ಮತಗಟ್ಟೆ ಅಧಿಕಾರಿಗಳು ಚುನಾವಣಾ ಕರ್ತವ್ಯಕ್ಕೆ ಸಕಾಲಕ್ಕೆ ತೆರಳಿ

KannadaprabhaNewsNetwork |  
Published : Apr 20, 2024, 01:00 AM IST
ಶುಭಾ ಕಲ್ಯಾಣ್ | Kannada Prabha

ಸಾರಾಂಶ

ಲೋಕಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯಕ್ಕೆ ನೇಮಿಸಿರುವ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು 26ರ ಮತದಾನ ದಿನದಂದು ಚುನಾವಣಾ ಕರ್ತವ್ಯಕ್ಕೆ ಸಕಾಲದಲ್ಲಿ ತೆರಳಲು ಅನುಕೂಲವಾಗುವಂತೆ ಆಯಾ ತಾಲೂಕು ಕೇಂದ್ರಸ್ಥಾನದಿಂದ ವಾಹನ ವ್ಯವಸ್ಥೆ ಮಾಡಲಾಗಿದೆ

ಕನ್ನಡಪ್ರಭ ವಾರ್ತೆ ತುಮಕೂರುಲೋಕಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯಕ್ಕೆ ನೇಮಿಸಿರುವ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು 26ರ ಮತದಾನ ದಿನದಂದು ಚುನಾವಣಾ ಕರ್ತವ್ಯಕ್ಕೆ ಸಕಾಲದಲ್ಲಿ ತೆರಳಲು ಅನುಕೂಲವಾಗುವಂತೆ ಆಯಾ ತಾಲೂಕು ಕೇಂದ್ರಸ್ಥಾನದಿಂದ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ. ಚುನಾವಣಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವ ದೃಷ್ಟಿಯಿಂದ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುವ ತಾಲೂಕು ಕೇಂದ್ರದಿಂದ ಅವರನ್ನು ನೇಮಕ ಮಾಡಿದ ವಿಧಾನಸಭಾ ಕ್ಷೇತ್ರಗಳಿಗೆ ತೆರಳಲು 25 ರಂದು ಬೆಳಗ್ಗೆ 6 ಗಂಟೆಗೆ ವಾಹನ ವ್ಯವಸ್ಥೆ ಮಾಡಲಾಗಿದೆ. ನಿಯೋಜಿತ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ನೇಮಕವಾದ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಕರ್ತವ್ಯಕ್ಕೆ ಸಕಾಲಕ್ಕೆ ಹೋಗಲು ತಿಳಿಸಲಾಗಿದೆ. ವಾಹನ ಹೊರಡುವ ಸ್ಥಳಗಳ ವಿವರ:ತುಮಕೂರು ಗ್ರಾಮಾಂತರ : ವಿಜಯನಗರದಲ್ಲಿರುವ ಸರ್ವೋದಯ ಪ್ರೌಢಶಾಲೆ ಹಾಗೂ ಸೋಮೇಶ್ವರ ಬಾಲಕಿಯರ ಪ್ರೌಢಶಾಲೆ; ತುಮಕೂರು ನಗರ : ಬಿ.ಹೆಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು, ಗುಬ್ಬಿ : ಮಾರನಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಿಕ್ಕನಾಯಕನಹಳ್ಳಿ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು, ತಿಪಟೂರು: ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ತುರುವೇಕೆರೆ: ಸರ್ಕಾರಿ ಜೂನಿಯರ್ ಕಾಲೇಜು, ಕುಣಿಗಲ್: ಮಹಾತ್ಮಗಾಂಧಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊರಟಗೆರೆ: ಸರ್ಕಾರಿ ಪದವಿ ಪೂರ್ವ ಕಾಲೇಜು, ಶಿರಾ: ಜ್ಯೋತಿನಗರದ ಸರ್ಕಾರಿ ಪ್ರಥಮ ದರ್ಜೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು, ಪಾವಗಡ: ಸರ್ಕಾರಿ ಪದವಿ ಪೂರ್ವ ಕಾಲೇಜು, ಮಧುಗಿರಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ವಾಹನ ಹೊರಡಲಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ವಾಹನ ಹೊರಡುವ ಸ್ಥಳದಲ್ಲಿ ಹಾಜರಿರಬೇಕು ಎಂದು ಪ್ರಕಟಣೆಗೆ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!