಲಕ್ಷ ಕೋಟಿ ರು. ಇದೆ. ಅಂದರೆ ಪ್ರತೀಯೊಬ್ಬ ಪ್ರಜೆಯ ಮೇಲೆ 90000 ರು. ಸಾಲದ ಹೊರೆ ಇದೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಐದು ಗ್ಯಾರಂಟಿ ಭರವಸೆ ಕಾಂಗ್ರೆಸ್ ಪಕ್ಷ ನೀಡಿತ್ತು. ಅಧಿಕಾರಕ್ಕೆ ಬಂದ ನಂತರ ನುಡಿದಂತೆ ಎಲ್ಲ ಗ್ಯಾರೆಂಟಿಗಳನ್ನು ಈಡೇರಿಸಿದ್ದೇವೆ. ಇದು ದೇಶದಲ್ಲಿಯೇ ಪ್ರಥಮ ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪಕ್ಷದ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಬೂತ್ ಸಮಿತಿಯ ಪದಾಧಿಕಾರಿಗಳು ಇದ್ದರು.

---------------------------------

14ರಂದು ಕೊಡಗಿಗೆ ಸಿಎಂ, ಡಿಸಿಎಂ

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ 14ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿಗೆ ಆಗಮಿಸಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ವಿರಾಜಪೇಟೆಯಲ್ಲಿ ನಡೆಯುವ ಚುನಾವಣಾ ಪ್ರಚಾರ ಸಭೆಯಲ್ಲಿ ಕೂಡ ಇಬ್ಬರು ಭಾಗವಹಿಸುತ್ತಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಕಟಣೆ ತಿಳಿಸಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಚುನಾವಣಾ ಪ್ರಚಾರ ಸಭೆ ಆಗಮಿಸುವ ಸಂದರ್ಭ ಕೊಡಗು ಮೈಸೂರು ಲೋಕಸಭೆ ಕ್ಷೇತ್ರ ಅಭ್ಯರ್ಥಿ ಲಕ್ಷ್ಮಣಗೌಡ ಸೇರಿದಂತೆ ಹಲವು ಸಚಿವರು, ಜಿಲ್ಲೆಯ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Share this article