ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಡಿಸೆಂಬರ್ 1 ರಿಂದ ಡಿಸೆಂಬರ್ 31 ರವರೆಗೆ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಲ್ಲಿಕೆಯಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಜನವರಿ 14, 2027ರೊಳಗೆ ವಿಲೇವಾರಿ ಮಾಡಲಾಗುತ್ತದೆ. ಅಂತಿಮವಾಗಿ, ಜನವರಿ 20, 2027 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಆಕ್ಷೇಪಣೆ ಮತ್ತು ಹೆಸರು ತೆಗೆದುಹಾಕಲು, ಈಗಾಗಲೇ ಬೇರೆ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ, ಶಾಶ್ವತವಾಗಿ ಸ್ಥಳಾಂತರಗೊಂಡಿರುವ ಮತ್ತು ಭಾರತದ ಪ್ರಜೆಯಲ್ಲದವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದರೆ ತೆಗೆಯಲು ನಮೂನೆ-7 ರಲ್ಲಿ ಅವಕಾಶ ಕಲ್ಪಿಸಿ ಪರಿಷ್ಕರಿಸಲಾಗಿದೆ. ಇದರ ಜೊತೆಗೆ ಮರಣ ಪ್ರಮಾಣ ಪತ್ರ ಲಗತ್ತಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಸ್ತುತ ನಮೂನೆ-8 ರನ್ವಯ ಮತದಾರರ ಪಟ್ಟಿಯಲ್ಲಿನ ಹೆಸರು, ವಿಳಾಸ ಮತ್ತು ಭಾವಚಿತ್ರಗಳಿಗೆ ಸಂಬಂಧಿಸಿದಂತೆ ತಿದ್ದುಪಡಿ ಜೊತೆಗೆ ಒಂದು ವಿಧಾನ ಸಭೆ ಕ್ಷೇತ್ರದಿಂದ ಮತ್ತೊಂದು ವಿಧಾನ ಸಭೆ ಕ್ಷೇತ್ರಕ್ಕೆ ಮತದಾರರ ವರ್ಗಾವಣೆ, ಒಂದು ವಿಧಾನ ಸಭೆ ಕ್ಷೇತ್ರದಲ್ಲಿನ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ವರ್ಗಾವಣೆ, ಬದಲಿ ಎಪಿಕ್ಗಳಿಗಾಗಿ ಮನವಿ ಮತ್ತು ಅಂಗವೈಪಲ್ಯ ಹೊಂದಿರುವ ಮತದಾರರ ತಮ್ಮ ಅಂಗ ವೈಕಲ್ಯ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
ನಮೂನೆ-6ರಲ್ಲಿನ ಮಾಹಿತಿ ದೃಢೀಕರಿಸಲು ಆನ್ ಲೈನ್ ಮತ್ತು ಆಫ್ಘನ್ ಎರಡರಲ್ಲೂ ಅವಕಾಶವಿದೆ. ಆನ್ ಲೈನ್ ವ್ಯವಸ್ಥೆಯಡಿ ಎನ್ವಿಎಸ್ಪಿ ಮತ್ತು ವೋಟರ್ ಹೆಲ್ಪಲೈನ್ ಆ್ಯಪ್ನಲ್ಲಿ ಮತದಾರರು ಮಾಹಿತಿ ದೃಢೀಕರಿಸಲು ಅವಕಾಶವಿದೆ, ಆಧಾರ್ ಸ್ವಯಂ ದೃಢೀಕರಣಕ್ಕೆ, ಆಧಾರ್ ಜೋಡಣೆಯಾಗಿರುವ ಮೊಬೈಲ್ಗೆ ಸ್ವೀಕೃತವಾಗುವ ಒಟಿಪಿ ಸೌಲಭ್ಯ ಒದಗಿಸಿದೆ. ಒಟಿಪಿ ಸೌಲಭ್ಯ ಸಹಿತ ದೃಢೀಕರಣ ಸಾಧ್ಯವಾಗದಿದ್ದಲ್ಲಿ ಮತದಾರರು ಆಧಾರ್ ಅನ್ನು ಮೇಲಿನ ಆ್ಯಪ್ಗಳಲ್ಲಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಮಾಹಿತಿ ನೀಡಿದರು.ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್ಐಆರ್ ಪ್ರಕ್ರಿಯೆ ಮುಕ್ತಾಯವಾಗಿದ್ದು ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ 3,95,473 ಪುರುಷ ಮತದಾರರು, 4,09,001 ಮಹಿಳಾ ಮತದಾರರು ಹಾಗೂ 60 ಇತರೆ ಮತದಾರರು ಸೇರಿದಂತೆ ಒಟ್ಟಾರೆ ಜಿಲ್ಲೆಯಲ್ಲಿ 8,04,534 ಮತದಾರರಿದ್ದಾರೆ.
1. ಹೊಸಕೋಟೆ ವಿಧಾನಸಭಾ ಕ್ಷೇತ್ರ- 1,08,430 ಪುರುಷರು, 1,11,757 ಮಹಿಳೆಯರು ಹಾಗೂ 4 ಇತರೆ ಮತದಾರರು
2. ದೇವನಹಳ್ಳಿ ವಿಧಾನಸಭಾ ಕ್ಷೇತ್ರ- 97,048 ಪುರುಷರು, 99,918 ಮಹಿಳೆಯರು ಹಾಗೂ 11 ಇತರೆ ಮತದಾರರು
3. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ- 95,589 ಪುರುಷರು, 98,740 ಮಹಿಳೆಯರು ಹಾಗೂ 1 ಇತರೆ
4. ನೆಲಮಂಗಲ ವಿಧಾನಸಭಾ ಕ್ಷೇತ್ರ - 94,406 ಪುರುಷರು, 98,586 ಮಹಿಳೆಯರು ಹಾಗೂ 44 ಇತರೆ ಮತದಾರರು
1) 18-19 ವರ್ಷ ವಯಸ್ಸಿನ 14,568 ಮತದಾರರಿದ್ದಾರೆ, 8,604 ಮಂದಿ 85 ವರ್ಷಕ್ಕೂ ಮೇಲ್ಪಟ್ಟ ಮತದಾರರಿದ್ದಾರೆ.
3) ಜಿಲ್ಲೆಯಲ್ಲಿ ಮತದಾರರ ಲಿಂಗಾನುಪಾತದಲ್ಲಿ ಮಹಿಳಾ ಮತದಾರರೇ ಹೆಚ್ಚಾಗಿದ್ದಾರೆ. 3,95,473 ಪುರುಷ ಮತದಾರರಿದ್ದು, 4,09,061 ಮಹಿಳಾ ಮತದಾರರಿದ್ದಾರೆ. ಜನಸಂಖ್ಯೆಗನುಗುಣವಾಗಿ 1034 ಲಿಂಗಾನುಪಾತ ಇದೆ.