ಕನ್ನಡಪ್ರಭ ವಾರ್ತೆ ರಾವಂದೂರು
ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಹಿರಿಯ ಪ್ರಾಥಮಿಕ ವಿಭಾಗದ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮತಗಟ್ಟೆ ಕೇಂದ್ರವನ್ನು ಪರಿಶೀಲಿಸಿ ಮತಗಟ್ಟೆಯಲ್ಲಿ ಸೂಕ್ತ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಮತದಾರರಲ್ಲಿ ಹೆಚ್ಚು ಜಾಗೃತಿಯನ್ನು ಮೂಡಿಸಿ ಅತಿ ಹೆಚ್ಚು ಮತದಾನ ನಡೆಯುವಂತೆ ಮತದಾರರಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂದರು.
ಉಪ ತಹಸೀಲ್ದಾರ್ ಕೆ. ಶುಭಾ, ಆರ್.ಐ. ಶ್ರೀಧರ್, ರಾವಂದೂರು ಸೆಕ್ಟರ್ ಅಧಿಕಾರಿ ಚಿತ್ರಶ್ರೀ , ಮುಖ್ಯೋಪಾಧ್ಯಾಯಿನಿ ಲಿಲ್ಲಿ ಮೇರಿ, ಗ್ರಾಮ ಲೆಕ್ಕಾಧಿಕಾರಿ ಕಲ್ಪನಾ ಇದ್ದರು. ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆಮೈಸೂರು ಜಿಲ್ಲಾಡಳಿತ, ಜಿಪಂ, ಮಹಿಳಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬೋಗಾದಿಯ ಪಪಂ ವತಿಯಿಂದ ಗುರುವಾರ ಜಟ್ಟಿಹುಂಡಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಚುನಾವಣೆ ಪರ್ವ ದೇಶದ ಗರ್ವ ಎಂಬ ಶೀರ್ಷಿಕೆಯಡಿ ಕಡ್ಡಾಯವಾಗಿ ಮತದಾನ ಮಾಡುವಂತೆ ಕುಂಭ ಮೇಳದ ಜೊತೆಗೆ ಅರಿವು ಮತ್ತು ಜಾಥಾ ಕಾರ್ಯಕ್ರಮವನ್ನು ಜಿಪಂ ಸಿಇಒ ಕೆ.ಎಂ.ಗಾಯತ್ರಿ ಚಾಲನೆ ನೀಡಿದರು.ಮಹಿಳೆಯರಿಗೆ, ಗ್ರಾಮಸ್ಥರಿಗೆ ಮನೆ ಮನೆಗೆ ತೆರಳಿ ಮತದಾನವನ್ನು ಕಡ್ಡಾಯವಾಗಿ ಮಾಡುವಂತೆ ಕರ ಪತ್ರಗಳನ್ನು ನೀಡುವ ಮೂಲಕ ಅರಿವು ಮೂಡಿಸಿ ಮತ್ತು ಮಾನವ ಸರಪಳಿ ನಿರ್ಮಿಸಿ ಚುನಾವಣಾ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಉಪನಿರ್ದೇಶಕ ಎಚ್.ಆರ್.ಸುರೇಶ್ , ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ, ಮೈಸೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ತಿಬ್ಬಯ್ಯ, ಪಪಂನ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.