ಮೈತ್ರಿ ಅಭ್ಯರ್ಥಿ ರಂಗನಾಥ್ ಪರ ಮತಯಾಚನೆ

KannadaprabhaNewsNetwork | Published : Feb 14, 2024 2:19 AM

ಸಾರಾಂಶ

ಕನಕಪುರ: ಬೆಂಗಳೂರು ವಿಶ್ವವಿದ್ಯಾಲಯದ ಸದಸ್ಯನಾಗಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ಹಲ ಜನಪರ ಹೋರಾಟಗಳಲ್ಲಿ ಪಾಲ್ಗೊಂಡು ಸದಾ ಶಿಕ್ಷಕರ ಪರ ಧ್ವನಿ ಎತ್ತುವ ಮೈತ್ರಿ ಅಭ್ಯರ್ಥಿ ರಂಗನಾಥ್ ಅವರಿಗೆ ಈ ಬಾರಿ ಶಿಕ್ಷಕರು ಬೆಂಬಲ ನೀಡುವಂತೆ ಜೆಡಿಎಸ್ ಯುವ ಮುಖಂಡ ಭರತ್ ಕುಮಾರ್ ಮನವಿ ಮಾಡಿದರು.

ಮೈತ್ರಿ ಅಭ್ಯರ್ಥಿ ಪರ ಹಾರೋಹಳ್ಳಿ, ಮರಳವಾಡಿ ಹೋಬಳಿ ವ್ಯಾಪ್ತಿಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಮೈತ್ರಿ ಅಭ್ಯರ್ಥಿ ರಂಗನಾಥ್ ಅತ್ಯಂತ ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿಯಾಗಿದ್ದು ತಮ್ಮ ವಕೀಲ ವೃತ್ತಿಯ ಜೊತೆಗೆ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಶಿಕ್ಷಕರ ಸಮಸ್ಯೆಗಳಿಗೂ ಸ್ಪಂದಿಸುವಲ್ಲಿ ಸದಾ ಮುಂದಿದ್ದು ಕೊರೋನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಹೋರಾಟ ನಡೆಸಿದ್ದು ಇವರು ಶಿಕ್ಷಕರ ಬಗ್ಗೆ ಇಟ್ಟಿರುವ ಕಾಳಜಿ ತೋರಿಸುತ್ತದೆ ಎಂದರು.

ಇಂದು ರಾಜಕೀಯದಲ್ಲಿ ಕೇವಲ ಬದ್ದತೆ, ಇಚ್ಛಾಶಕ್ತಿಯಿಂದ ಮಾತ್ರ ಏನು ಸಾಧ್ಯವಿಲ್ಲದಿರುವುದರಿಂದ ಅದಕ್ಕೆ ತಕ್ಕಂತೆ ಅಧಿಕಾರ, ಸ್ಥಾನಗಳಿದ್ದರೆ ಹೆಚ್ಚಿನ ಜನಪರ ಹಾಗೂ ಶೈಕ್ಷಣಿಕ ಕೆಲಸಗಳನ್ನು ಮಾಡಲು ಶಕ್ತಿ ಬರುತ್ತದೆ. ಆದ್ದರಿಂದ ಶಿಕ್ಷಕರು ಈ ಬಾರಿ ಮೈತ್ರಿ ಅಭ್ಯರ್ಥಿ ರಂಗನಾಥ್ ಅವರಿಗೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು.

ಈ ವೇಳೆ ಯುವ ಮುಖಂಡರಾದ ಕೊಳ್ಳಿಗಾನಹಳ್ಳಿ ರಾಮು, ನಲ್ಲಹಳ್ಳಿ ಶಿವಕುಮಾರ್, ಶೇಷಾದ್ರಿ, ಜೆಡಿಎಸ್ ಪಕ್ಷದ ರಾಜ್ಯ ಮಹಿಳಾ ಘಟಕದ ರತ್ನಮ್ಮ ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಕೆ ಕೆ ಪಿ ಸುದ್ದಿ 02:

ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ರಂಗನಾಥ್ ಪರ ಜೆಡಿಎಸ್-ಬಿಜೆಪಿ ಮುಖಂಡರು ಮತಯಾಚಿಸಿದರು.

Share this article