ಸೇಡಿನ ರಾಜಕಾರಣ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

KannadaprabhaNewsNetwork | Published : Apr 17, 2025 12:07 AM

ಸಾರಾಂಶ

ಚಿಕ್ಕಮಗಳೂರು, ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ವನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಆಜಾದ್‌ ಪಾರ್ಕ್‌ ವೃತ್ತದಲ್ಲಿ ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ವನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಆಜಾದ್‌ ಪಾರ್ಕ್‌ ವೃತ್ತದಲ್ಲಿ ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‌ ಷಾ ವಿರುದ್ಧ ಘೋಷಣೆ ಹಾಕಿದರು. ಸೋನಿಯಾಗಾಂಧಿ ಹಾಗೂ ರಾಹುಲ್‌ಗಾಂಧಿ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ಇಡಿ ಆರೋಪ ಪಟ್ಟಿ ಸಲ್ಲಿಸಿರುವ ಹಿಂದೆ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ಕೈವಾಡ ಇದೆ. ಅವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜೇಗೌಡ ಕೇಂದ್ರದಲ್ಲಿ ಬಿಜೆಪಿಗೆ ಸ್ಪಷ್ಟ ವಾದ ಬಹುಮತ ಇಲ್ಲ. ಕೆಲವೇ ದಿನಗಳಲ್ಲಿ ನಿಮ್ಮ ಪಾಪದ ಕೊಡ ತುಂಬಲಿದೆ. ಈ ಸರ್ಕಾರ ಪಥನವಾಗುವುದು ಖಚಿತ ಎಂದು ಹೇಳಿದರು.

ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತಿ, ಬಿಜೆಪಿ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದ ಅವರು, ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದ್ದು, ಆ ಸಂದರ್ಭದಲ್ಲಿ ತಕ್ಕ ಪಾಠ ಕಲಿಸ ಲಾಗುವುದು ಎಂದು ಎಚ್ಚರಿಸಿದರು.

ಬಿಜೆಪಿ ಮುಖಂಡರ ಮನೆಯಲ್ಲಿ ಕೋಟ್ಯಂತರ ರು. ಬೆಂಕಿಗಾಹುತಿಯಾದರೂ ತನಿಖೆ ಕೈಗೊಳ್ಳದ ಇಡಿ ಯವರು ವಿಪಕ್ಷ ನಾಯಕರಾದ ಸೋನಿಯಾಗಾಂಧಿ ಹಾಗೂ ರಾಹುಲ್‌ಗಾಂಧಿಯವರ ಮೇಲೆ ಚಾರ್ಜ್‌ಶೀಟ್ ಸಲ್ಲಿಸಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು.ಅಮಿತ್ ಷಾ ಅವರು ಗುಜರಾತ್‌ನಲ್ಲಿ ನಡೆದ ನರಮೇದದಲ್ಲಿ ಭಾಗಿಯಾಗಿದ್ದಾರೆಂಬ ಕಾರಣಕ್ಕೆ ಜೈಲಿಗೆ ಕಳಿಸಿದ್ದ ಸೇಡನ್ನು ತೀರಿಸಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಕಾಂಗ್ರೆಸ್ ಪಕ್ಷ ತಕ್ಕ ಪಾಠ ಕಲಿಸುತ್ತದೆ ಎಂದು ಹೇಳಿದರು.ದೇಶದ ಸುಭದ್ರತೆ, ಐಕ್ಯತೆಗಾಗಿ 4 ಸಾವಿರ ಕಿಮೀ ಗಳ ಪಾದಯಾತ್ರೆ ನಡೆಸಿದ ರಾಹುಲ್‌ಗಾಂಧಿ ದೇಶದ ಎಲ್ಲಾ ವರ್ಗದ ಬಡವರನ್ನು ಪ್ರೀತಿಯಿಂದ ಕಾಣುವ ಏಕೈಕ ನಾಯಕನಿಗೆ ಚಾರ್ಜ್‌ಶೀಟ್ ಹಾಕುವ ಮೂಲಕ ಅಪಮಾನ ಮಾಡಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆಂದು ಟೀಕಿಸಿದರು.ಪ್ರತಿಭಟನೆಯಲ್ಲಿ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್‌ ಅಹಮದ್, ಸದಸ್ಯರಾದ ರಘು, ಸೋಮ ಶೇಖರ್, ನಗರಸಭೆ ಸದಸ್ಯರಾದ ಮುನೀರ್, ಪರಮೇಶ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಮುಖಂಡರಾದ ಇಂದಾವರ ಲೋಕೇಶ್, ಪ್ರಕಾಶ್, ಸೋಮಶೇಖರ್, ರಾಘವೇಂದ್ರ, ಉಪ್ಪಳ್ಳಿ ಕೆ.ಭರತ್, ರಾಜೇಶ್, ಪುನೀತ್, ಲಕ್ಯಾ ಸಂತೋಷ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. 16 ಕೆಸಿಕೆಎಂ 3ಚಿಕ್ಕಮಗಳೂರಿನ ಆಜಾದ್್‌ ಪಾರ್ಕ್‌ ವೃತ್ತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

Share this article