ಕನ್ನಡಪ್ರಭ ವಾರ್ತೆ ಚಾಮರಾಜನಗರ
ಗ್ರಾಮದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ವ್ಯವಸ್ಥೆ ಇಲ್ಲ. ಇದರಿಂದ ಓಡಾಡಲು ತೊಂದರೆಯಾಗುತ್ತದೆ. ಅಲ್ಲದೇ ಚರಂಡಿ ಇಲ್ಲದ ಪರಿಣಾಮ ಕಲುಷಿತ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇದೆ. ಜೊತೆಗೆ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಅಲ್ಲದೇ ಮಳೆಗಾಲದಲ್ಲಿ ಗ್ರಾಮವು ಸಂಪೂರ್ಣವಾಗಿ ನೀರಿನಲ್ಲಿ ಮುಳುಗುತ್ತದೆ. ಈ ವೇಳೆ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿದೆ ಎಂದು ದೂರಿದರು.
ಅಲ್ಲದೇ ಗ್ರಾಮಕ್ಕೆ ಸ್ಮಶಾನ ವ್ಯವಸ್ಥೆ ಇಲ್ಲ. ಇದರಿಂದ ಜಮೀನು ಇರುವ ಕುಟುಂಬಗಳು ತಮ್ಮ ಜಮೀನುಗಳಲ್ಲಿ ಅಂತ್ಯಸಂಸ್ಕಾರ ನೆರವೇರಿಸುತ್ತಾರೆ. ಜಮೀನು ಇಲ್ಲದವರು ಬೇರೆ ಜಮೀನುಗಳನ್ನು ಆಶ್ರಯಿಸಬೇಕಿದೆ. ಮಳೆಗಾಲದಲ್ಲಂತೂ ಅಂತ್ಯಸಂಸ್ಕಾರಕ್ಕೆ ತೊಂದರೆಯಾಗುತ್ತದೆ ಎಂದರು.ಸಂತೇಮರಹಳ್ಳಿಮೋಳೆ ಗ್ರಾಮವು ಹೋಬಳಿ ಕೇಂದ್ರವಾಗಿರುವ ಸಂತೆಮರಹಳ್ಳಿಗೆ ಹತ್ತಿರದಲ್ಲಿದೆ. ಕಳೆದ 15 ವರ್ಷಗಳ ಹಿಂದೆ ಸಂತೆಮರಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿದ್ದ ಈ ಗ್ರಾಮವನ್ನು ಈಗ ಕೆಂಪನಪುರ ಗ್ರಾಪಂಗೆ ಸೇರಿಸಿದ್ದು ಗ್ರಾಮಕ್ಕೆ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಆದ್ದರಿಂದ ಈ ಹಿಂದೆ ಇದ್ದಂತೆ ಗ್ರಾಮವನ್ನು ಸಂತೆಮರಹಳ್ಳಿ ಗ್ರಾಮಪಂಚಾಯಿತಿಗೆ ಸೇರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.